ISRO ಕಚೇರಿ ಬೆಂಗಳೂರಿಗೆ ಬಂದಿದ್ದರ ಹಿಂದೆ ಇದೆ ರೋಚಕ ಕಥೆ


Team Udayavani, Aug 25, 2023, 6:35 AM IST

1-wewqe

ಚಂದ್ರಯಾನ -3ರಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಭಾರತದ ಹೆಮ್ಮೆ, ಇಸ್ರೋ ಕೇಂದ್ರ ಕಚೇರಿ ಬೆಂಗಳೂರಿಗೆ ಬಂದಿದ್ದರ ಹಿಂದೆ ರೋಚಕ ಕಥೆ ಇದೆ. ವಿಶೇಷವೆಂದರೆ, ಇದು ಬರಲು ಪ್ರಮುಖ ಕಾರಣ ಸತೀಶ್‌ ಧವನ್‌! ಇವರ ಪಟ್ಟಿನಿಂದಾಗಿಯೇ ಇಸ್ರೋ ಕೇಂದ್ರ ಕಚೇರಿಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಯಿತು.

1962ರಲ್ಲಿ ವಿಕ್ರಮ್‌ ಸಾರಾಭಾಯಿ ಅವರು, ಭಾರತಕ್ಕೂ ಒಂದು ಬಾಹ್ಯಾಕಾಶ ಸಂಶೋಧನಾ ಕೇಂದ್ರ ಇರಬೇಕು ಎಂಬ ಪ್ರಸ್ತಾಪ ಮುಂದಿಟ್ಟು, ಆಗಿನಿಂದಲೇ ಪ್ರಯತ್ನ ಆರಂಭಿಸಿದ್ದರು. ಆದರೆ, 1969ರಲ್ಲಿ ಇಂಡಿಯನ್‌ ಸ್ಪೇಸ್‌ ರಿಸರ್ಚ್‌ ಆರ್ಗನೈಸೇಷನ್‌(ಇಸ್ರೋ) ಜನ್ಮತಾಳಿತು. ಉಡಾವಣಾ ಕೇಂದ್ರ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಸ್ಥಾಪನೆಯಾಯಿತು. ಇಸ್ರೋ ಪ್ರಮುಖ ಕೇಂದ್ರ ಬೆಂಗಳೂರಿಗೆ ಬಂದಿತು.

ಸತೀಶ್‌ ಧವನ್‌ ಅವರು ಹುಟ್ಟಿದ್ದು, ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ. ಆದರೆ, ಬೆಳೆದಿದ್ದು ಮಾತ್ರ ಈಗ ಪಾಕಿಸ್ತಾನದಲ್ಲಿರುವ ಲಾಹೋರ್‌ನಲ್ಲಿ. 1951ರಲ್ಲಿ ಭಾರತಕ್ಕೆ ಬಂದ ಸತೀಶ್‌ ಧವನ್‌ ಅವರು, ತಮ್ಮ ನೆಲೆಯನ್ನು ಬೆಂಗಳೂರಿಗೆ ವರ್ಗಾಯಿಸಿಕೊಂಡರು. ಇಲ್ಲಿ ಭಾರತೀಯ ವಿಜ್ಞಾನ ಮಂದಿರ(ಐಐಎಸ್ಸಿ)ದಲ್ಲಿ ಹಿರಿಯ ವಿಜ್ಞಾನ ಅಧಿಕಾರಿಯಾಗಿ ಸೇವೆ ಶುರು ಮಾಡಿದರು. ಅಷ್ಟೇ ಅಲ್ಲ, ತಮ್ಮ 42ನೇ ವಯಸ್ಸಿನಲ್ಲೇ ಐಐಎಸ್‌ಸಿಯ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೇ ಹುದ್ದೆಯಲ್ಲಿ 17 ವರ್ಷಗಳ ಕಾಲ ಇದ್ದರು. ಇವರು ಇರುವ ಅಷ್ಟೂ ದಿನ ಐಐಎಸ್‌ಸಿಯಲ್ಲಿ ಹೊಸ ಹೊಸ ಪ್ರಯೋಗಗಳಾದವು. ಪಾಠ ಮಾಡುವ ಸಲುವಾಗಿ ದೇಶ ವಿದೇಶಗಳಿಂದ ಖ್ಯಾತ ವಿಜ್ಞಾನಿಗಳು ಬರುತ್ತಿದ್ದರು.

ಆದರೆ, 1971ರ ಡಿ.30ರಂದು ವಿಕ್ರಮ್‌ ಸಾರಾಭಾಯಿ ಅವರು ತಮ್ಮ 52ನೇ ವಯಸ್ಸಿನಲ್ಲಿ ಕಾರ್ಡಿಯಾಕ್‌ ಅರೆಸ್ಟ್‌ನಿಂದಾಗಿ ಅಕಾಲಿಕ ಮರಣ ಹೊಂದಿದರು. ಇದು ಭಾರತಕ್ಕೆ ಆದ ದೊಡ್ಡ ಹೊಡೆತವಾಯಿತು. ಇವರ ಸಾವಿನ ನಂತರ, ಇಸ್ರೋ ಮುನ್ನಡೆಸಲು ವಿಜ್ಞಾನಿಯ ಹುಡುಕಾಟದಲ್ಲಿದ್ದಾಗ, ಆಗಿನ ಪ್ರಧಾನಿ ಇಂದಿರಾ ಗಾಂಧಿಯವರಿಗೆ ಕಾಣಿಸಿದ್ದು ಸತೀಶ್‌ ಧವನ್‌. ಆಗ ಅವರು ಬೆಂಗಳೂರಿನ ಐಐಎಸ್‌ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಸತೀಶ್‌ ಧವನ್‌ ಅವರನ್ನು ಸಂಪರ್ಕಿಸಿದ ಇಂದಿರಾ ಗಾಂಧಿಯವರು, ಇಸ್ರೋ ಹೊಣೆ ವಹಿಸಿಕೊಳ್ಳುವಂತೆ ಮನವಿ ಮಾಡಿದ್ದರು. ಆಗ ಸತೀಶ್‌ ಧವನ್‌ ಎರಡು ಷರತ್ತು ಹಾಕಿದ್ದರು. ಮೊದಲನೆಯದು, ಇಸ್ರೋ ಮುಖ್ಯ ಕಚೇರಿ ಬೆಂಗಳೂರಿನಲ್ಲೇ ಆಗಬೇಕು. ಎರಡನೆಯದು, ಐಐಎಸ್‌ಸಿಯಲ್ಲಿಯೂ ತಾವು ಕೆಲಸ ಮುಂದುವರಿಸಲು ಅವಕಾಶ ನೀಡಬೇಕು. ಈ ಎರಡೂ ಷರತ್ತುಗಳಿಗೂ ಇಂದಿರಾ ಗಾಂಧಿಯವರು ಒಪ್ಪಿಗೆ ನೀಡಿದರು. ಬೆಂಗಳೂರಿಗೆ ಇಸ್ರೋ ಕೇಂದ್ರ ಕಚೇರಿ ಬೇಕು ಎಂದು ಧವನ್‌ ಅವರು ಕೇಳಿದ್ದರ ಹಿಂದೆ ಕಾರಣಗಳೂ ಇದ್ದವು. 1940ರಲ್ಲೇ ಬೆಂಗಳೂರಿನಲ್ಲಿ ಎಚ್‌ಎಎಲ್‌ ಮತ್ತು 1942ರಲ್ಲಿ ಐಐಎಸ್‌ಸಿ ಆರಂಭವಾಗಿತ್ತು. ವಿಜ್ಞಾನ ಸಂಬಂಧಿ ಕೆಲಸಗಳು ಇಲ್ಲೇ ಆಗಲಿ ಎಂಬುದು ಅವರ ಆಶಯವಾಗಿತ್ತು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.