Social Justice; ಸಾಕಾರಗೊಳ್ಳಲಿ ಸಾಮಾಜಿಕ ನ್ಯಾಯದ ಕನಸು
Team Udayavani, Feb 20, 2024, 6:10 AM IST
ಜನತೆಯ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅತ್ಯವಶ್ಯ. ಸಾಮಾಜಿಕ ಅಸಮಾನತೆಯನ್ನು ತೊಡೆದುಹಾಕುವ ಪ್ರಯತ್ನಗಳಿಗೆ ಉತ್ತೇಜನ ನೀಡಿ, ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಆಶಯದಿಂದ ವಿಶ್ವಸಂಸ್ಥೆಯು 2009ರಲ್ಲಿ ಪ್ರತೀ ವರ್ಷ ಫೆಬ್ರವರಿ 20ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸುವ ನಿರ್ಧಾರವನ್ನು ಕೈಗೊಂಡಿತು.
ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ
ಉದ್ಯೋಗ, ಸಾಮಾಜಿಕ ರಕ್ಷಣೆ, ಸಾಮಾಜಿಕ ಸಂವಾದ ಮತ್ತು ಮೂಲಭೂತ ತತ್ತÌಗಳು ಹಾಗೂ ಕೆಲಸದಲ್ಲಿ ಹಕ್ಕುಗಳ ಮೂಲಕ ಎಲ್ಲರಿಗೂ ನ್ಯಾಯಯುತ ಫಲಿತಾಂಶಗಳನ್ನು ಈ ಆಚರಣೆ ಖಾತರಿಪಡಿಸುತ್ತದೆ. ಪ್ರತೀ ಸಮಾಜದಲ್ಲಿಯೂ ಏಕತೆ, ಸಾಮರಸ್ಯ, ಸೌಹಾರ್ದತೆ, ಮಾನವ ಹಕ್ಕುಗಳ ನ್ಯಾಯವಿದ್ದರೆ ಅಭಿವೃದ್ಧಿ ಸುಲಭ ಸಾಧ್ಯ.
ಜಾಗತಿಕ ಒಗ್ಗಟ್ಟು ಅಗತ್ಯ
ಜಗತ್ತಿನಾದ್ಯಂತ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ದೇಶದ ಪ್ರಜೆಗಳಿಗೆ ಉದ್ಯೋಗ, ಶಿಕ್ಷಣ, ಆರ್ಥಿಕ, ರಾಜಕೀಯ ಅವಕಾಶಗಳು ಜಾತಿ-ಮತ ಭೇದಗಳಿಲ್ಲದೆ ಸಮಾನವಾಗಿ ಹಂಚಿಕೆಯಾಗಬೇಕು. ಅವಕಾಶ ವಂಚಿತರನ್ನು, ಅಂಚಿಗೆ ತಳ್ಳಲ್ಪಟ್ಟವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಇನ್ನಷ್ಟು ಹೆಚ್ಚಿನ ಪ್ರಯತ್ನಗಳಾಗಬೇಕು. ಜಾಗತಿಕ ಒಗ್ಗಟ್ಟಿನ ಶಕ್ತಿಯನ್ನು ಎತ್ತಿ ಹಿಡಿಯುವುದೇ ವಿಶ್ವ ಸಾಮಾಜಿಕ ನ್ಯಾಯ ದಿನದ ಮೂಲ ಧ್ಯೇಯವಾಗಿದೆ.
ಪರಸ್ಪರ ಸಹಕಾರ
ಸುಸ್ಥಿರ ಅಭಿವೃದ್ಧಿ, ಬಡತನ ನಿರ್ಮೂಲನೆ, ಉದ್ಯೋಗ, ಸಾಮಾಜಿಕ ಭದ್ರತೆ, ಲಿಂಗ ಸಮಾನತೆ ಮತ್ತು ಸಾಮಾಜಿಕ ಸಮಾನತೆಯ ಎಲ್ಲ ಹಕ್ಕುಗಳನ್ನು ಪಡೆಯುವ ಅವಕಾಶವನ್ನು ಕಲ್ಪಿಸುವುದು ವಿಶ್ವದ ಮುಂದಿರುವ ಬಹುಮುಖ್ಯ ಸವಾಲಾಗಿದೆ. ಈ ಸವಾಲನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲ ರಾಷ್ಟ್ರಗಳು ಪರಸ್ಪರ ಕೈಜೋಡಿಸಿ ಶ್ರಮಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ
Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.