ಮ್ಯಾನ್ ಆಫ್ ದಿ ಮ್ಯಾಚ್ ಗೋಸ್ ಟು…
Team Udayavani, May 25, 2019, 5:00 AM IST
ಪ್ರಧಾನಿ ನರೇಂದ್ರ ಮೋದಿ ಭಾರತದ ಜನಮೆಚ್ಚಿದ ನಾಯಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಆ ವೈಯಕ್ತಿಕ ವರ್ಚಸ್ಸು ಹಾಗೂ ಜನಪ್ರಿಯತೆಯನ್ನು ರಾಜಕೀಯ ಜಯಭೇರಿಯಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದ್ದು ಕಾರ್ಯತಂತ್ರ ನಿಪುಣ ಅಮಿತ್ ಶಾ. ಬಿಜೆಪಿಯ ಅಮೋಘ ಗೆಲುವಿನ ಹಿಂದೆ ಅಮಿತ್ ಶಾ ರೂಪಿಸಿದ ತಂತ್ರಗಾರಿಕೆಯೇ ಪ್ರಮುಖ ಪಾತ್ರ ವಹಿಸಿದೆ ಎನ್ನುವುದು ಸತ್ಯ.
2014ರ ಲೋಕಸಭಾ ಚುನಾವಣೆಯಲ್ಲಿ ಯಶಸ್ಸು ಗಳಿಸಿದ ಸಂದರ್ಭದಲ್ಲಿ ಮೋದಿಯವರಿಂದಲೇ “ಮ್ಯಾನ್ ಆಫ್ ದಿ ಮ್ಯಾಚ್’ ಎಂದು ಹೊಗಳಿಸಿಕೊಂಡಿದ್ದ ಶಾ ಅವರು ಸಂಭ್ರಮಾಚರಣೆಯ ಮನಸ್ಥಿತಿಯಲ್ಲಿರಲಿಲ್ಲ. ಅವರ ದೃಷ್ಟಿ ಆಗಲೇ 2019ರ ಲೋಕಸಭಾ ಚುನಾವಣೆಯ ಮೇಲೆ ಹರಿದಾಗಿತ್ತು¤. ಉತ್ತರ, ಪಶ್ಚಿಮ ಮತ್ತು ಮಧ್ಯಭಾಗದ ರಾಜ್ಯಗಳಲ್ಲಿ ಬಿಜೆಪಿ ಸಾಕಷ್ಟು ಸೀಟುಗಳನ್ನು ಪಡೆದುಕೊಳ್ಳಲು ಕಷ್ಟವಾಗಬಹುದು ಎನ್ನುವುದನ್ನು ಮೊದಲೇ ಊಹಿಸಿದ್ದ ಅಮಿತ್ ಶಾ, ಈ ಕೊರತೆಯನ್ನು ಮಿಕ್ಕ ರಾಜ್ಯಗಳಲ್ಲಿ ಸರಿದೂಗಿಸಲು ಮುಂದಾಗಿದ್ದು ಅವರ ದೂರಾಲೋಚನೆಗೆ ಕೈಗನ್ನಡಿ.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆಯ ಹೊರತಾಗಿಯೂ ಬಿಜೆಪಿ ಕಳೆದುಕೊಂಡಿದ್ದ 120 ಸೀಟುಗಳನ್ನು ವಶಪಡಿಸಿಕೊಳ್ಳಬೇಕೆನ್ನುವುದು ಶಾ ಅವರ ಒತ್ತಾಸೆಯಾಗಿತ್ತು. ಕಡೆಗೆ ಬಿಜೆಪಿ 120ರಲ್ಲಿ 80 ಕ್ಷೇತ್ರಗಳತ್ತ ಗಮನ ಕೇಂದ್ರೀಕರಿಸಿತ್ತು. ಅದರಲ್ಲಿ ಅರ್ಧದಷ್ಟು ಕ್ಷೇತ್ರಗಳನ್ನು ಈ ಬಾರಿ ಬಿಜೆಪಿ ಗೆದ್ದುಕೊಂಡಿದೆ. ಪಶ್ಚಿಮ ಬಂಗಾಳ, ಒಡಿಶಾ, ಕೇರಳ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಮತದಾರರನ್ನು ಸೆಳೆಯಲು ನಡೆಸಿದ ಪ್ರಯತ್ನ ಒಂದೆರಡಲ್ಲ. ಮಮತಾ ಬ್ಯಾನರ್ಜಿಯ ಭದ್ರಕೋಟೆ ಪಶ್ಚಿಮ ಬಂಗಾಳಕ್ಕೆ ಶಾ 88 ಬಾರಿ ಭೇಟಿ ನೀಡಿದ್ದು ಅದಕ್ಕೊಂದು ಉದಾಹರಣೆ.
ಹಾಗೆಂದು ಬಿಜೆಪಿ ಪ್ರಾಬಲ್ಯವಿರುವ ರಾಜ್ಯಗಳನ್ನು ಎಂದಿಗೂ ಅವರು ಕಡೆಗಣಿಸಲಿಲ್ಲ. ಇತರೆ ಪಕ್ಷಗಳ ಜೊತೆ ಕೈಜೋಡಿಸುವ ಸಂದರ್ಭ ಬಂದಾಗಲೆಲ್ಲಾ ಚಾಣಾಕ್ಷತನ ಮೆರೆದಿದ್ದಾರೆ. ಶಿವಸೇನೆ ಅಥವಾ ನಿತೀಶ್ ಕುಮಾರ್ ಜತೆಗಿದ್ದ ವೈಮನಸ್ಯ ದೂರ ಮಾಡಿಕೊಂಡಿದ್ದಿರಬಹುದು. ಅವೆಲ್ಲವುಗಳ ಪರಿಣಾಮ ಈ ಬಾರಿಯ ಫಲಿತಾಂಶದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಅಮಿತ್ ಶಾ ಅವರು ಚುನಾವಣೆಯ ಸಮಯದಲ್ಲಿ ಒಟ್ಟು 1.50 ಲಕ್ಷ ಕಿ.ಮೀ. ಸಂಚರಿಸಿದ್ದು, 161 ಸಾರ್ವಜನಿಕ ರ್ಯಾಲಿಗಳನ್ನು ನಡೆಸಿದ್ದಾರಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.