Medical; ವೈದ್ಯರಿಗೆ ನಿರಂತರ ಕಲಿಕೆ ಅಗತ್ಯ

Team Udayavani, Dec 7, 2024, 6:45 AM IST

doctor

“ಜಗ ಬೆಳೆದು ಚಿಗುರುತಿರೆ ಶಾಸ್ತ್ರ ಕರಟಿರಲಹುದೆ ನಿಗಮ ಸಂತತಿಗೆ ಸಂತತಿಯಾಗದಿಹುದೆ’ ಎನ್ನುವ ಡಿ.ವಿ.ಜಿ. ಅವರ ಮಾತು ಬದುಕಿನ ಎಲ್ಲ ಕ್ಷೇತ್ರಗಳಿಗೂ ಮಾರ್ಗದರ್ಶನ ಮಾಡಬಲ್ಲದು. ವೃತ್ತಿ, ಪ್ರವೃತ್ತಿಗಳಲ್ಲಿ ನಾವು ನಿರಂತರ ಕಲಿಕೆ ಮುಂದುವರಿಸುತ್ತಲೇ ಇರಬೇಕು ಎನ್ನುವುದರಲ್ಲಿ ಅನುಮಾನವೇ ಇಲ್ಲ.

ಕಲಿಕೆ ಎಂದರೆ ಅಧ್ಯಯನ, ಅಧ್ಯಾಪನ ಎರಡೂ ಸೇರಿಕೊಳ್ಳುತ್ತವೆ. ವೈದ್ಯಕೀಯಕ್ಕೆ ಸಂಬಂಧಿಸಿ ಹೇಳುವುದಾದರೆ ಈ ಸೂತ್ರವನ್ನು ಅತ್ಯಂತ ಕಟ್ಟುನಿಟ್ಟಾಗಿ ಆಚರಿಸಬೇಕಾಗುತ್ತದೆ. ಹೊಸ ಹೊಸ ಆವಿಷ್ಕಾರಗಳು, ಬೆಳವಣಿಗೆಗಳು ನಡೆಯುತ್ತಿರುವಾಗ ವೈದ್ಯಕೀಯದಲ್ಲಿ ನಮ್ಮ ತಿಳಿವಳಿಕೆಯನ್ನು ಸಕಾಲಿಕಾ ಮಟ್ಟಕ್ಕೆ ಏರಿಸಿಕೊಳ್ಳಬೇಕಾದದ್ದು ಅತ್ಯಂತ ಅಗತ್ಯ. ಆದ್ದರಿಂದಲೇ ವೈದ್ಯಕೀಯ ಕ್ಷೇತ್ರದಲ್ಲಿ ಸಿ.ಎಂ.ಇ ಎಂದರೆ ಕಂಟಿನ್ಯೂಡ್‌ ಮೆಡಿಕಲ್‌ ಎಜುಕೇಶನ್‌ ಈಗಾಗಲೇ ಅಸ್ತಿತ್ವದಲ್ಲಿದೆ. ಈ ನಿರಂತರ ಕಲಿಕೆ ಇನ್ನೂ ಒಂದು ಸುಲಭವಾದ ದಾರಿಯನ್ನು ಅನುಸರಿಸಬಹುದು.
ಪ್ರತಿಯೊಬ್ಬ ಕುಟುಂಬ ವೈದ್ಯರಿಗೆ ಅವರ ಸಮೀಪವಿರುವ ಅಥವಾ ಅವರು ಬಯಸುವ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ಮುಕ್ತ ಪ್ರವೇಶಕ್ಕೆ ಅವಕಾಶ ಬೇಕು. ಎಂದರೆ ಪೂರ್ವಭಾವಿ ಅನುಮತಿಯನ್ನು ಪಡೆದುಕೊಂಡು ದಿನದ 24 ಗಂಟೆಗಳಲ್ಲಿ ಯಾವುದೇ ಹೊತ್ತಿನಲ್ಲಿ ಆದರೂ ಆ ಆಸ್ಪತ್ರೆಗೆ ಹೋಗಿ ತಾನು ಬಯಸುವಷ್ಟು ಕಾಲ ಅಲ್ಲಿ ಇದ್ದು ಅಲ್ಲಿಯ ಎಲ್ಲ ಆಗುಹೋಗುಗಳನ್ನು ವಿವಿಧ ವಿಭಾಗಗಳಲ್ಲಿ ನೋಡುವುದಕ್ಕೆ ಅವಕಾಶ ಇರಬೇಕು.

ಕೇಸ್‌ ಶೀಟ್‌ಗಳನ್ನು ಓದುವುದಕ್ಕೆ ಅನುಮತಿ ಪಡೆದು ರೋಗಿಗಳನ್ನು ಪರೀಕ್ಷಿಸುವುದಕ್ಕೆ ಶಸ್ತ್ರಚಿಕಿತ್ಸೆಯಂತಹ ವಿಶೇಷ ಚಿಕಿತ್ಸಾ ವಿಭಾಗಗಳನ್ನು ಸಂದರ್ಶಿಸುವುದಕ್ಕೆ ಅನುಮತಿ ಇರಬೇಕು. ಆದರೆ ಯಾವುದೇ ಚಿಕಿತ್ಸೆಯಲ್ಲೂ ಪ್ರತ್ಯಕ್ಷ ಕೈ ಹಾಕುವ ಅಧಿಕಾರ ಇರಬೇಕಾಗಿಲ್ಲ. ಸಾಮಾನ್ಯವಾಗಿ ಕುಟುಂಬ ವೈದ್ಯರು ತಮ್ಮ ಸಂಪರ್ಕಕ್ಕೆ ಬಂದ ರೋಗಿಗಳಲ್ಲಿ ಅಗತ್ಯ ಇರುವವರಿಗೆ, ಉನ್ನತ ಶ್ರೇಣಿಯ ಆಸ್ಪತ್ರೆಗಳಿಗೆ ಕಳುಹಿಸಿ ಕೊಡುವ ಕ್ರಮವಿದೆ. ತಾವೇ ಕಳುಹಿಸಿ ಕೊಟ್ಟ ರೋಗಿಗಳು ಅಲ್ಲಿ ಒಳರೋಗಿಗಳಾಗಿ ಮಲಗಿದ್ದರೆ ಅವರನ್ನು ನೋಡಿ ಯೋಗಕ್ಷೇಮವನ್ನು ವಿಚಾರಿಸುವ ಅವಕಾಶವೂ ಕಳುಹಿಸಿದ ವೈದ್ಯರಿಗೆ ಇರಬೇಕು. ಹೀಗೆ ನಿರಂತರ ಸಂಪರ್ಕವನ್ನು ಉಳಿಸಿಕೊಳ್ಳುವುದರಿಂದ ಸುಲಭವಾಗಿ ಕಲಿಕೆಯನ್ನು ಆಗಾಗ ಊರ್ಜಿತಗೊಳಿಸಿಕೊಳ್ಳುವುದಕ್ಕೆ ವೈದ್ಯರಿಗೆ ಸಾಧ್ಯವಾಗಬಹುದು. ಇದಕ್ಕೆ ನಿರ್ದಿಷ್ಟವಾದ ಇತರ ನಿರ್ಬಂಧವೇನು ಬೇಕಾಗಿಲ್ಲ. ಈಗಾಗಲೇ ಕೆಲವು ಆಸ್ಪತ್ರೆಗಳಲ್ಲಿ ಇದು ಆಚರಣೆಯಲ್ಲಿದ್ದರೆ ಮುಂದುವರಿಸಬಹುದು. ಇಲ್ಲದೆ ಇದ್ದರೆ ಇದನ್ನು ಅಳವಡಿಸುವುದು ಉಚಿತ.

ಡಾ| ರಮಾನಂದ ಬನಾರಿ, ಮಂಜೇಶ್ವರ

ಟಾಪ್ ನ್ಯೂಸ್

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Trump-Maga

Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.