ಹೃದಯ ಶ್ರೀಮಂತಿಕೆ : ಪತ್ನಿಯ ಆಭರಣ ಮಾರಾಟ ಮಾಡಿ ಉಚಿತ ಆಕ್ಸಿಜನ್ ನೀಡುತ್ತಿರುವ ವ್ಯಕ್ತಿ
Team Udayavani, May 1, 2021, 8:09 AM IST
ಮುಂಬೈ : ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಆಕ್ಸಿಜನ್ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದೆ. ದಿನೇ ದಿನೇ ಅದೆಷ್ಟೋ ಜನ ಆಕ್ಸಿಜನ್ ಇಲ್ಲದೇ ಸಾವನ್ನಪ್ಪುತ್ತಿದ್ದಾರೆ. ಆಸ್ಪತ್ರೆಗಳು ಕೂಡ ಆಕ್ಸಿಜನ್ ಕೊರತೆಯನ್ನು ಹೆದರಿಸುತ್ತಿವೆ. ಇಂತಹ ಸಂದರ್ಭದಲ್ಲಿ ಮುಂಬೈನ ಒಬ್ಬ ವ್ಯಕ್ತಿ ತನ್ನ ಹೆಂಡತಿಯ ಚಿನ್ನಾಭರಣಗಳನ್ನೇ ಮಾರಾಟ ಮಾಡಿ ಉಚಿತವಾಗಿ ಆಕ್ಸಿಜನ್ ವಿತರಣೆ ಮಾಡುತ್ತಿದ್ದಾರೆ.
ಹೌದು ಮುಂಬೈನ ಪ್ಯಾಸ್ಕಲ್ ಸಲ್ಧಾನಾ ಎಂಬುವವರು ಆಕ್ಸಿಜನ್ ಅವಶ್ಯಕತೆ ಇರುವವರಿಗೆ ಉಚಿತವಾಗಿ ಆಮ್ಲಜನಕವನ್ನು ನೀಡುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಪತ್ನಿ ಕಳೆದ ಐದು ವರ್ಷಗಳಿಂದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರಿಗೆ ಡಯಾಲಿಸಿಸ್ ಇದೆ. ಈ ಕಾರಣದಿಂದ ನಮ್ಮ ಮನೆಯಲ್ಲಿ ಯಾವಾಗಲೂ ಆಕ್ಸಿಜನ್ ಸಿಲಿಂಡರ್ ಗಳು ಇರುತ್ತವೆ ಎಂದಿದ್ದಾರೆ.
ಒಮ್ಮೆ ನಮ್ಮ ಪ್ರದೇಶದ ಕಾಲೇಜಿನ ಪ್ರಾಂಶುಪಾಲರು ಕರೆ ಮಾಡಿ ನನ್ನ ಪತಿಗೆ ಆಕ್ಸಿಜನ್ ಅವಶ್ಯಕತೆ ಇದೆ ಎಂದಾಗ ಅವರಿಗೆ ನಾನು ತಕ್ಷಣ ಪೂರೈಕೆ ಮಾಡಿದೆ ಎಂದು ಪ್ಯಾಸ್ಕಲ್ ಸಲ್ಧಾನಾ ತಿಳಿಸಿದ್ದಾರೆ.
ಉಚಿತ ಆಕ್ಸಿಜನ್ ನೀಡಲು ಪ್ಯಾಸ್ಕಲ್ ಸಲ್ಧಾನಾ ಪತ್ನಿ ಒತ್ತಾಯ ಮಾಡಿದ್ದಾರಂತೆ. ಅಲ್ಲದೆ ಆಭರಣಗಳನ್ನು ಮಾರಾಟ ಮಾಡಿ ಆಮ್ಲಜನಕವನ್ನು ಪೂರೈಕೆ ಮಾಡಿ ಎಂದೂ ಹೇಳಿದ್ದರಂತೆ. ಇದೇ ಕಾರಣಕ್ಕೆ ಚಿನ್ನವನ್ನು ಮಾರಿ ಅದರಿಂದ ಬಂದ 80,000 ರೂ. ನಲ್ಲಿ ಉಚಿತವಾಗಿ ಆಮ್ಲಜನಕ ನೀಡುತ್ತಿದ್ದೇವೆ ಎಂದು ಪ್ಯಾಸ್ಕಲ್ ಸಲ್ಧಾನಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.