ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೊದಲ ಸವಾಲು ಗೆದ್ದ ನಳಿನ್‌ ಕುಮಾರ್‌ ಕಟೀಲು

Team Udayavani, Dec 9, 2019, 10:11 PM IST

Nalin

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ವಲಸಿಗರಿಗೆ ಟಿಕೆಟ್‌ ನೀಡಿದ್ದು, ಮೂಲ ಬಿಜೆಪಿಗರು ಮತ್ತು ಕಾರ್ಯಕರ್ತರಲ್ಲಿ ಹುಟ್ಟಿದ ಚುನಾವಣ ಪೂರ್ವ “ಅಸಮಾಧಾನ’ವನ್ನು ಉಪಚುನಾವಣೆ ಫ‌ಲಿತಾಂಶ ಶಮನ ಮಾಡಿದೆ. ಚುನಾವಣೆ ಸಂದರ್ಭದಲ್ಲಿ ಇವೆಲ್ಲವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್‌ ಕುಮಾರ್‌ ಕಟೀಲು ಆರಂಭಿಕ ಯಶಸ್ಸು ಕಂಡಿದ್ದಾರೆ.

ಕಾಂಗ್ರೆಸ್‌ನ 12 ಮತ್ತು ಜೆಡಿಎಸ್‌ನ 3 ಶಾಸಕರು ರಾಜೀನಾಮೆ ನೀಡಿದ್ದರಿಂದ ರಾಜ್ಯದಲ್ಲಿ ಮೈತ್ರಿ ಸರಕಾರ ಪತನವಾಗಿ ಬಿಜೆಪಿ ಅಧಿಕಾರ ಹಿಡಿಯಿತು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಳಿನ್‌ ಕುಮಾರ್‌ ಕಟೀಲು ಅವರಿಗೆ ಉಪ ಚುನಾವಣೆ ಮೊದಲ ಸವಾಲಾಗಿತ್ತು. ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ರಾಜೀನಾಮೆ ನೀಡಿದ ಶಾಸಕರ 15 ವಿಧಾನಸಭಾ ಕ್ಷೇತ್ರಗಳಿಗೆ (ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಹೊರತುಪಡಿಸಿ) ಚುನಾವಣ ಆಯೋಗ ಉಪ ಚುನಾವಣೆ ಘೋಷಣೆ ಮಾಡುತ್ತಿದ್ದಂತೆ ಸುಪ್ರೀಂ ಕೋರ್ಟ್‌ ಕೂಡ ಅನರ್ಹಗೊಂಡಿದ್ದ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿತು.

ಅನರ್ಹಗೊಂಡಿದ್ದ ಶಾಸಕರೆಲ್ಲ(ರೋಶನ್‌ ಬೇಗ್‌ ಹೊರತುಪಡಿಸಿ) ಬಿಜೆಪಿ ಸೇರಿಕೊಂಡರು. ಜೆಡಿಎಸ್‌ ಮತ್ತು ಕಾಂಗ್ರೆಸ್‌ ತೊರೆದು ಕಾರ್ಯಕರ್ತರ ದಂಡಿನೊಂದಿಗೆ ಬಿಜೆಪಿಗೆ ಸೇರ್ಪಡೆಯಾದ ಎಲ್ಲರಿಗೂ ಅದ್ದೂರಿ ಸ್ವಾಗತ ನೀಡಲಾಯಿತು. ವಲಸಿಗರ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಯಾವುದೇ ರೀತಿಯ ವೈಮನಸ್ಸು ಬಾರದಂತೆ ಚುನಾವಣೆಯನ್ನು ಸಂಘಟಿತವಾಗಿ ಎದುರಿಸಲು ಕಾರ್ಯಕರ್ತರನ್ನು ಒಗ್ಗೂಡಿಸುವಲ್ಲಿ ನಳಿನ್‌ ಕುಮಾರ್‌ ಕಟೀಲು ಸಫ‌ಲರಾದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೇ ಪಕ್ಷದ ಮುಖಂಡರನ್ನು, ಕಾರ್ಯಕರ್ತರನ್ನು ಭೇಟಿ ಮಾಡಿ ಸಂಘಟನೆ ಕಾರ್ಯ ಆರಂಭಿಸಿದ್ದರು. ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ಜಿಲ್ಲಾ ಪದಾಧಿಕಾರಿಗಳ ಸಭೆ ಕರೆದು, ಸಂಘಟನೆಯನ್ನು ಗಟ್ಟಿಮಾಡುವ ನಿಟ್ಟಿನಲ್ಲಿ ತಮ್ಮದೆ ಆದ ಕಾರ್ಯತಂತ್ರವನ್ನು ರೂಪಿಸಿದರು. ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಸಭೆ ಕರೆದು ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನವನ್ನು ನೀಡಿದ್ದರು. ಇದರ ಜತೆಗೆ ಬಿಜೆಪಿಯಿಂದ ಉಚ್ಛಾಟಿತರಾಗಿರುವ ಮತ್ತು ಪಕ್ಷದಿಂದ ಹೊರ ಹೋಗಿರುವವರನ್ನು ಮರಳಿ ಪಕ್ಷಕ್ಕೆ ಕರೆತರುವಲ್ಲಿಯೂ ಅವರು ಯಶಸ್ವಿಯಾದರು.

ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗುತ್ತಿದ್ದಂತೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಹಿತವಾಗಿ ಸಹಿತವಾಗಿ ಪಕ್ಷದ ಪ್ರಮುಖ ನಾಯಕರು ಅಭ್ಯರ್ಥಿಗಳ ಪರವಾಗಿ ಬಹಿರಂಗ ಪ್ರಚಾರ ಆರಂಭಿಸಿದ್ದರು. ಆದರೆ ಈ ವೇಳೆ ಮೂಲ ಬಿಜೆಪಿ ಕಾರ್ಯಕರ್ತರು ಮತ್ತು ಪಕ್ಷಕ್ಕೆ ವಲಸೆ ಬಂದು ಟಿಕೆಟ್‌ ಪಡೆದಿರುವ ಅಭ್ಯರ್ಥಿಗಳ ಬೆಂಬಲಿಗರ ನಡುವೆ ಸಮನ್ವಯ ಇರಲಿಲ್ಲ. ಅಭ್ಯರ್ಥಿಗಳ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಮನ್ವಯ ಸಾಧಿಸಿ, ಯಾವುದೇ ರೀತಿಯಲ್ಲೂ ಗೊಂದಲ ಇಲ್ಲದೆ ಚುನಾವಣೆ ಎದುರಿಸಿ, ಗರಿಷ್ಠ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಹೊಸ ಸಾಧನೆ ಮಾಡಿದ್ದರ ಹಿಂದೆ ನಳಿನ್‌ ಕುಮಾರ್‌ ಕಟೀಲು ಅವರ ಶ್ರಮ ಸಾಕಷ್ಟಿದೆ.

ಬಿಜೆಪಿ ಪ್ರಾಬಲ್ಯ ಕಡಿಮೆ ಇರುವ ಹಾಗೂ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಶಕ್ತಿ ಹೆಚ್ಚಿರುವ ಚಿಕ್ಕಬಳ್ಳಾಪುರ, ಕೆ.ಆರ್‌.ಪೇಟೆ, ಯಶವಂತಪುರ, ಕೆ.ಆರ್‌.ಪುರಂ, ಮಹಾಲಕ್ಷ್ಮೀ ಬಡಾವಣೆ ಮೊದಲಾದ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿರುವುದು ಪಕ್ಷ ಸಂಘಟನೆಗೆ ಇನ್ನಷ್ಟು ಅನುಕೂಲವಾಗಲಿದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಈ ಗೆಲುವು ಹೊಸ ಟಾನಿಕ್‌ ದೊರೆತಂತಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.