ರಾಷ್ಟ್ರೀಯ ಸಾಂಸ್ಥಿಕ ರ್‍ಯಾಂಕಿಂಗ್ ಪಟ್ಟಿ : ಬೆಂಗಳೂರು ಐಐಎಸ್‌ಸಿ ದೇಶದ ಬೆಸ್ಟ್ ವಿವಿ
ಕೇಂದ್ರ ಸರ್ಕಾರದಿಂದ ಟಾಪ್ ಶಿಕ್ಷಣ ಸಂಸ್ಥೆಗಳ ಪಟ್ಟಿ ಬಿಡುಗಡೆ
Team Udayavani, Jul 16, 2022, 7:20 AM IST
ಕಳೆದ ವರ್ಷದಂತೆ ಈ ಬಾರಿಯೂ ರಾಷ್ಟ್ರೀಯ ಸಾಂಸ್ಥಿಕ ರ್‍ಯಾಂಕಿಂಗ್(ಎನ್‌ಐಆರ್‌ಎಫ್)ನಲ್ಲಿ ಐಐಟಿ ಮದ್ರಾಸ್ ಮೊದಲ ಸ್ಥಾನ, ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ 2ನೇ ಸ್ಥಾನ ಅಲಂಕರಿಸಿವೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಒಟ್ಟಾರೆ ರ್‍ಯಾಂಕಿಂಗ್:
ಬೆಂಗಳೂರಿನ ಐಐಎಸ್‌ಸಿ (2), ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್(17), ಸುರತ್ಕಲ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(27).
ವಿಶ್ವವಿದ್ಯಾಲಯ ವಿಭಾಗ
ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (1), ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್(7), ಮೈಸೂರು ವಿವಿ (33), ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್(34).
ಕಾಲೇಜು ವಿಭಾಗ
ಬೆಂಗಳೂರಿನ ಎಂಎಸ್ ರಾಮಯ್ಯ ಕಾಲೇಜ್ ಆಫ್ ಆರ್ಟ್ಸ್, ಕಾಮರ್ಸ್ ಆ್ಯಂಡ್ ಸೈನ್ಸ್(55), ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜ್ ಆಫ್ ಕಾಮರ್ಸ್(93).
ಸಂಶೋಧನಾ ಸಂಸ್ಥೆ
ಬೆಂಗಳೂರಿನ ಐಐಎಸ್‌ಸಿ(1), ಮಣಿಪಾಲದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (30), ಬೆಂಗಳೂರಿನ ನಿಮ್ಹಾನ್ಸ್(42).
ಎಂಜಿನಿಯರಿಂಗ್ ವಿಭಾಗ
ದ.ಕನ್ನಡ ಜಿಲ್ಲೆಯ ಸುರತ್ಕಲ್‌ನ ಎನ್‌ಐಟಿಕೆ (10), ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ (49), ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (55).
ಮ್ಯಾನೇಜ್‌ಮೆಂಟ್
ಬೆಂಗಳೂರಿನ ಐಐಎಂ(2), ಮಣಿಪಾಲದ ಟಿ.ಎ.ಪೈ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್(38), ಬೆಂಗಳೂರಿನ ಕ್ರೈಸ್ಟ್ ವಿವಿ (72).
ಫಾರ್ಮಸಿ ವಿಭಾಗ
ಮೈಸೂರಿನ ಜೆಎಸ್‌ಎಸ್ ಕಾಲೇಜ್ (8), ಉಡುಪಿಯ ಮಣಿಪಾಲ್ ಕಾಲೇಜ್ ಆಫ್ ಫಾರ್ಮಾಸು ಟಿಕಲ್ಸ್ ಸೈನ್ಸಸ್(9), ಬೆಳಗಾವಿಯ ಕೆಎಲ್‌ಇ ಕಾಲೇಜು (40), ಮಂಗಳೂರಿನ ಎನ್‌ಜಿಎಸ್‌ಎಂ ಇನ್‌ಸ್ಟಿಟ್ಯೂಟ್(45).
ವೈದ್ಯಕೀಯ ವಿಭಾಗ
ಬೆಂಗಳೂರಿನ ನಿಮ್ಹಾನ್ಸ್(4), ಮಣಿಪಾಲದ ಕಸ್ತೂರ್‌ಬಾ ಮೆಡಿಕಲ್ ಕಾಲೇಜು(10), ಬೆಂಗಳೂರಿನ ಸೈಂಟ್ ಜಾನ್ಸ್ ಮೆಡಿಕಲ್ ಕಾಲೇಜು(14), ಮಂಗಳೂರಿನ ಕಸ್ತೂರ್‌ಬಾ ಮೆಡಿಕಲ್ ಕಾಲೇಜು(31), ಮೈಸೂರಿನ ಜೆಎಸ್‌ಎಸ್ ಮೆಡಿಕಲ್ ಕಾಲೇಜು (34), ಬೆಂಗಳೂರಿನ ಎಂಎಸ್ ರಾಮಯ್ಯ ಮೆಡಿಕಲ್ ಕಾಲೇಜು(38).
ದಂತ ವೈದ್ಯಕೀಯ
ಉಡುಪಿಯ ಮಣಿಕಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್(2), ಮಂಗಳೂರಿನ ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್(6), ಮಂಗಳೂರಿನ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್(7), ಮೈಸೂರಿನ ಜೆಎಸ್‌ಎಸ್ (12), ಬೆಂಗಳೂರಿನ ಎಂಎಸ್ ರಾಮಯ್ಯ (14), ಬೆಂಗಳೂರಿನ ಗವರ್ನ್ಮೆಂಟ್ ಡೆಂಟಲ್ ಕಾಲೇಜು(18), ಧಾರವಾಡದ ಎಸ್‌ಡಿಎಂ ಕಾಲೇಜು(20), ಮಂಗಳೂರಿನ ಯೆನೆಪೋಯಾ ಡೆಂಟಲ್ ಕಾಲೇಜ್ (23), ಬೆಂಗಳೂರಿನ ಕೆಎಲ್‌ಇ (28).
ಕಾನೂನು ವಿಭಾಗ
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ(1), ಕ್ರೈಸ್ಟ್ ವಿವಿ (16)
ವಾಸ್ತುಶಿಲ್ಪ ವಿಭಾಗ
ಉಡುಪಿಯ ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಆ್ಯಂಡ್ ಪ್ಲ್ರಾನಿಂಗ್, ಮಾಹೆ(15), ಬೆಂಗಳೂರಿನ ಎಂಎಸ್ ರಾಮಯ್ಯ ತಾಂತ್ರಿಕ ಸಂಸ್ಥೆ(17), ಬಿಎಂಎಸ್ ಕಾಲೇಜು(18).
ಮಣಿಪಾಲ ಸಮೂಹದ ಸಾಧನೆ
ಮಣಿಪಾಲ ಶಿಕ್ಷಣ ಸಂಸ್ಥೆಗಳು ಈ ವರ್ಷವೂ ಉತ್ತಮ ಸಾಧನೆ ಮಾಡಿ, ಎನ್‌ಐಆರ್‌ಎಫ್ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಒಟ್ಟಾರೆ ರ್‍ಯಾಂಕಿಂಗ್‌ನಲ್ಲಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ 17ನೇ ಸ್ಥಾನ ಪಡೆದಿದ್ದರೆ, ವಿವಿ ವಿಭಾಗದಲ್ಲಿ 7ನೇ ಸ್ಥಾನ, ಸಂಶೋಧನಾ ವಿಭಾಗದಲ್ಲಿ 30ನೇ ಸ್ಥಾನ ಪಡೆದಿದೆ. ಎಂಜಿನಿಯರಿಂಗ್ ವಿಭಾಗದಲ್ಲಿ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 55ನೇ ಸ್ಥಾನ ಗಳಿಸಿದರೆ, ಫಾರ್ಮಸಿ ವಿಭಾಗದಲ್ಲಿ ಉಡುಪಿಯ ಮಣಿಪಾಲ್ ಕಾಲೇಜ್ ಆಫ್ ಫಾರ್ಮಾಸುÂಟಿಕಲ್ಸ್ ಸೈನ್ಸಸ್‌ಗೆ 9ನೇ ಸ್ಥಾನ, ವೈದ್ಯಕೀಯ ವಿಭಾಗದಲ್ಲಿ ಮಣಿಪಾಲದ ಕಸ್ತೂರ್‌ಬಾ ಮೆಡಿಕಲ್ ಕಾಲೇಜಿಗೆ 10ನೇ ಸ್ಥಾನ, ಮಂಗಳೂರಿನ ಕಸ್ತೂರ್‌ಬಾ ಮೆಡಿಕಲ್ ಕಾಲೇಜಿಗೆ 31ನೇ ಸ್ಥಾನ, ದಂತ ವೈದ್ಯಕೀಯ ವಿಭಾಗದಲ್ಲಿ ಉಡುಪಿಯ ಮಣಿಕಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್‌ಗೆ 2ನೇ ಸ್ಥಾನ, ಮಂಗಳೂರಿನ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್‌ಗೆ 7ನೇ ಸ್ಥಾನ, ವಾಸ್ತುಶಿಲ್ಪ ವಿಭಾಗದಲ್ಲಿ ಉಡುಪಿಯ ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಆ್ಯಂಡ್ ಪ್ಲ್ರಾನಿಂಗ್‌ಗೆ 15ನೇ ಸ್ಥಾನ, ಮ್ಯಾನೇಜ್‌ಮೆಂಟ್ ವಿಭಾಗದಲ್ಲಿ ಮಣಿಪಾಲದ ಟಿ.ಎ.ಪೈ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ಗೆ 38ನೇ ಸ್ಥಾನ ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ
ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.