ಕರಾವಳಿ ಮಣ್ಣಿನಲ್ಲಿ ಪೊಟಾಶಿಯಂ ಕೊರತೆ
Team Udayavani, Dec 5, 2021, 6:10 AM IST
ವಸತಿ, ಆಹಾರ ಸಹಿತ ತನ್ನೆಲ್ಲ ಆವಶ್ಯಕತೆಗಳಿಗೆ ಮಾನವ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಮಣ್ಣನ್ನು ಅವಲಂಬಿಸಿದ್ದಾನೆ. ಮಣ್ಣಿನ ಆರೋಗ್ಯ ಮತ್ತು ಫಲವತ್ತತೆಯನ್ನು ಕಾಯ್ದುಕೊಂಡು ಅದನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ವಾಗಿಡುವುದು ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ. ಈ ನಿಟ್ಟಿನಲ್ಲಿ ವಿಶ್ವ ಮಣ್ಣು ದಿನಾಚರಣೆ ಹೆಚ್ಚು ಮಹತ್ವ ಪಡೆದುಕೊಂಡಿದೆ. “ಮಣ್ಣಿನಲ್ಲಿನ ಲವಣಾಂಶ (ಸವುಳು)ವನ್ನು ನಿಯಂತ್ರಿಸಿ ಫಲವತ್ತತೆ ಹೆಚ್ಚಿಸಿ’ ಎಂಬ ಧ್ಯೇಯದೊಂದಿಗೆ ಈ ಬಾರಿಯ ವಿಶ್ವ ಮಣ್ಣಿನ ದಿನವನ್ನು ಆಚರಿಸ ಲಾಗುತ್ತಿದೆ.
ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಮಣ್ಣಿನಲ್ಲಿ ಪೊಟಾಶಿಯಂ ಕೊರತೆ ಕಂಡು ಬರುತ್ತಿದ್ದು ಇದು ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ಮತ್ತು ವಿಜ್ಞಾನ ಕೇಂದ್ರದ ತಜ್ಞರು ಕಳೆದ 13 ವರ್ಷಗಳಲ್ಲಿ ನಡೆಸಿದ 9 ಸಾವಿರಕ್ಕೂ ಅಧಿಕ ಮಣ್ಣಿನ ಮಾದರಿಗಳ ಪರೀಕ್ಷೆಯಲ್ಲಿ ಇದು ಸಾಬೀತಾಗಿದೆ ಎಂದು ಮಣ್ಣು ವಿಜ್ಞಾನಿಗಳು ತಿಳಿಸಿದ್ದಾರೆ.
ನೈಸರ್ಗಿಕ ಸಂಪನ್ಮೂಲಗಳಲ್ಲಿ ಪ್ರಮುಖವಾದ ಮಣ್ಣನ್ನು ಸದುಪಯೋಗಪಡಿಸಿಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಆಹಾರ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ. ಮಣ್ಣಿನ ಪರೀಕ್ಷೆ ಮಾಡಿಸಿಕೊಂಡು ಮಣ್ಣಿನ ಆರೋಗ್ಯ ಕ್ಕಗನುಗುಣವಾದ ರೀತಿಯಲ್ಲಿ ಕೃಷಿ ಮಾಡುವುದು ಅಗತ್ಯವಾಗಿದೆ.
ಮಣ್ಣಿನ ಗುಣಗಳ ಪರೀಕ್ಷೆ :
ಮಣ್ಣಿನ ಆರೋಗ್ಯಕ್ಕೆ ದೈಹಿಕ, ಜೈವಿಕ, ಭೌತಿಕ ಮತ್ತು ರಾಸಾಯನಿಕ ಅಂಶಗಳು ಪ್ರಮುಖವಾಗಿ ರುತ್ತವೆ. ಮಣ್ಣಿನಲ್ಲಿರುವ ರಸಸಾರ, ಲವಣಾಂಶ, ಸಾವಯವ ಇಂಗಾಲ, ಸಾರಜನಕ, ರಂಜಕ, ಪೊಟಾಶ್, ಗಂಧಕ, ಸತು, ಬೋರಾನ್, ಕಬ್ಬಿಣ, ಮ್ಯಾಂಗನೀಸ್, ತಾಮ್ರ ಈ 12 ಅಂಶಗಳನ್ನು ಪರೀಕ್ಷಿಸಿ, ವಿಶ್ಲೇಷಿಸಲಾಗುತ್ತದೆ.
ಪೊಟಾಶಿಯಂ ಕೊರತೆ ಬೆಳೆಗಳ ಮೇಲೆ ಪರಿಣಾಮ :
ಮಣ್ಣಿನಲ್ಲಿ ಪೊಟಾಶಿಯಂ ಪ್ರಮಾಣ ಕೊರತೆಯಾದಾಗ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀಳುತ್ತದೆ. ಭತ್ತ ಕೆಂಪು ಬಣ್ಣಕ್ಕೆ ತಿರುಗಿ ಇಳುವರಿ ಕಡಿಮೆಯಾದರೆ ತೆಂಗು ಮತ್ತು ಅಡಿಕೆಯಲ್ಲಿ ಚುಕ್ಕೆಗಳು ಕಾಣಿಸಿಕೊಂಡು ಕಾಯಿ ಹಂತದಲ್ಲಿ ಉದುರಲು ಶುರುವಾಗುತ್ತದೆ. ಮುಖ್ಯವಾಗಿ ಬೆಳೆಗಳಲ್ಲಿ ರೋಗ ಮತ್ತು ಕೀಟ ನಿರೋಧಕ ಶಕ್ತಿ ಕುಂದುತ್ತದೆ. ಕರಾವಳಿ ಭಾಗದ ರೈತರು ತಮ್ಮ ಕೃಷಿ ಭೂಮಿಯ ಮಣ್ಣು ಪರೀಕ್ಷೆ ಮಾಡಿಸಿಕೊಂಡು ಸಾವಯವ ಗೊಬ್ಬರ ಸಹಿತ ಪೊಟಾಶಿಯಂ ಆಧರಿತ ರಸಗೊಬ್ಬರವನ್ನು ಮಣ್ಣಿಗೆ ನೀಡಬೇಕು ಎಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ| ಜಯಪ್ರಕಾಶ್ ಆರ್. ಕೃಷಿಕರಿಗೆ ಸಲಹೆ ನೀಡುತ್ತಾರೆ.
ಹುಳಿ ಮಣ್ಣಿಗೆ ಸುಣ್ಣ ಪರಿಹಾರ :
ಕರಾವಳಿ ಭಾಗದಲ್ಲಿನ ಮಣ್ಣಿನಲ್ಲಿ ಶೇ.95ರಷ್ಟು ಹುಳಿ ಅಂಶವಿದೆ. ಹುಳಿ ಮಣ್ಣಿನಲ್ಲಿ ಕಬ್ಬಿಣದ ನಂಜಿನ ಅಂಶ ಅಧಿಕವಾಗಿರುವುದರಿಂದ ರಸಗೊಬ್ಬರ, ಸಾವಯವ ಗೊಬ್ಬರ ಎಷ್ಟೇ ಹಾಕಿದರೂ ಬೆಳೆಗಳಿಗೆ ಪೋಷಕಾಂಶಗಳು ಸಮರ್ಪಕವಾಗಿ ಸಿಗದೆ ಇಳುವರಿ ಕುಂಠಿತವಾಗುತ್ತದೆ. ಮಣ್ಣಿಗೆ ಸುಣ್ಣ ಬಳಕೆ ಮಾಡುವುದರಿಂದ ಇದಕ್ಕೆ ಪರಿಹಾರ ಸಾಧ್ಯ.
ಮಣ್ಣಿಗೆ ಏನೇನು ಹಾನಿಕಾರಕ?:
ಅವೈಜ್ಞಾ ನಿಕ ಮಾದರಿಯಲ್ಲಿ ಮತ್ತು ಅತೀ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಬಳಕೆ, ಕರಾವಳಿ, ಮಲೆನಾಡು ಭಾಗದಲ್ಲಿ ಮಣ್ಣಿನ ಸವಕಳಿ ಹೆಚ್ಚಳ, ಕಾರ್ಖಾನೆ, ಪ್ಲಾಸ್ಟಿಕ್ ತ್ಯಾಜ್ಯಗಳು ಮಣ್ಣಿಗೆ ಸೇರ್ಪಡೆಗೊಳ್ಳುತ್ತಿರುವುದು, ಬ್ಯಾಟರಿ ವೇಸ್ಟ್‌ಗಳ ಅವೈಜ್ಞಾನಿಕ ವಿಲೇವಾರಿ ಮತ್ತಿತರ ಅಂಶಗಳು ಮಣ್ಣಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮಣ್ಣಿನ ಉತ್ತಮ ಆರೋಗ್ಯಕ್ಕೆ ಎರೆಹುಳ ಗೊಬ್ಬರ, ಕುರಿ ಗೊಬ್ಬರ, ಎಲೆ ಗೊಬ್ಬರ, ವ್ಯವಸ್ಥಿತವಾಗಿ ಕಂಪೋಸ್ಟ್ ಮಾಡಿದ ಹಸಿ ತ್ಯಾಜ್ಯಗಳ ಗೊಬ್ಬರದಿಂದ ಸಾವಯವ ಮಣ್ಣು ರೂಪುಗೊಳ್ಳುತ್ತದೆ. ಮಣ್ಣಿನ ಸವಕಳಿ ತಡೆಗಟ್ಟಲು ಭೂಮಿಯನ್ನು ಅದರಲ್ಲೂ ಮುಖ್ಯವಾಗಿ ಕೃಷಿ ಜಮೀನನ್ನು ಪಾಳು ಬಿಡದೆ ಹುಲ್ಲುಗಾವಲು, ಹೊದಿಕೆ ಬೆಳೆಗಳು, ಗಿಡಮರಗಳನ್ನು ಬೆಳೆಸಬೇಕು.
–ಅವಿನ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್ ಸಿಂಗ್
Tribute Dr.Singh: ಡಾ.ಮನಮೋಹನ್ ಸಿಂಗ್ ಆಡಳಿತದ ಜನಪರ ಯೋಜನೆಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.