ಹೋರಾಟವೇ ಜೀವನದ ಮಂತ್ರ; ಎಸ್. ಎಂ.ಕೃಷ್ಣ
Team Udayavani, Feb 25, 2023, 6:10 AM IST
ನಾಲ್ಕು ದಶಕಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು-ಏಳು ಬೀಳು ಕಂಡು ರೈತಾಪಿ ವರ್ಗದ ಪರವಾಗಿ ಅಹರ್ನಿಶಿ ಹೋರಾಟ ನಡೆಸಿದ ತಾವು ಚುನಾವಣ ರಾಜಕೀಯದಿಂದ ದೂರ ಸರಿದು ಯುವ ಸಮೂಹಕ್ಕೆ ಮಾರ್ಗದರ್ಶಕರಾಗಲು ನಿಶ್ಚಯಿಸಿರುವ ತಮ್ಮ ನಿರ್ಧಾರ ಸ್ವಾಗತಿಸುತ್ತೇನೆ.
1983 ರಿಂದ ಶಾಸನ ಸಭೆಯ ಸದಸ್ಯರಾಗಿ ಆಯ್ಕೆಯಾಗಿ ತಮ್ಮ ಸಿದ್ಧಾಂತಕ್ಕೆ ಬದ್ಧರಾಗಿ ಹಗಲಿರುಳು ಹೋರಾಡಿ ಬಿಜೆಪಿ ಪಕ್ಷವನ್ನು ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ತರುವಲ್ಲಿ ತಮ್ಮ ಪಾತ್ರ ಹಿರಿದಾದುದು. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ ಪ್ರತೀ ಹಂತದಲ್ಲೂ ಹೋರಾಟವೇ ನಿಮ್ಮ ಜೀವನದ ಮಂತ್ರವಾಗಿಸಿಕೊಂಡು ರಾಜ್ಯದ ಎಲ್ಲ ಸಮುದಾಯದ ಏಳಿಗೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಜನಸಾಮಾನ್ಯರಲ್ಲಿ ಅಜರಾಮರರಾಗಿದ್ದೀರಿ. ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುವುದು ಎನ್ನುವ ಮಟ್ಟಿಗೆ ನಿಮ್ಮಧ್ವನಿ ವಿಧಾನಸೌಧದಲ್ಲಿ ಮೊಳಗಿದೆ. ನಾವಿಬ್ಬರೂ ಒಂದೇ ಜಿಲ್ಲೆಯಿಂದ ಬಂದವರಾದರೂ ತಾವು ಶಿಕಾರಿಪುರವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡು ರಾಜ್ಯದ ಸರ್ವವ್ಯಾಪಿ ಸಂಚರಿಸಿ ಪಕ್ಷವನ್ನು ಅಧಿಕಾರಕ್ಕೆ ಏರಿಸಿ ಜನನಾಯಕರಾಗಿ ರೂಪುಗೊಂಡು ಹಲವು ಯುವನಾಯಕರನ್ನು ಸೃಷ್ಟಿಸಿ ಯಶಸ್ವಿ ನಾಯಕರಾಗಿ ಸಾರ್ವಜನಿಕ ಜೀವನ ನಡೆಸಿ ಇಂದು ಚುನಾವಣ ರಾಜಕೀಯದಿಂದ ವಿರಮಿಸುತ್ತಿರುವ ತಮಗೆ ಭಗವಂತ ಆಯಸ್ಸು ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
(ಯಡಿಯೂರಪ್ಪ ಅವರಿಗೆ ಬರೆದ ಪತ್ರ)
-ಎಸ್. ಎಂ.ಕೃಷ್ಣ, ಮಾಜಿ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.