![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 1, 2021, 2:09 PM IST
ಪ್ರಾತಿನಿಧಿಕ ಚಿತ್ರ
ಊಟ ಮಾಡುವುದು ಕೇವಲ ಒಂದು ಚಟುವಟಿಕೆ ಎಂದಾಗಿರುವ ಈ ಕಾಲದಲ್ಲಿ , ನೆಲದ ಮೇಲೆ ಕುಳಿತು ಊಟ ಮಾಡುವುದು ಎಂದರೆ ಕಷ್ಟದ ಕೆಲಸದಂತಾಗಿದೆ. ಅದರಲ್ಲೂ ಯುವಕರಲ್ಲಿ ಅಸಡ್ಡೆಯ ಜೊತೆಗೆ ಅಸಾಧ್ಯದ ಭಾವನೆಯೇ ಎದ್ದು ಕಾಣುತ್ತದೆ.
ಈಗಿನ ಜೀವನ ಶೈಲಿಯಲ್ಲಿ ಮನೆಮಂದಿಯೆಲ್ಲಾ ಒಟ್ಟಿಗೆ ಊಟಕ್ಕೆ ಕೂರುವುದು ಒಂದು ಆಶ್ಚರ್ಯವೇ ಸರಿ. ಕೊವಿಡ್ ಲಾಕ್ ಡೌನ್ ಈ ಕೆಲಸವನ್ನು ಸಾಧ್ಯ ಮಾಡಿದೆ.
ಸನಾತನ ಧರ್ಮದಲ್ಲಿ ಊಟ ಎಂದರೇ, ಅದೊಂದು ಗೌರವ ಪೂರ್ವಕವಾಗಿ ನಡೆಸುವ ದೈನಂದಿನ ಯಜ್ಞವಿದ್ದಂತೆ. ಕೇವಲ ಹೊಟ್ಟೆ ತುಂಬಿಸಿಕೊಳ್ಳುವ ಕ್ರಿಯೆ ಅಲ್ಲ. ನೆಲದ ಮೇಲೆ ಪದ್ಮಾಸನದಲ್ಲಿ (ಸುಖಾಸನ)ಕುಳಿತು ಕೈ ಮುಗಿದು ಪ್ರಾರ್ಥಿಸಿ , ನಿಶ್ಚಿಂತೆಯಿಂದ ಬರಿಗೈಯಲ್ಲಿ ಸೇವಿಸುವ ಆಹಾರ ನಮ್ಮ ಜಠರಕ್ಕೆ ಅಷ್ಟೇ ಅಲ್ಲದೆ ಆತ್ಮಕ್ಕೂ ತೃಪ್ತಿ ನೀಡುವುದು. ಊಟದ ನಂತರ “ಅನ್ನ ದಾತೋ ಸುಖೀ ಭವ” ಎಂಬ ಒಂದು ವ್ಯಾಖ್ಯಾನ ಅಡಿಗೆ ತಯಾರಿಸಿದವರ ಪಾಲಿಗೆ ಸಾರ್ಥಕತೆಯ ಅನುಭವ ನೀಡುತ್ತದೆ.
ಇದನ್ನೂ ಓದಿ : ‘ಫ್ರೆಂಡ್ಶಿಪ್ ಡೇ’ಯಂದು ಪತಿ ನೆನೆದು ಭಾವುಕರಾದ ನಟಿ ಮೇಘನಾ ರಾಜ್
ನೆಲದ ಮೇಲೆ ಕುಳಿತು ಊಟ ಮಾಡುವುದರ ಹಿಂದಿನ ವೈಜ್ಞಾನಿಕ ವಿಚಾರ ನೋಡಿದರೆ, ಹಲವು ವಿಶೇಷಗಳು ನಮ್ಮ ಮುಂದೆ ತೆರೆದುಕೊಳ್ಳುತ್ತದೆ. ಯೋಗಾಸನದಲ್ಲಿ ಪ್ರಮುಖ ಆಸನವಾದ ಪದ್ಮಾಸನದಲ್ಲಿ ಕುಳಿತಾಗ ನಮ್ಮ ಕಿಬ್ಬೊಟ್ಟೆಯ ಮೇಲಿನ ಭಾಗಗಳೆಲ್ಲವೂ ಬೆನ್ನು ಹುರಿಯ ಸಹಾಯದಿಂದ ನೇರವಾಗುತ್ತದೆ ಹಾಗು ಪೆಲ್ವಿಕ್ ಸ್ನಾಯುಗಳು ಹಿಗ್ಗುತ್ತದೆ. ಇದರಿಂದ ನಮ್ಮ ಜೀರ್ಣಾಂಗವ್ಯೂಹವು ಉತ್ತಮ ಸ್ಥಿತಿಯನ್ನು ತಲುಪಿ ಜೀರ್ಣಕ್ಕೆ ಸಹಕರಿಸುತ್ತದೆ. ನೆಲದ ಮೇಲೆ ಕುಳಿತಾಗ ಮನಸ್ಸು ಪ್ರಶಾಂತಗೊಳ್ಳುತ್ತದೆ ಹಾಗು ಸ್ಥಿರತೆಯನ್ನು ವೃದ್ಧಿಗೊಳಿಸಿ ಆಹಾರದತ್ತ ಗಮನ ಹರಿಸಲು ಸಾಧ್ಯವಾಗುತ್ತದೆ. ನಮ್ಮ ಕುಟುಂಬದ ಸದಸ್ಯರೊಡನೆ ಸಮಯ ಕಳೆಯಲು ಇದೊಂದು ಸುಯೋಗವಿದ್ದಂತ್ತೆ. ಎಲ್ಲರ ಅಭಿರುಚಿ ತಿಳಿಯುವ ವೇದಿಕೆಯೂ ಹೌದು.
ಕೆಲವು ಅಧ್ಯಯನಗಳ ಪ್ರಕಾರ ಕೆಳಗೆ ಕೂತು ಊಟಮಾಡುವವರು ಯಾವುದೇ ಸಹಾಯವಿಲ್ಲದೆ ಏಳಲು ಶಕ್ತರಾಗಿದಲ್ಲಿ ಅವರ ಆಯಸ್ಸು ವೃದ್ಧಿಸುತ್ತದೆ. ಮೊಣಕೈ ಹಾಗು ಕಾಲುಗಳಿಗೆ ವ್ಯಾಯಾಮ ದೊರೆಯುತ್ತದೆ, ಇದರಿಂದ ಸಂಧಿವಾತ ಹಾಗು ಓಸ್ಟಿಯೋ ಪೋರೆಸಿಸ್ ಕಾಯಿಲೆಗಳನ್ನು ತಡೆಯಬಹುದು. ಬರಿಗೈಯಲ್ಲಿ ಊಟ ಮಾಡುವಾಗ ನಮ್ಮ ಐದು ಬೆರಳುಗಳು ಸೇರಿ ಒಂದು ಮುದ್ರೆ ರಚನೆಗೊಳ್ಳು ತ್ತದೆ ಇದು ಪಂಚೇಂದ್ರಿಯಗಳನ್ನು ಪ್ರೇರೇಪಿಸಿ ಮೆದುಳಿಗೆ ಸಂದೇಶ ರವಾನಿಸುತ್ತದೆ, ಆಗ ಜೀರ್ಣ ಕ್ರಿಯೆಗೆ ಬೇಕಾದ ಜೀರ್ಣರಸಗಳು ಸಹಜವಾಗಿ ಬಿಡುಗಡೆಗೊಳ್ಳುತ್ತದೆ. ಕೈಯಲ್ಲಿ ತಿನ್ನುವಾಗ ಆಹಾರದ ಬಿಸಿ ಹಾಗೂ ಮೃದುತ್ವ ನಮ್ಮ ಗಮನಕ್ಕೆ ಬರುತ್ತದೆ.
ವೈದಿಕ ಶಾಸ್ತ್ರದ ಪ್ರಕಾರ ನಮ್ಮ ಕೈ ಬೆರಳುಗಳು ಪಂಚ ತತ್ವಗಳಿಂದ ಕೂಡಿದೆ. ಹೆಬ್ಬೆರಳು – ಅಗ್ನಿ,ತೋರುಬೆರಳು – ವಾಯು, ಮಧ್ಯ ಬೆರಳು – ಆಕಾಶ, ಉಂಗುರ ಬೆರಳು – ಭೂಮಿ,ಕಿರು ಬೆರಳು – ನೀರು. ಊಟ ಮಾಡುವಾಗ ಬಾಗಿ ಏಳುವ ಪರಿ ಆಹಾರವನ್ನು ಸುಲಭವಾಗಿ ಜಠರಕ್ಕೆ ಜಾರಲು ಸಹಕರಿಸುತ್ತದೆ
ವೃದ್ಧರು, ಅಶಕ್ತರಿಗೆ ಡೈನಿಂಗ್ ಟೇಬಲ್ ಅತ್ಯವಶ್ಯಕ. ಯಾವ ಪದ್ದತಿಯನ್ನು ನಾವು ಅನುಸರಿಸುವುದಿಲ್ಲವೋ ಅದು ಕಾಲಕ್ರಮೇಣ ಕ್ಷೀಣಿಸುವುದರಲ್ಲಿ ಅನುಮಾನವಿಲ್ಲ . ಮಕ್ಕಳಲ್ಲಿ ಇದು ಅಸಾಧ್ಯವಾದಲ್ಲಿ ಮುಂದಿನ ಪೀಳಿಗೆಗೆ ಕಾಲು
ಮಡಿಸಲೂ ಅಶಕ್ತರಾಗುವ ಸ್ಥಿತಿ ಬರುವಲ್ಲಿ ಸಂದೇಹವಿಲ್ಲ.ಇಷ್ಟೆಲ್ಲಾ ತಿಳಿದ ಮೇಲೆ ಇನ್ನು ಮುಂದೆ ಸಾಧ್ಯವಾದಾಗಲೆಲ್ಲಾ ನೆಲದ ಮೇಲೆ ಕುಳಿತು ಆಹಾರ ಸೇವಿಸೊಣ.
-ಶ್ರೀರಕ್ಷಾ ಶಂಕರ್
ಎಸ್.ಡಿ.ಎಂ ಕಾಲೇಜು, ಉಜಿರೆ.
ಇದನ್ನೂ ಓದಿ : ಎಲ್ ಐ ಸಿಯ ಈ ಪಾಲಿಸಿಯ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.