Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

ವಿಪಕ್ಷ ರಾಜಕೀಯ ಬಿಟ್ಟು ಜನ ಕಲ್ಯಾಣದ ಕನ್ನಡಕ ಧರಿಸಿ ನೋಡಲಿ ; ಏಕ ಕಾಲಕ್ಕೆ ಚುನಾವಣೆಯಿಂದ ದೇಶಕ್ಕೆ ಸಾಕಷ್ಟು ಲಾಭಗಳುಂಟು

Team Udayavani, Sep 20, 2024, 6:40 AM IST

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

ಅತೀ ಹೆಚ್ಚು ಜನಸಂಖ್ಯೆಯ ಬೃಹತ್‌ ಪ್ರಜಾಪ್ರಭುತ್ವ ದೇಶ ವಾದ ಭಾರತದಲ್ಲಿ ಚುನಾವಣೆಗಳನ್ನು ನಡೆಸುವುದು ಸುಲಭದ ಮಾತಲ್ಲ. ಆದರೂ ಚುನಾವಣ ಆಯೋಗ ಎಲ್ಲ ಚುನಾವಣೆಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ ಎಂದು ಶ್ಲಾಘಿಸಲೇಬೇಕು. ಇಷ್ಟಾದರೂ ಕಾಲಕಾಲಕ್ಕೆ ಚುನಾವಣ ವ್ಯವಸ್ಥೆಯಲ್ಲಿ ಸುಧಾರಣೆ ತರುವುದು ಅನಿವಾರ್ಯ. ಈಗ ಒಂದು ದೇಶ, ಒಂದು ಚುನಾವಣೆ ಎಂಬ ಪರಿಕಲ್ಪನೆಯ ಆಧಾರದಲ್ಲಿ ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ನಡೆಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಯಾವಾಗಲೂ ವಿಶಿಷ್ಟವಾಗಿ ಮತ್ತು ದೂರದೃಷ್ಟಿಯಿಂದ ಚಿಂತಿಸುವ ಪ್ರಧಾನಿ ನರೇಂದ್ರ ಮೋದಿ ಈ ಹೊಸ ಹೆಜ್ಜೆ ಇಟ್ಟಿರುವುದು ದೇಶದ ರಾಜಕೀಯ ಚರಿತ್ರೆಯಲ್ಲೇ ದೊಡ್ಡ ದಿಟ್ಟತನ.

ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ ಒಂದು ದೇಶ ಒಂದು ಚುನಾವಣೆ ಕುರಿತು ಸಲ್ಲಿಸಿದ ವರದಿಯನ್ನು ಕೇಂದ್ರ ಸರಕಾರ ಅನುಮೋದಿಸಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಪ್ರತೀ 5 ವರ್ಷಕ್ಕೊಮ್ಮೆ ಚುನಾವಣೆ ನಡೆಯುತ್ತದೆ. ಏಕಕಾಲದಲ್ಲಿ ಚುನಾವಣೆ ನಡೆಯಬೇಕು ಎಂದರೆ ಈ ಐದು ವರ್ಷ ಕೂಡ ಸರಕಾರ ಸುಭದ್ರವಾಗಿ ಇರಬೇಕು. ಭಾರತಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ 1951ರ ಡಿಸೆಂಬರ್‌ ಮತ್ತು 1952 ಫೆಬ್ರವರಿಯ ನಡುವೆ ಲೋಕಸಭೆ ಚುನಾವಣೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ಒಂದಾಗಿ ನಡೆದಿತ್ತು. 1957, 1962 ಹಾಗೂ 1967ರಲ್ಲೂ ಏಕಕಾಲದಲ್ಲಿ ಚುನಾವಣೆ ನಡೆದಿತ್ತು. 1968-69ರ ನಂತರದ ವರ್ಷಗಳಲ್ಲಿ ಇದು ಅಸಾಧ್ಯವಾಯಿತು. ಅಂದರೆ ಅಲ್ಲಿಯವರೆಗೆ ಆಡಳಿತದಲ್ಲಿದ್ದ ಕಾಂಗ್ರೆಸ್‌ಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ಯಾವ ತಕರಾರು ಇರಲಿಲ್ಲ.

ಇಲ್ಲಿ ವಿಪಕ್ಷಗಳು ಸರಕಾರದ ಎಲ್ಲ ನಿರ್ಧಾರಗಳನ್ನು ಕೇವಲ ವಿರೋಧ ಮಾಡುವ ದೃಷ್ಟಿಯಿಂದ ನೋಡುವುದು ಬಿಟ್ಟು ಇದರಿಂದ ದೇಶಕ್ಕೇನು ಲಾಭ ಎಂದು ಚಿಂತಿಸಬೇಕು. ಏಕಕಾಲಕ್ಕೆ ಚುನಾವಣೆಗಳು ನಡೆಯುವುದರಿಂದ ಆಗುವ ಆಡಳಿತ ಸುಧಾರಣೆಗಳು ಬಹಳಷ್ಟಿದೆ. ಆಡಳಿತ ಯಂತ್ರಕ್ಕೆ ವೇಗ, ದಕ್ಷತೆ, ಸಮಯದ ಉಳಿತಾಯ ಹಾಗೂ ವೆಚ್ಚಕ್ಕೆ ಕಡಿವಾಣ ಇದರಿಂದ ಸಾಧ್ಯ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಆಗಾಗ ಚುನಾವಣೆ ನಡೆಸುವುದರಿಂದ ಜನರು ಕಟ್ಟುವ ತೆರಿಗೆ ಹಣ ಪೋಲಾಗುವುದಿಲ್ಲವೇ ಎಂದು ಯೋಚಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಗ್ಯಾರಂಟಿಗಾಗಿ ಖಜಾನೆ ಖಾಲಿ ಮಾಡಿಕೊಂಡು ಕೂತಿರುವಾಗ ಏಕಕಾಲದ ಚುನಾವಣೆಯಂತಹ ಕ್ರಮಗಳು ಸರಕಾರದ ಬೊಕ್ಕಸಕ್ಕೆ ಹೊಸ ಉಸಿರು ನೀಡುತ್ತದೆ ಎಂದು ಅರ್ಥ ಮಾಡಿಕೊಳ್ಳಬೇಕು.

ಒಂದು ಚುನಾವಣೆ ನಡೆಯುವಾಗ ಅದಕ್ಕೆ ಶಿಕ್ಷಕರು ಸೇರಿದಂತೆ ಸರಕಾರಿ ನೌಕರರನ್ನು ನೇಮಿಸಲಾಗುತ್ತದೆ. ಭದ್ರತೆಗೆ ಪೊಲೀಸ್‌ ಮತ್ತು ಗೃಹ ಇಲಾಖೆಯಡಿಯ ಭದ್ರತಾ ಪಡೆಯನ್ನು ನಿಯೋಜಿಸಲಾಗುತ್ತದೆ. ಸಾರಿಗೆ, ಸಂಬಳ, ಆಹಾರ, ವಸತಿ ಹೀಗೆ ಒಂದೊಂದೇ ಖರ್ಚುಗಳು ಬೆಳೆಯುತ್ತಲೇ ಹೋಗುತ್ತವೆ. ಅಲ್ಲದೆ ನೌಕರರಿಗೂ ಕಾರ್ಯದ ಒತ್ತಡ ಹೆಚ್ಚುತ್ತದೆ. ಜತೆಗೆ ನೀತಿ ಸಂಹಿತೆಯಿಂದ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ, ಸಾರ್ವಜನಿಕ ಚಟುವಟಿಕೆಗಳಿಗೆ ಅಡ್ಡಿ, ಹೆಚ್ಚುವರಿ ಕೆಲಸ ಹೀಗೆ ಈ ಎಲ್ಲ ಸಮಸ್ಯೆಗಳನ್ನು ಏಕಕಾಲದ ಚುನಾವಣೆ ನಿವಾರಿಸುತ್ತದೆ.

ಪ್ರಾಯೋಗಿಕದ ಚರ್ಚೆ
ಇದು ಪ್ರಾಯೋಗಿಕವಲ್ಲ, ಒಕ್ಕೂಟ ವ್ಯವಸ್ಥೆಗೆ ವಿರೋಧ, ಸರಕಾರಗಳನ್ನು ಬೀಳಿಸುವ ತಂತ್ರ, ಹೀಗೆ ವಿಪಕ್ಷಗಳ ವಾಗ್ಧಾಳಿ ಮುಂದುವರಿದಿದೆ. ಆದರೆ ಇದೇ ಕಾಂಗ್ರೆಸ್‌ ಸೇರಿದಂತೆ ಎಲ್ಲ ವಿಪಕ್ಷಗಳು ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸುವುದು ಪ್ರಾಯೋಗಿಕವಲ್ಲ ಎಂದು ಭಾವಿಸಿ ಏನೂ ಮಾಡದೆ ಸುಮ್ಮನಾಗಿದ್ದವು. ಅದನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಿದ್ದು, ಈಗ ಜಮ್ಮು- ಕಾಶ್ಮೀರ ಭಾರತದಲ್ಲಿ ಒಂದಾಗಿದೆ. ಯಾವುದೇ ಗಲಭೆ, ಹಿಂಸಾಚಾರವಿಲ್ಲದೆ ಕಾಶ್ಮೀರ ಕಣಿವೆ ಪ್ರಗತಿಯತ್ತ ಹೆಜ್ಜೆ ಇರಿಸಿದೆ. ಇದು ಬದಲಾವಣೆಯನ್ನು ತರುವ ಕ್ರಾಂತಿಕಾರಕ ವಿಧಾನ.

ಇದೇ ರೀತಿ ಏಕ ಕಾಲಕ್ಕೆ ಚುನಾವಣೆ ನಡೆಸಲಾಗದು ಎನ್ನುವ ಮೂಲಕ ಕಾಂಗ್ರೆಸ್‌ ನಾಯಕರು ತಮ್ಮ ಹಳೆ ಗೊಡ್ಡು ಸಂಪ್ರದಾಯಕ್ಕೆ ಜೋತು ಬಿದ್ದಿದ್ದಾರೆ. ಸುಧಾರಣೆ ಎಂದ ಮೇಲೆ ಅಲ್ಲಿ ಸವಾಲುಗಳು, ಕಷ್ಟಗಳು ಇದ್ದೇ ಇರುತ್ತದೆ ಎಂಬ ಅರಿವು ಅಗತ್ಯ.

ಆಂಧ್ರ ಪ್ರದೇಶದಲ್ಲಿ 2024ರ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆ ನಡೆಯಿತು. ಆಗ ಯಾವುದೇ ಸಮಸ್ಯೆ ಉಂಟಾಗಲಿಲ್ಲ. 2019ರಲ್ಲಿ ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಮೊದಲಾದ ರಾಜ್ಯಗಳಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಒಂದೇ ಅವಧಿಯಲ್ಲಿ ನಡೆದಿತ್ತು. ಆಗಲೂ ಏನೂ ಸಮಸ್ಯೆಗಳಾಗಲಿಲ್ಲ. ಇದನ್ನೇ ಸ್ವಲ್ಪ ವಿಸ್ತರಿಸಿ ನೋಡಿದರೆ, ಇಡೀ ದೇಶದಲ್ಲಿ ಒಂದೇ ಬಾರಿಗೆ ಚುನಾವಣೆ ನಡೆಸುವುದು ಖಂಡಿತ ಸಾಧ್ಯವಿದೆ ಎಂಬ ಅರಿವು ಉಂಟಾಗುತ್ತದೆ.

ವಿಶ್ವಾಸ ಮತವಿಲ್ಲದೆ ಸರಕಾರ ಬಿದ್ದುಹೋಗುವ ಸಂದರ್ಭ ಸೇರಿದಂತೆ ಭವಿಷ್ಯದಲ್ಲಿ ಎದುರಾಗಬಹುದಾದ ಅನೇಕ ಸಮಸ್ಯೆಗಳಿಗೆ ಕೋವಿಂದ್‌ ಸಮಿತಿ ಪರಿಹಾರಗಳನ್ನು ಸೂಚಿಸಿದೆ. ಇನ್ನಷ್ಟು ಸಮಸ್ಯೆಗಳು ಎದುರಾದರೆ, ಆ ಬಗ್ಗೆ ಚಿಂತನೆ ನಡೆಸಲು ಅವಕಾಶ ಇದ್ದೇ ಇದೆ.

ಬೆಂಬಲಿಸಿದ್ದ ಸಿಎಂ ಸಿದ್ದರಾಮಯ್ಯ!
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕ್ರಮವನ್ನು ಬೆಂಬಲಿಸಿ ಈ ಹಿಂದೆ ಮಾತನಾಡಿದ್ದರು. ಆದರೆ ಅದೇ ವ್ಯವಸ್ಥೆಯಲ್ಲಿ ಅವರಿಗೆ ದಿಢೀರನೆ ಹುಳುಕು ಕಾಣುತ್ತಿದೆ. 2016ರ ಜುಲೈಯಲ್ಲಿ ಆಗಿನ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಹೀಗೆ ಹೇಳಿದ್ದರು:
ಏಕಕಾಲದ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರ ಅಭಿಪ್ರಾಯ ಹಾಗೂ ನನ್ನ ಅಭಿಪ್ರಾಯ ಒಂದೇ. ವಿಧಾನಸಭೆ ಹಾಗೂ ಲೋಕಸಭೆಗೆ ಏಕಕಾಲಕ್ಕೆ ನಡೆಸುವ ಚುನಾವಣೆ, ವೆಚ್ಚವನ್ನು ಕಡಿಮೆ ಮಾಡಿ ಸರಕಾರಕ್ಕೆ ನೆರವಾಗುತ್ತದೆ. ಕಳೆದ ಒಂದು ವರ್ಷದಲ್ಲಿ ತಾಲೂಕು, ಜಿಲ್ಲಾ ಪಂಚಾಯತ್‌ಚುನಾವಣೆ, ಲೋಕಸಭೆ, ರಾಜ್ಯಸಭೆ ಚುನಾವಣೆ ನೀತಿ ಸಂಹಿತೆಯಿಂದ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿವೆ. ಏಕಕಾಲ ಚುನಾವಣೆ ನಡೆಯುವುದು ಉತ್ತಮ ನಿರ್ಧಾರವಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಈ ಬಗ್ಗೆ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳಬೇಕು.

… ಹೀಗೆ ಹೇಳಿದ್ದ ಸಿಎಂ ಸಿದ್ದರಾಮಯ್ಯ ಈಗ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ. ರಾಜಕೀಯವನ್ನು ಬದಿಗಿಟ್ಟು ಜನ ಕಲ್ಯಾಣದ ಕನ್ನಡಕವನ್ನು ಧರಿಸಿ ಈ ಬಗ್ಗೆ ಚಿಂತನೆ ನಡೆಸುವುದು ಈಗಿನ ಅಗತ್ಯ.

-ಆರ್‌. ಅಶೋಕ ವಿಧಾನಸಭೆ ವಿಪಕ್ಷ ನಾಯಕ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.