Teacher’s Day: ಗುರುವಿನ ಗುಲಾಮನಾಗದೇ ದೊರೆಯದಣ್ಣ ಮುಕುತಿ
Team Udayavani, Sep 5, 2024, 9:30 AM IST
ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರಃ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ.
ಗುರು ಭಾರತೀಯ ಪರಂಪರೆಯಲ್ಲಿ ಬಹಳ ಗೌರವಯುತ ಮತ್ತು ಘನತೆಯುಳ್ಳ ಪದ ಹಾಗೂ ಪದವಿ. ಆಚಾರ್ಯ ದೇವೋ ಭವ ಅನ್ನುವಂತೆ ಹಿಂದಿನ ಕಾಲದಿಂದ ಶುರುವಾಗಿ ಇಂದಿನ ಆಧುನಿಕ ಯುಗದವರೆಗೂ ದೈವಿ ಸ್ವರೂಪರಾಗಿಯೇ ಉಳಿದವರೆಂದರೇ ಅದು ಗುರುಗಳು ಮಾತ್ರ. ಜಾತಿ-ಮತ, ಮೇಲು-ಕೀಳು, ಬಡವ-ಬಲ್ಲಿದ ಅನ್ನುವ ತಾರತಮ್ಯ ಮಾಡದೇ ತನ್ನೆಲ್ಲ ಶಿಷ್ಯರನ್ನೂ ಸ್ವಂತ ಮಕ್ಕಳಂತೆ ಭಾವಿಸಿ ತಾನು ಕಲಿತಂಥಹ ವಿದ್ಯೆ, ಸಂಸ್ಕಾರ ಮತ್ತು ಆಚರಣೆಗಳನ್ನು ಬಹಳ ಪ್ರೀತಿ, ಕಾಳಜಿ ಮತ್ತು ಜವಾಬ್ದಾರಿಯುತವಾಗಿ ಭೋದಿಸಿ ಅವರುಗಳ ವ್ಯಕ್ತಿತ್ವವನ್ನು ರೂಪಿಸಿ, ಅಜ್ಞಾನವನ್ನು ಹೋಗಲಾಡಿಸಿ ಜ್ಞಾನದ ಬೆಳಕಿನೆಡೆಗೆ ಕೈಹಿಡಿದು ಕರೆದುಕೊಂಡು ಹೋಗಿ ಸಮಾಜದಲ್ಲಿ ಒಬ್ಬ ಗಣ್ಯ ಆದರ್ಶ ವ್ಯಕ್ತಿಯನ್ನಾಗಿ ಮಾಡುವ ಅದ್ಭುತ ಶಕ್ತಿಯೇ ಗುರು.
ಗುರು ಎಂದರೆ ಕೇವಲ ಶಾಲೆಗಳಲ್ಲಿ ಅಕ್ಷರ ಹೇಳಿಕೊಡುವ ಗುರುಗಳಷ್ಟೇ ಅಲ್ಲ. ಮನೆಯಲ್ಲಿರುವ ತಾಯಿ-ತಂದೆ ಹಿರಿಯ ಜೀವಗಳು, ಒಡಹುಟ್ಟಿದವರು , ಬಂಧು ಬಳಗದವರು, ಸ್ನೇಹಿತರು, ದಿನಾಲೂ ನಾವು ನೋಡುವ ಮಾತಾಡಿಸುವ ವ್ಯಕ್ತಿಗಳು, ಸಮಾಜದಲ್ಲಿ ಎತ್ತರದಲ್ಲಿರುವ ಗಣ್ಯ ವ್ಯಕ್ತಿಗಳು ಮತ್ತು ಮಹನೀಯರನ್ನೂ ಸಹ ಗುರುಗಳಾಗಿ ಭಾವಿಸಿದರೆ, ಮನುಷ್ಯ ಬಹಳ ಎತ್ತರಕ್ಕೆ ಏರಬಹುದು. “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ ಎನ್ನುವಂತೆ ಏನೂ ತಿಳಿಯದ ಒಬ್ಬ ಸಾಮಾನ್ಯ ಮನುಷ್ಯನಿಗೆ ಜೀವನದ ಮೌಲ್ಯಗಳು, ಜೀವನದ ಅರ್ಥ, ಗುರಿ ಆ ಗುರಿಯನ್ನು ಸಾಧಿಸಲು ಇರುವ ಮಾರ್ಗ ಮುಂತಾದವುಗಳನ್ನು ಗುರುವಿನ ಮಾರ್ಗದರ್ಶನವಿಲ್ಲದೆ ಅರಿಯಲು ಸಾಧ್ಯವಿಲ್ಲ.
ಯಾವಾಗ ಗುರುವಿನಿಂದ ಕಲಿತ ಈ ಎಲ್ಲ ವಿದ್ಯೆಗಳನ್ನು ಉಪಯೋಗಿಸಿಕೊಂಡು ನಾವು ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಯಾಗಿ ಬಿಂಬಿತರಾಗುತ್ತೇವೋ ಅದುವೇ ಗುರುಗಳಿಗೆ ನೀಡುವ ಗುರುದಕ್ಷಿಣೆಯಾಗಿರುತ್ತದೆ. ಗುರುವನ್ನು ಪ್ರೀತಿಸೋಣ ಗುರುವನ್ನು ಗೌರವಿಸೋಣ.
ಪ್ರಸಾದ್ ಆಚಾರ್ಯ
ಕುಂದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.