ಭೂಗತ ಸಂಗ್ರಹಾಗಾರದ ತೈಲ ಬಳಕೆ ಉತ್ತಮ ನಿರ್ಧಾರ


Team Udayavani, Nov 25, 2021, 6:00 AM IST

ಭೂಗತ ಸಂಗ್ರಹಾಗಾರದ ತೈಲ ಬಳಕೆ ಉತ್ತಮ ನಿರ್ಧಾರ

ಜಗತ್ತಿನಲ್ಲೇ ಅತ್ಯಂತ ಹೆಚ್ಚು ತೈಲೋತ್ಪಾದನೆ ಮಾಡುತ್ತಿರುವ ಒಪೆಕ್‌ ರಾಷ್ಟ್ರಗಳು ತೈಲ ಉತ್ಪಾದನೆಯನ್ನು ಹೆಚ್ಚಳ ಮಾಡಲು ನಿರಾಕರಿಸಿದ ಬೆನ್ನಲ್ಲೇ ಭಾರತ ಸಹಿತ ಅಮೆರಿಕ, ಚೀನ, ಜಪಾನ್‌, ದಕ್ಷಿಣ ಕೊರಿಯಾ, ಇಂಗ್ಲೆಂಡ್‌ ದೇಶಗಳು ತಮ್ಮ ವ್ಯೂಹಾತ್ಮಕ ಬಳಕೆಯ ಭೂಗತ ಸಂಗ್ರಹಾಗಾರದಲ್ಲಿರುವ ತೈಲ ಬಳಕೆಗೆ ಮುಂದಾಗಿವೆ. ಒಪೆಕ್‌ ದೇಶಗಳ ಬಿಗಿಪಟ್ಟಿಗೆ ತಿರುಗೇಟು ನೀಡುವ ದೃಷ್ಟಿಯಿಂದ ಈ ದೇಶಗಳು ಇಂಥ ನಿರ್ಧಾರಕ್ಕೆ ಬಂದಿವೆ. ವಿಶೇಷವೆಂದರೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈ ಎಲ್ಲ ದೇಶಗಳು ಇಂಥದ್ದೊಂದು ನಿರ್ಧಾರ ತೆಗೆದುಕೊಂಡಿವೆ.

ಜಾಗತಿಕವಾಗಿ ಪ್ರತೀ ದಿನವೂ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಲೇ ಇದೆ. ಸದ್ಯ ಬ್ರೆಂಟ್‌ ಕಚ್ಚಾ ತೈಲ ಪ್ರತೀ ಬ್ಯಾರೆಲ್‌ಗೆ 79 ಡಾಲರ್‌ ಇದೆ. ಹೀಗಾಗಿಯೇ ಜಗತ್ತಿನ ಬಹುತೇಕ ದೇಶಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಸಹಿತ ಎಲ್ಲ ತೈಲೋತ್ಪನ್ನಗಳ ಬೆಲೆಯನ್ನು ಏರಿಕೆ ಮಾಡುವ ಅನಿವಾರ್ಯತೆಗೆ ಸಿಲುಕಿವೆ. ಈ ಬೆಲೆ ಏರಿಕೆಯನ್ನು ತಡೆಯುವ ಸಲುವಾಗಿ ಅಮೆರಿಕದ ನೇತೃತ್ವದಲ್ಲಿ ಹೆಚ್ಚಾಗಿ ತೈಲ ಬಳಕೆ ಮಾಡುವ ದೇಶಗಳು ಒಪೆಕ್‌ ದೇಶಗಳ ಮುಂದೆ ಮನವಿಯೊಂದನ್ನು ಇರಿಸಿದ್ದವು. ತೈಲೋತ್ಪಾದನೆಯನ್ನು ಹೆಚ್ಚಳ ಮಾಡಿ, ದರ ಏರಿಕೆಯನ್ನು ನಿಯಂತ್ರಣಕ್ಕೆ ತರುವಂತೆ ಕೇಳಿಕೊಂಡಿದ್ದವು. ಆದರೆ ಒಪೆಕ್‌ ದೇಶಗಳು ಈ ಮನವಿಗೆ ಓಗೊಟ್ಟಿರಲಿಲ್ಲ.

ಈ ಬೆಳವಣಿಗೆಗಳು ಆದ ಬಳಿಕ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರು ಇಡೀ ಜಗತ್ತಿನಲ್ಲೇ ಹೆಚ್ಚು ತೈಲ ಬಳಕೆ ಮಾಡುವ ದೇಶಗಳ ಜತೆ ಮಾತನಾಡಿ, ವ್ಯೂಹಾತ್ಮಕ ಬಳಕೆಗಾಗಿ ಭೂಗತ ಸಂಗ್ರಹಾಗಾರದಲ್ಲಿ ಸಂಗ್ರಹಿಸಲಾಗಿರುವ ತೈಲವನ್ನು ಬಳಕೆ ಮಾಡುವ ಸಲಹೆ ನೀಡಿದ್ದರು. ಈ ರೀತಿ ಮಾಡುವ ಮೂಲಕ ಒಪೆಕ್‌ ದೇಶಗಳಿಗೆ ತಕ್ಕ ಎದಿರೇಟು ನೀಡುವ ಆಲೋಚನೆಯನ್ನೂ ಮುಂದಿಟ್ಟಿದ್ದರು.

ಇದನ್ನೂ ಓದಿ:ಸ್ವೀಡನ್‌ನ ಮೊದಲ ಮಹಿಳಾ ಪ್ರಧಾನಿ ಮ್ಯಾಗ್ಡಲೀನಾ

ಈಗ ಬಹುತೇಕ ಎಲ್ಲ ದೇಶಗಳು ಅಮೆರಿಕದ ಸಲಹೆಯನ್ನು ಸ್ವೀಕರಿಸಲು ಒಪ್ಪಿವೆ. ಇದರ ಭಾಗವಾಗಿಯೇ ಇದರಂತೆ ಮಂಗಳವಾರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರಿದೀಪ್‌ ಸಿಂಗ್‌ ಪುರಿ ಅವರ ನೇತೃತ್ವದಲ್ಲಿ ಸಭೆ ನಡೆದು, ವ್ಯೂಹಾತ್ಮಕ ಬಳಕೆಗಾಗಿನ ಭೂಗತ ಸಂಗ್ರಹಾಗಾರದಲ್ಲಿರುವ ತೈಲದ ಬಳಕೆಗೆ ನಿರ್ಧರಿಸಲಾಯಿತು. 50 ಲಕ್ಷ ಬ್ಯಾರೆಲ್‌ ಕಚ್ಚಾ ತೈಲವನ್ನು ಬಳಕೆ ಮಾಡಲು ತೀರ್ಮಾನಿಸಲಾಗಿದೆ. ಇದನ್ನು ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌(ಎಂಆರ್‌ಪಿಎಲ್‌) ಮತ್ತು ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೋರೇಶನ್‌ ಲಿಮಿಟೆಡ್‌(ಎಚ್‌ಪಿಸಿಎಲ್‌)ಗೆ ಮಾರಾಟ ಮಾಡಲಾಗುತ್ತದೆ. ಈ ಎರಡು ಭೂಗತ ಸಂಗ್ರಹಾಗಾರಗಳ ಜತೆ ಪೈಪ್‌ಲೈನ್‌ ಹೊಂದಿರುವುದರಿಂದ ಇಲ್ಲಿಗೆ ಮಾರಾಟ ಮಾಡಲಾಗುತ್ತಿದೆ.

ಈ ನಿರ್ಧಾರದಿಂದಾಗಿ ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಯುವ ಸಂಭವವಿದೆ. ಇತ್ತೀಚೆಗಷ್ಟೇ ಕೇಂದ್ರ ಸರಕಾರ ಅಬಕಾರಿ ಸುಂಕ ಇಳಿಸಿದ್ದು, ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಒಂದಷ್ಟು ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಈಗ ಸ್ಥಳೀಯವಾಗಿಯೇ ಕಚ್ಚಾ ತೈಲ ಬಳಕೆ ಮಾಡುವುದರಿಂದ ಮತ್ತಷ್ಟು ಇಳಿಕೆಯಾಗುವ ಸಂಭವವಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

ಯಕ್ಷಗಾನದ ಕನ್ನಡ ಭಾಷಾ ಸಂಪದ ಉಳಿಸಿ, ಬೆಳೆಸೋಣ

ಯಕ್ಷಗಾನದ ಕನ್ನಡ ಭಾಷಾ ಸಂಪದ ಉಳಿಸಿ, ಬೆಳೆಸೋಣ

ರಾಷ್ಟ್ರೀಯ ಆರ್ಥಿಕ ಉತ್ಥಾನದ ಪದದರ್ಶಿ ಸಹಕಾರಿ ಸಂಸ್ಥೆಗಳು

ರಾಷ್ಟ್ರೀಯ ಆರ್ಥಿಕ ಉತ್ಥಾನದ ಪದದರ್ಶಿ ಸಹಕಾರಿ ಸಂಸ್ಥೆಗಳು

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.