ವಿದ್ಯಾರ್ಥಿಗಳ ಎಂಜಿನಿಯರಿಂಗ್‌ ಆಯ್ಕೆ ಕಮರುವುದು ಬೇಡ


Team Udayavani, Dec 22, 2021, 7:40 AM IST

ವಿದ್ಯಾರ್ಥಿಗಳ ಎಂಜಿನಿಯರಿಂಗ್‌ ಆಯ್ಕೆ ಕಮರುವುದು ಬೇಡ

ಕೊರೊನಾದಿಂದಾಗಿ ಇಡೀ ಜಗತ್ತಿನ ಎಲ್ಲ ವ್ಯವಸ್ಥೆಗಳು ಅದಲುಬದಲಾಗಿವೆ. ಭಾರತವೂ ಇದಕ್ಕೆ ಹೊರತಲ್ಲ. ಅದರಲ್ಲೂ ಇಡೀ ಶಿಕ್ಷಣ ವ್ಯವಸ್ಥೆಯ ಆವರ್ತನೆಯೇ ಬದಲಾಗಿ ಬಿಟ್ಟಿದೆ. ಪ್ರತೀ ವರ್ಷವೂ ಜೂನ್‌ನಲ್ಲಿ ಆರಂಭವಾಗುತ್ತಿದ್ದ ಶೈಕ್ಷಣಿಕ ವರ್ಷ, ಈ ಕೊರೊನಾದಿಂದಾಗಿ ಯಾವಾಗ ಆರಂಭವಾಗಿ, ಯಾವಾಗ ಮುಗಿಯುತ್ತಿದೆ ಎಂದು ಹೇಳಲೂ ಆಗದಷ್ಟು ಗೊಂದಲಕ್ಕೀಡಾಗಿದೆ.

ಅದರಲ್ಲೂ ಕೊರೊನಾ ಶುರುವಾದಾಗಿನಿಂದಲೂ ಶಾಲಾ-ಕಾಲೇಜುಗಳು ಸರಿಯಾಗಿ ನಡೆದೇ ಇಲ್ಲ. ಆನ್‌ಲೈನ್‌ ಪಾಠ, ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಉತ್ತೀರ್ಣದಂಥ ನಿಯಮಗಳೂ ಜಾರಿಯಾಗಿವೆ. ಅದರಲ್ಲೂ ಪ್ರಾಥಮಿಕ ಹಂತದ ಶಾಲೆಗಳು ಒಂದೂವರೆ ವರ್ಷದ ಬಳಿಕ ಇತ್ತೀಚೆಗಷ್ಟೇ ಆರಂಭವಾಗಿವೆ.

ಇಂಥ ಸಂಕಷ್ಟದ ಕಾಲದಲ್ಲಿ ರಾಜ್ಯ ಸರಕಾರ‌ ವೈದ್ಯ ಕನಸುಹೊತ್ತ ವಿದ್ಯಾರ್ಥಿಗಳಿಗೆ ಆಘಾತ ನೀಡಿದೆ. ಇದೇ ಡಿ.31ರ ಒಳಗೆ ಎಂಜಿನಿಯರಿಂಗ್‌ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಇದಾದ ಬಳಿಕ ಅವಕಾಶ ನೀಡಲಾಗುವುದಿಲ್ಲ ಎಂದು ಹೇಳುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಶಾಕ್‌ ನೀಡಿದೆ. ರಾಜ್ಯ ಸರಕಾರದ ಈ ನಿರ್ಧಾರ, ವೈದ್ಯ ಕಾಲೇಜು ಸೇರ್ಪಡೆಗಾಗಿ ಕಾದು ಕುಳಿತಿರುವ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಇದಕ್ಕೆ ಕಾರಣವೂ ಇದೆ. ಬಹಳಷ್ಟು ವಿದ್ಯಾರ್ಥಿಗಳು ನೀಟ್‌ ಪರೀಕ್ಷೆ ಬರೆದು, ವೈದ್ಯಕೀಯ ಕೌನ್ಸೆಲಿಂಗ್‌ಗಾಗಿ ಕಾಯುತ್ತಿದ್ದಾರೆ. ಇವರಲ್ಲಿ ಹಲವರು ವೈದ್ಯಕೀಯ ಸೀಟ್‌ ಸಿಗದಿದ್ದರೆ, ಎಂಜಿನಿಯರಿಂಗ್‌ ಕಾಲೇಜಿಗೆ ಸೇರುವ ಆಸೆ ಇರಿಸಿಕೊಂಡಿದ್ದರು. ಈಗ ಡಿ.31ಕ್ಕೇ ಎಂಜಿನಿಯರಿಂಗ್‌ ಪ್ರಕ್ರಿಯೆ ಮುಗಿದು ಬಿಟ್ಟರೆ, ಇವರು ಅನಿವಾರ್ಯವಾಗಿ ವೈದ್ಯರಾಗುವ ಕನಸು ಬಿಟ್ಟು, ಎಂಜಿನಿಯರಿಂಗ್‌ ಕಾಲೇಜಿಗೆ ಸೇರಬೇಕಾಗುತ್ತದೆ.

ಕೊರೊನಾಗೆ ಮುಂಚೆ ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಸೀಟ್‌ಗಳನ್ನು ಜತೆಜತೆಯಾಗಿ ಹಂಚಿಕೆ ಮಾಡಿ, ಜು.31 ಅಥವಾ ಆ.15ರ ಒಳಗೆ ಪ್ರಕ್ರಿಯೆ ಪೂರ್ಣಗೊಳಿಸುತ್ತಿತ್ತು. ಆದರೆ ಈ ವರ್ಷ ಸುಪ್ರೀಂಕೋರ್ಟ್‌ನ ನೀಟ್‌ನ ವಿವಾದದ ಸಂಬಂಧ ವಿಚಾರಣೆ ಚಾಲ್ತಿಯಲ್ಲಿದ್ದು, ವೈದ್ಯಕೀಯ ಸೀಟ್‌ಗಳ ಹಂಚಿಕೆ ಪ್ರಕ್ರಿಯೆಯೇ ಆರಂಭವಾಗಿಲ್ಲ. ಈ ಮಧ್ಯೆ ಡಿ.31ಕ್ಕೇ ಎಂಜಿನಿಯರಿಂಗ್‌ ಆಯ್ಕೆ ಪ್ರಕ್ರಿಯೆ ಮುಗಿಸಬೇಕು ಎಂದು ರಾಜ್ಯ ಸರಕಾರ‌ ಆದೇಶ ನೀಡಿರುವುದು ಯಾವ ನ್ಯಾಯ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, ಈಗ ಎಂಜಿನಿಯರಿಂಗ್‌ ಸೀಟ್‌ ಅನ್ನೂ ಬಿಟ್ಟು, ಮುಂದೆ ವೈದ್ಯಕೀಯ ಸೀಟ್‌ ಸಿಗದೇ ಹೋದರೆ ನಾವೇನು ಮಾಡಬೇಕು ಎಂದೂ ಅವರು ಪ್ರಶ್ನೆ ಮಾಡಿದ್ದಾರೆ.

ಒಂದು ಲೆಕ್ಕಾಚಾರದಲ್ಲಿ ವಿದ್ಯಾರ್ಥಿಗಳ ಪ್ರಶ್ನೆ ಉಚಿತವಾಗಿಯೇ ಇದೆ. ಏಕೆಂದರೆ ನೀಟ್‌ ಮತ್ತು ಸಿಇಟಿ ಸೀಟ್‌ ಹಂಚಿಕೆ ಪ್ರಕ್ರಿಯೆ ಜತೆಯಾಗಿಯೇ ನಡೆಯಬೇಕು. ಇದು ನಡೆಯದಿದ್ದರೆ ವೈದ್ಯಕೀಯ ಸೀಟ್‌ ಸಿಗದೇ ಹೋದರೆ ವಿದ್ಯಾರ್ಥಿಗಳು ಏನು ಮಾಡಬೇಕು? ಅಲ್ಲದೆ ಇದುವರೆಗೆ ಸುಮ್ಮನೇ ಇದ್ದ ಸರಕಾರ‌ ದಿಢೀರನೇ ಡಿ.31ರ ಒಳಗೆ ಪ್ರಕ್ರಿಯೆ ಮುಗಿಸಿ ಎಂದು ಹೇಳಿರುವುದರ ಉದ್ದೇಶವಾದರೂ ಏನು ಎಂದು ಪ್ರಶ್ನಿಸುತ್ತಿದ್ದಾರೆ.

ಹೀಗಾಗಿ ರಾಜ್ಯ ಸರಕಾರ‌ ನೀಟ್‌ ಬರೆದ ವಿದ್ಯಾರ್ಥಿಗಳ ಕೌನ್ಸೆಲಿಂಗ್‌ ಮುಗಿಸಿದ ಬಳಿಕ, ಅಲ್ಲಿ ಸೀಟ್‌ ಸಿಗದೇ ಇರುವವರಿಗೆ ಮುಂದೆ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸೀಟ್‌ ಸಿಗುವ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಅವರ ಭವಿಷ್ಯ ಡೋಲಾಯಮಾನವಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಟಾಪ್ ನ್ಯೂಸ್

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

9

Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.