“ಕೈ’ ಕಡೆ ತೂರಿ ಬರದ ತೆನೆ, ಬಿಜೆಪಿಗೇ ಮನ್ನಣೆ


Team Udayavani, May 25, 2019, 5:00 AM IST

kai kade

ಮೈಸೂರು: “ಅವರಪ್ಪನಾಣೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲ್ಲ’ ಎಂದು ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಲೇವಡಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅತಂತ್ರ ವಿಧಾನಸಭೆ ಸೃಷ್ಟಿಯಾಗುತ್ತಲೇ ಕಾಂಗ್ರೆಸ್‌ ಹೈಕಮಾಂಡ್‌ ಮಾತಿಗೆ ಕಟ್ಟು ಬಿದ್ದು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮನ್ನೇ ಖೆಡ್ಡಾಕ್ಕೆ ಬೀಳಿಸಿದ್ದನ್ನು ಮರೆತು, ಕುಮಾರಸ್ವಾಮಿ ಅವರನ್ನು ಸಿಎಂ ಗಾದಿಗೇರಿಸಿದ್ದರು.

ಸಿದ್ದರಾಮಯ್ಯ ಇಂದು ಅದರ ಫ‌ಲ ಉಣ್ಣುತ್ತಿದ್ದಾರೆ ಎಂಬ ಟೀಕೆಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿವೆ. ಲೋಕಸಭಾ ಚುನಾವಣೆಯಲ್ಲೂ ದೋಸ್ತಿ ಮುಂದುವರಿಯಿತು. ಅಷ್ಟರಲ್ಲಾಗಲೇ ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್‌ ರೇವಣ್ಣಗೆ ಬಿಟ್ಟು ಕೊಟ್ಟಿದ್ದ ಎಚ್‌.ಡಿ.ದೇವೇಗೌಡಗೆ ಒಕ್ಕಲಿಗರ ಬಾಹುಳ್ಯವಿರುವ ಮೈಸೂರು ಸುರಕ್ಷಿತ ಕ್ಷೇತ್ರವಾಗಲಿದೆ.

ಇಲ್ಲಿ ಮೈತ್ರಿ ಅಭ್ಯರ್ಥಿಯನ್ನಾಗಿ ದೇವೇಗೌಡರನ್ನು ಕಣಕ್ಕಿಳಿಸಬೇಕು ಎಂಬ ಒತ್ತಾಯ ಜೆಡಿಎಸ್‌ ನಾಯಕರಿಂದ ಬಂದಿತ್ತು. ಆದರೆ, ಸಿದ್ದರಾಮಯ್ಯ ಅದನ್ನು ಒಪ್ಪಲಿಲ್ಲ. ಹಠ ಸಾಧಿಸಿ, 2 ಬಾರಿ ಜಯ ಸಾಧಿಸಿರುವ ಸಿ.ಎಚ್‌.ವಿಜಯಶಂಕರ್‌ರನ್ನು ಕಣಕ್ಕಿಳಿಸಿದರು. ಆ ಮೂಲಕ ಮೈಸೂರು ಕ್ಷೇತ್ರವನ್ನು ಕಾಂಗ್ರೆಸ್‌ ತೆಕ್ಕೆಗೆ ತೆಗೆದುಕೊಂಡು, ತವರು ಜಿಲ್ಲೆಯಲ್ಲಿ ತಮ್ಮ ಪ್ರಾಬಲ್ಯ ಉಳಿಸಿಕೊಳ್ಳಬಹುದು ಎಂದು ಲೆಕ್ಕಾಚಾರ ಹಾಕಿದರು.

ಹಾಲಿ ಸಂಸದ, ಬಿಜೆಪಿಯ ಪ್ರತಾಪ್‌ ಸಿಂಹ ಕಳೆದ 6 ತಿಂಗಳ ಹಿಂದೆಯೇ ಕ್ಷೇತ್ರ ಪ್ರವಾಸ ನಡೆಸಿ, ಚುನಾವಣೆಗೆ ತಯಾರಿ ನಡೆಸಿದ್ದರೆ, ಸ್ಥಾನ ಹೊಂದಾಣಿಕೆಯಲ್ಲಾದ ವಿಳಂಬದಿಂದಾಗಿ ಕಾಂಗ್ರೆಸ್‌ ಅಭ್ಯರ್ಥಿ ವಿಜಯಶಂಕರ್‌ಗೆ 8 ವಿಧಾನಸಭಾ ಕ್ಷೇತ್ರಗಳ ಹಳ್ಳಿ, ಹಳ್ಳಿಗಳನ್ನು ಸುತ್ತಿ ಮತದಾರರನ್ನು ತಲುಪಲು ಸಾಧ್ಯವಾಗಲೇ ಇಲ್ಲ. ಮೈತ್ರಿ ಅಭ್ಯರ್ಥಿ ಘೋಷಣೆಯಾಗುವ ವೇಳೆಗೆ ಪ್ರತಾಪ್‌ ಸಿಂಹ ಕ್ಷೇತ್ರದಲ್ಲಿ 2 ಸುತ್ತಿನ ಪ್ರಚಾರ ಮುಗಿಸಿದ್ದರು.

ಕೈಕೊಟ್ಟ ಜಿಟಿಡಿ: ಜತೆಗೆ, ಜೆಡಿಎಸ್‌ನ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಕೈ ಕೊಟ್ಟಿದ್ದರಿಂದ ಹೆಸರಿಗೆ ಮೈತ್ರಿ ಅಭ್ಯರ್ಥಿಯಾದರೂ ಕಾಂಗ್ರೆಸ್‌ ಏಕಾಂಗಿ ಹೋರಾಟ ನಡೆಸಬೇಕಾಯಿತು. ಅಲ್ಲದೆ, ಜೆಡಿಎಸ್‌ಗೆ ಕ್ಷೇತ್ರ ತಪ್ಪಿಸಿದ ಸಿದ್ದರಾಮಯ್ಯ ಅವರ ಮೇಲೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಜೆಡಿಎಸ್‌ನ ಸಾಂಪ್ರದಾಯಿಕ ಒಕ್ಕಲಿಗ ಮತಬ್ಯಾಂಕ್‌ ಸಾರಾಸಗಟಾಗಿ ಬಿಜೆಪಿಗೆ ಬಿದ್ದವು. ಜತೆಗೆ, ಮೋದಿ ಅಲೆ ಕಾಂಗ್ರೆಸ್‌ಗೆ ಮುಳುವಾಯಿತು.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

1-bharat

Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.