ಇಂದು ವಿಶ್ವ ಪ್ರವಾಸೋದ್ಯಮ ದಿನ; ಪ್ರವಾಸೋದ್ಯಮ ಪುನರಾಭಿವೃದ್ಧಿಯ ಚಿಂತನೆ
Team Udayavani, Sep 27, 2022, 7:15 AM IST
1980ರಲ್ಲಿ ವಿಶ್ವಸಂಸ್ಥೆಯ ಪ್ರವಾಸೋದ್ಯಮ ಸಂಸ್ಥೆ (ಯುಎನ್‌ಡಬ್ಲ್ಯುಟಿಒ) ಸೆ.27ನ್ನು ವಿಶ್ವ ಪ್ರವಾಸೋದ್ಯಮ ದಿನವಾಗಿ ಘೋಷಣೆ ಮಾಡಿತು. ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಮೌಲ್ಯದ ಮೇಲೆ ಪ್ರವಾಸೋದ್ಯಮ ಹೇಗೆ ಪ್ರಭಾವಿತವಾಗಿದೆ ಎಂಬುದನ್ನು ತಿಳಿಸುವ ಉದ್ದೇಶವನ್ನೂ ಇದು ಹೊಂದಿದೆ. ಪ್ರವಾಸೋದ್ಯಮ ಕ್ಷೇತ್ರ ಹೆಚ್ಚು ಜನರಿಗೆ ಉದ್ಯೋಗ ನೀಡುವ ವಲಯವೂ ಆಗಿದೆ. 2022ನೇ ಸಾಲಿನಲ್ಲಿ ನಡೆಯುವ ವಿಶ್ವ ಪ್ರವಾಸೋದ್ಯಮ ದಿನವು 42ನೇ ಅಂತಾರಾಷ್ಟ್ರೀಯ ಆಚರಣೆಯಾಗಿದೆ. ಇಂಡೋನೇಶ್ಯಾದ ಬಾಲಿಯಲ್ಲಿ ಈ ಬಾರಿಯ ಅಧಿಕೃತ ಕಾರ್ಯಕ್ರಮ ನಡೆಯಲಿದೆ. ಕೋವಿಡ್-19ರ ಅನಂತರದಲ್ಲಿ ಪ್ರವಾಸೋದ್ಯಮ ಪ್ರಗತಿಯ ಅವಲೋಕನ, ಪ್ರವಾಸೋದ್ಯಮ ಕ್ಷೇತ್ರದ ಬಗ್ಗೆ ಮರು ಚಿಂತನೆ ಮತ್ತು ಪುನರ್ ಅಭಿವೃದ್ಧಿಗೆ ಪ್ರೇರೇಪಿಸಲು ಈ ಬಾರಿ “ರೀಥಿಂಕಿಂಗ್ ಟೂರಿಸಂ’ ಥೀಮ್ ನೀಡಲಾಗಿದೆ. ಒಟ್ಟಾರೆಯಾಗಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬೂಸ್ಟರ್‌ಡೋಸ್ ನೀಡುವ ಆವಶ್ಯಕತೆ ಇದ್ದು ಈ ದಿಸೆಯಲ್ಲಿ ಸರಕಾರ, ಸಮುದಾಯ ಮತ್ತು ಖಾಸಗಿ ವಲಯ ಪರಸ್ಪರ ಕೈಜೋಡಿಸಬೇಕಿದೆ.
ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಯ ಪ್ರಮುಖ ಕೀಲಿಕೈ. ಕೊರೊನಾ ಮಹಾಮಾರಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಲವಾದ ಪೆಟ್ಟು ನೀಡಿದೆ. ಕಳೆದ ಎರಡು ವರ್ಷ ಪ್ರವಾಸೋದ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಬಹುತೇಕ ಎಲ್ಲ ವಲಯಗಳು ಸಾಕಷ್ಟು ಸೊರಗಿವೆ. ಇತ್ತೀಚಿನ ಕೆಲವು ತಿಂಗಳುಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರ ಚೇತರಿಕೆಯ ಜತೆಗೆ ಮೊದಲಿನ ಲಯಕ್ಕೆ ಬರುತ್ತಿವೆ. ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ, ಹೂಡಿಕೆ, ಉದ್ಯೋಗಾವಕಾಶ ಹೀಗೆ ಎಲ್ಲವೂ ಚೇತರಿಸಿಕೊಂಡಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೂಡ ಹೆಚ್ಚಿನ ಉತ್ತೇಜವನನ್ನು ನೀಡುತ್ತಿವೆ.
ಸುಸ್ಥಿರ ಪ್ರವಾಸೋದ್ಯಮವು ಪರಿಸರ ಪ್ರವಾಸೋದ್ಯಮಕ್ಕೆ ಪೂರಕವಾಗುತ್ತದೆ. ಪರಿಸರ ಸ್ನೇಹಿ ಬೆಳವಣಿಗೆಯೂ ದೀರ್ಘಕಾಲದ ಆರ್ಥಿಕ ಬೆಳವಣಿಯ ಅಡಿಪಾಯವಾಗಿರಲಿದೆ. ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಬರುವ ಪ್ರತಿಯೊಬ್ಬರಿಗೂ ಅಲ್ಲಿ ಇನ್ನಷ್ಟು ಹೊತ್ತು ಕಾಲಕಳೆಯಬೇಕು ಮತ್ತು ಅಲ್ಲಿನ ವಾತಾವರಣ ಹಿತಕರವಾಗಿದೆ ಎಂದೆನಿಸಬೇಕು. ಈ ನಿಟ್ಟಿನಲ್ಲಿ ಇಡೀ ಪರಿಸರವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿ, ಸ್ಥಳೀಯರಿಗೆ ಇನ್ನಷ್ಟು ಆರ್ಥಿಕ ಬಲ ನೀಡುವ ಕೇಂದ್ರವಾಗಿಯೂ ಪ್ರವಾಸಿ ಸ್ಥಳ ಪರಿವರ್ತನೆಗೊಳ್ಳಬೇಕು. ಬಹುಮುಖ್ಯವಾಗಿ ಪ್ರತೀ ಪ್ರವಾಸಿಗನೂ ಕನೆಕ್ಟಿವಿಟಿಯನ್ನು ಹೆಚ್ಚು ನಿರೀಕ್ಷೆ ಮಾಡುತ್ತಾನೆ. ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಇರುವ ಸಂಪರ್ಕ ವ್ಯವಸ್ಥೆ, ಮಾರ್ಗಸೂಚಿ ಫಲಕಗಳು ಹೀಗೆ ಸಣ್ಣಸಣ್ಣ ಅಂಶವೂ ಪ್ರವಾಸೋದ್ಯಮದಲ್ಲಿ ಅತೀಮುಖ್ಯವಾಗುತ್ತದೆ.
ವೆಲ್‌ನೆಸ್ ಟೂರಿಸಂ
ಪ್ರವಾಸೋದ್ಯಮ ವಲಯದ ನವೀನ ಪರಿಕಲ್ಪನೆಯಾಗಿರುವ ವೆಲ್‌ನೆಸ್ ಟೂರಿಸಂ ಪ್ರಸ್ತುತ ಆದ್ಯತ ವಲಯವಾಗಿದೆ. ವೈದ್ಯಕೀಯ ಪ್ರವಾಸೋದ್ಯಮ(ಮೆಡಿಕಲ್ ಟೂರಿಸಂ)ಕ್ಕೂ ವೆಲ್‌ನೆಸ್ ಪ್ರವಾಸೋದ್ಯಮಕ್ಕೂ ಸಾಕಷ್ಟು ವ್ಯತ್ಯಾಸವಿದೆ. ವೆಲ್‌ನೆಸ್ ಪ್ರವಾಸೋದ್ಯಮದಲ್ಲಿ ಯೋಗ, ಆಯುರ್ವೇದ, ಧ್ಯಾನ, ಆಹಾರ ವಿಧಾನದ ಜತೆಗೆ ಜೀವನಶೈಲಿಯೂ ಸೇರಿದಂತೆ ಪ್ರವಾಸೋದ್ಯಮದ ಭಾಗವಾಗಿ ಆರೋಗ್ಯ ಯೋಗಕ್ಷೇಮದ ಎಲ್ಲವನ್ನೂ ಇದು ಒಳಗೊಂಡಿರುತ್ತದೆ. ಸ್ಥಳೀಯ ಆರ್ಥಿಕತೆಗೆ ಈ ಮೂಲಕ ಉತ್ತೇಜನ ನೀಡಿ, ದೇಶದ ಆರ್ಥಿಕತೆಯನ್ನು ಸದೃಢಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಲಿದೆ.
ಸಮುದಾಯದ ಸಹಭಾಗಿತ್ವ
ಇತ್ತೀಚಿನ ವರ್ಷಗಳಲ್ಲಿ ಸಮುದಾಯ ಆಧಾರಿತ ಪ್ರವಾಸೋದ್ಯಮ ಹೆಚ್ಚು ಪ್ರಾಮುಖ್ಯ ಪಡೆಯುತ್ತಿದೆ. ಸ್ಥಳೀಯ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ ಒಂದೆಡೆಯಾದರೆ ಪ್ರವಾಸೋದ್ಯಮವನ್ನು ಸ್ಥಳೀಯ ಪರಿಸರ, ಜಾನಪದ, ಸಂಸ್ಕೃತಿ ಮತ್ತು ಪರಂಪರೆ ಉಳಿಸಿಕೊಂಡು ಅಭಿವೃದ್ಧಿಪಡಿಸುವ ಅಂಶವೂ ಇದರಲ್ಲಿ ಸೇರಿದೆ. ಸ್ಥಳೀಯರ ಜೀವನಶೈಲಿ ಮತ್ತು ಆರ್ಥಿಕ ಪ್ರಗತಿಗೂ ಇದು ಸಹಕಾರಿಯಾಗಲಿದೆ. ಸ್ಥಳೀಯರ ಸಹಭಾಗಿತ್ವದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡುವ ಜತೆ ಜತೆಗೆ ಸ್ವಾಲಂಬನೆಗೆ ದಾರಿ ಸೃಷ್ಟಿಸಿಕೊಡಬೇಕು. ಕೌಶಲಾಧಾರಿತ ಉದ್ಯೋಗ ಸೃಷ್ಟಿ ಮಾಡಿ ಸ್ಥಳೀಯವಾಗಿ ಜನರಿಗೆ ಉದ್ಯೋಗ ಒದಗಿಸುವುದು ಮುಖ್ಯವಾಗುತ್ತದೆ.
ಕೊರೊನಾ ಹೊಡೆತ, ಚೇತರಿಕೆ
ಕೊರೊನಾದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಆಗಿರುವ ಹಿನ್ನೆಡೆಯನ್ನು ಅನೇಕ ಸಂಸ್ಥೆಗಳು ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡಿವೆ. ಭಾರತದ ಪ್ರವಾಸೋದ್ಯಮ ವಲಯಕ್ಕೆ ಸರಿ ಸುಮಾರು 5 ಲಕ್ಷ ಕೋ.ರೂ.ಗಳಿಗೂ ಅಧಿಕ ನಷ್ಟವಾಗಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಪ್ರಯಾಣ ನಿರ್ಬಂಧ ಒಂದೆಡೆಯಾದರೆ ಆರ್ಥಿಕ ವಹಿವಾಟು ಸ್ಥಗಿತಗೊಂಡಿತ್ತು. ಉತ್ಪಾದನ ಕ್ಷೇತ್ರವೂ ಸ್ತಬ್ಧವಾಗಿತ್ತು. ಹೊಟೇಲ್ ಸಹಿತ ಆತಿಥ್ಯ ಕ್ಷೇತ್ರವೂ ಬಹುತೇಕ ಮುಚ್ಚಿತ್ತು. ಒಟ್ಟಾರೆ ಪರಿಣಾಮ ಲಕ್ಷಾಂತರ ಉದ್ಯೋಗ ನಷ್ಟವೂ ಆಗಿದೆ. ಕೊರೊನಾ ಅನಂತರದಲ್ಲಿ ಪ್ರವಾಸೋದ್ಯವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.
ರಾಜ್ಯ ಕರಾವಳಿಯಲ್ಲಿ ಪ್ರವಾಸಿ ತಾಣಗಳಿಗೆ ಹೊಸ ಸ್ಪರ್ಶ
ಕೇಂದ್ರ ಸರಕಾರ ಸಾಗರಮಾಲಾ ಯೋಜನೆಯಡಿಯಲ್ಲಿ ಜಲ ಸಾರಿಗೆ ಉತ್ತೇಜನಕ್ಕೆ ಕ್ರಮ ತೆಗೆದುಕೊಳ್ಳುತ್ತಿದೆ. ಮಣಿಪಾಲದಿಂದ ಹಂಗಾರಕಟ್ಟೆಗೆ ಜಲಮಾರ್ಗ ಅಭಿವೃದ್ಧಿಗೆ ಈಗಾಗಲೇ ಈ ಯೋಜನೆಯಲ್ಲಿ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಹಲವು ಕಡೆಗಳಲ್ಲಿ ತೇಲುವ ಜೆಟ್ಟಿ ನಿರ್ಮಾಣಕ್ಕೂ ಕಾರ್ಯಸೂಚಿ ಸಿದ್ಧಪಡಿಸಿದೆ. ಈ ಹಿಂದೆ ಗಂಗೊಳ್ಳಿಯಲ್ಲಿ ಕೋಸ್ಟರ್ ಬರ್ತ್ ಇತ್ತು (ವಾಣಿಜ್ಯ ಉದ್ದೇಶದ ಬಂದರು). ಅದನ್ನು ಪುನಃಸ್ಥಾಪಿಸಲು ಅನುದಾನ ಹಂಚಿಕೆ ಮಾಡುವ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿವೆ. ರಾಜ್ಯ ಸರಕಾರದಿಂದ ಕರಾವಳಿ ಬಂದರುಗಳನ್ನು ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಯೋಜನೆ ಸಿದ್ಧವಾಗುತ್ತಿದೆ. ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳನ್ನು ಸರ್ಕ್ನೂಟ್ ವ್ಯವಸ್ಥೆಯಲ್ಲಿ ಅಭಿವೃದ್ಧಿಪಡಿಸಲು ಸೂಕ್ತ ಕಾರ್ಯಸೂಚಿ ಸಿದ್ಧವಾಗುತ್ತಿದೆ.
ಟೆಂಪಲ್ ಟೂರಿಸಂ ಅಡಿಯಲ್ಲಿ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ ಮತ್ತು ಧಾರ್ಮಿಕ ಕೇಂದ್ರಗಳಿಗೆ ಬರುವ ಜನರಿಗೆ ಬೇಕಾದ ಮೂಲಸೌಕರ್ಯ ಒದಗಿಸುವ ವ್ಯವಸ್ಥೆ ನಡೆಯುತ್ತಿದೆ. ಧಾರ್ಮಿಕ ಕೇಂದ್ರಗಳಲ್ಲಿ ಇಡೀ ಜಿಲ್ಲೆಯ ಪ್ರವಾಸೋದ್ಯಮ ಮಾಹಿತಿ ಲಭ್ಯವಾಗುವ ಮಾದರಿಯಲ್ಲಿ ಡಿಜಿಟಲ್ ಸೂಚನಾ ಫಲಕಗಳನ್ನು ಅಳವಡಿಸಲಾಗುತ್ತಿದೆ. ಅದು ವೀಡಿಯೋ ರೂಪದಲ್ಲೂ ಇರಲಿದೆ. ಇದರಿಂದ ಸರ್ಕ್ನೂಟ್ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲ ಆಗಲಿದೆ. ಪ್ರವಾಸಿಗರು ಧಾರ್ಮಿಕ ಕ್ಷೇತ್ರ ನೋಡಿದ ಅನಂತರದಲ್ಲಿ ಸ್ಥಳೀಯವಾಗಿ ಸಿಗುವ ಅಥವಾ ಅಲ್ಲಿಂದ ಸಂಪರ್ಕ ವ್ಯವಸ್ಥೆ ಚೆನ್ನಾಗಿರುವ ಇನ್ನೊಂದು ಪ್ರವಾಸಿ ತಾಣಕ್ಕೆ ಸುಲಭವಾಗಿ ಹೋಗಲು ಆಗುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಧಾರ್ಮಿಕ ಪ್ರವಾಸೋದ್ಯಮದ ಜತೆಗೆ ಬೀಚ್ ಮತ್ತು ಚಾರಣ, ವನ್ಯಜೀವಿ, ಅರಣ್ಯ ಹೀಗೆ ಒಂದಕ್ಕೊಂದು ಲಿಂಕ್ ಮಾಡಲಾಗುತ್ತಿದೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸರ್ಕ್ನೂಟ್ ಪ್ಲಾನ್ ಅಲ್ಲಿನ ಪ್ರವಾಸೋದ್ಯಮದ ಸ್ಥಿತಿಗತಿ ಮತ್ತು ಸ್ಥಳಗಳ ಆಧಾರದಲ್ಲಿ ಸಿದ್ಧಪಡಿಸಲಾಗುತ್ತಿದೆ. ಪ್ರವಾಸೋದ್ಯಮ ಕ್ಷೇತ್ರಕ್ಕೆ ದೇಶ ವಿದೇಶಗಳಿಂದಲೂ ಹೂಡಿಕೆಯನ್ನು ಆಹ್ವಾನಿಸಲಾಗುತ್ತಿದೆ. ರಾಜ್ಯ ಸರಕಾರವೂ ಈ ನಿಟ್ಟಿನಲ್ಲಿ ಕೆಲವು ಸಂಸ್ಥೆಗಳ ಜತೆಗೆ ಈಗಾಗಲೇ ಒಪ್ಪಂದವನ್ನು ಮಾಡಿಕೊಂಡಿದೆ.
ಕೊರೊನಾನಂತರ ಪ್ರವಾಸೋದ್ಯಮ ಕ್ಷೇತ್ರವು ಹೊಸ ಸಾಧ್ಯತೆ, ಅವಕಾಶಗಳತ್ತ ದೃಷ್ಟಿ ಹರಿಸಿದೆ. ಸಹಜವಾಗಿಯೇ ದೇಶದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಚಿಗಿತುಕೊಂಡಿವೆ. ಇದೇ ನಿಟ್ಟಿನಲ್ಲಿ ಈ ಬಾರಿಯ ವಿಶ್ವ ಪ್ರವಾಸೋದ್ಯಮ ದಿನದ ಧ್ಯೇಯವನ್ನು ಇರಿಸಿಕೊಳ್ಳಲಾಗಿದ್ದು ಇಡೀ ಕ್ಷೇತ್ರದ ಪುನ ರಾವಲೋಕನದ ಜತೆಯಲ್ಲಿ ನವೀನ ದೃಷ್ಟಿಕೋನದೊಂದಿಗೆ ಪ್ರಗತಿಯ ಹಾದಿಯಲ್ಲಿ ವಲಯವನ್ನು ಕೊಂಡೊಯ್ಯುವ ಸಂಕಲ್ಪ ತೊಡಲಾಗಿದೆ. ಸದ್ಯದ ಸ್ಥಿತಿಯಲ್ಲಿ ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ಪ್ರವಾಸೋ ದ್ಯಮವನ್ನು ಇನ್ನೊಂದು ಮಜಲಿನತ್ತ ಕೊಂಡೊಯ್ಯುವಲ್ಲಿ ಜಾಗತಿಕ ಸಮುದಾಯ ದೃಷ್ಟಿಹರಿಸಿರುವುದಂತೂ ನಿಜ.
-ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.