ಉಪರಾಷ್ಟ್ರಪತಿ ಆಯ್ಕೆ ಹೇಗೆ? ಚುನಾವಣೆ ಯಾವಾಗ?
Team Udayavani, Jul 18, 2022, 6:30 AM IST
ಚುನಾವಣೆ ಯಾವಾಗ?
ಆ. 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ಅಧಿಕಾರಾವಧಿ ಮುಗಿಯುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ.
ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣನೆ ಆರಂಭವಾಗಿ ರುವಂತೆ, ಉಪರಾಷ್ಟ್ರಪತಿ ಚುನಾವಣ ಅಖಾಡವೂ ಸಿದ್ಧವಾಗುತ್ತಿದೆ. ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನ್ಕರ್ ಮತ್ತು ವಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಸ್ಪರ್ಧೆ ಮಾಡಲಿದ್ದಾರೆ. ಹಾಗಾದರೆ, ಈ ಚುನಾವಣೆ ಹೇಗೆ ನಡೆಯುತ್ತದೆ? ಇದರ ಮತದಾರರು ಯಾರು? ಈ ವಿವರ ಇಲ್ಲಿದೆ.
ಯಾರು ಮತದಾರರು?
ಆರ್ಟಿಕಲ್ 66ರ ಪ್ರಕಾರ, ಉಪರಾಷ್ಟ್ರಪತಿ ಚುನಾವಣೆಗೆ ಮತ ಹಾಕುವವರು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು. ಇದು ಸೀಕ್ರೆಟ್ ಬ್ಯಾಲೆಟ್ ಮತದಾನವಾಗಿದ್ದು, ಸದಸ್ಯರು ಪ್ರಾಶಸ್ತ್ಯದ ಮತ ಹಾಕಬಹುದು. ಮೊದಲನೇ ಪ್ರಾಶಸ್ತ್ಯದ ಮತ ಹಾಕದಿದ್ದರೆ ಅದು ಅಸಿಂಧುವಾಗುತ್ತದೆ. ಎಲ್ಲರೂ ತಾವು ಇಚ್ಛಿಸುವ ಅಭ್ಯರ್ಥಿಗೇ ಮೊದಲ ಪ್ರಾಶಸ್ತ್ಯದ ಮತ ಹಾಕಬೇಕು.
ಸ್ಪರ್ಧಿಸಲು ಅರ್ಹತೆ ಏನು?
ಈ ಚುನಾವಣೆಯಲ್ಲಿ ಸ್ಪರ್ಧಿಸುವವರು ಲೋಕಸಭೆ ಅಥವಾ ರಾಜ್ಯಸಭೆಯ ಸದಸ್ಯರಾಗಿರಬಾರದು. ಒಮ್ಮೆ ಸ್ಪರ್ಧಿಸಬೇಕು ಅಂದುಕೊಂಡರೆ, ನಾಮಪತ್ರ ಸಲ್ಲಿಕೆ ಮಾಡುವ ಮುನ್ನವೇ ಸದರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇವರ ಅವಧಿ 5 ವರ್ಷಗಳಾಗಿದ್ದು, ಒಂದು ವೇಳೆ ನಿಗದಿತ ಅವಧಿಯಲ್ಲಿ ಹೊಸ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಆಗದಿದ್ದರೆ, ಮುಂದಿನ ವ್ಯವಸ್ಥೆಯಾಗುವ ವರೆಗೂ ಅವರೇ ಮುಂದುವರಿಯಬಹುದು.
ಉಪರಾಷ್ಟ್ರಪತಿಯ ಅಧಿಕಾರವೇನು?
ಉಪರಾಷ್ಟ್ರಪತಿಯವರ ಪ್ರಮುಖ ಅಧಿಕಾರವೇ ರಾಜ್ಯಸಭೆಯ ಸಭಾಪತಿಯಾಗುವುದು. ಒಂದು ವೇಳೆ ರಾಷ್ಟ್ರಪತಿಗಳು ಅನಾರೋಗ್ಯ, ಸಾವು, ರಾಜೀನಾಮೆ ಸೇರಿದಂತೆ ಇನ್ನಾವುದೇ ಸಂದರ್ಭದಲ್ಲಿ ಅಧಿಕಾರ ಚಲಾಯಿಸಲು ಆಗದಿದ್ದರೆ ಆಗ ಉಪರಾಷ್ಟ್ರಪತಿಗಳೇ ಹಂಗಾಮಿಯಾಗಿ ಅಧಿಕಾರ ನಡೆಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.