ಕತಾರ್ : ವಿಶ್ವ ಪರಿಸರ ದಿನಾಚರಣೆ
Team Udayavani, Jul 1, 2021, 11:11 PM IST
ಕರ್ನಾಟಕ ಸಂಘ ಕತಾರ್ ವತಿಯಿಂದ ವಿಶ್ವ ಪರಿಸರ ದಿನವನ್ನು ಗಅಲ್ಫಾರ್ ಅಲ್ ಮಿಸ್ನಾದ್ ಸಂಸ್ಥೆಯ ನೂತನ ಜೆಯರ್ ಅಲ್ ಸಮೂರ್‌ನ ಆವರಣದಲ್ಲಿ ಜೂ. 11ರಂದು ಆಚರಿಸಲಾಯಿತು.
ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಬಾಬುರಾಜನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಗಅಲ್ಫಾರ್ ಅಲ್ ಮಿಸ್ನಾದ್ ಸಂಸ್ಥೆಯ ಮೂಲ ಸೌಕರ್ಯಗಳ ವಿಭಾಗದ ಹಿರಿಯ ಪ್ರಧಾನ ವ್ಯವಸ್ಥಾಪಕ ಹೇಮಚಂದ್ರನ್ ಅವರು ಉಪಸ್ಥಿತರಿದ್ದರು. ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್ ಕತಾರ್, ಕೆ.ಎಂ.ಸಿ.ಎ., ಎಂ.ಸಿ.ಎ., ಎಂ.ಸಿ.ಸಿ. ಹಾಗೂ ಎಸ್.ಕೆ.ಎಂ.ಡಬ್ಲೂé.ಎ. ಇವುಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕೋವಿಡ್ ಮುಂಜಾಗ್ರತ ಕ್ರಮಗಳನ್ನು ಪಾಲಿಸಿಕೊಂಡು ಸುಮಾರು ಒಂದು ವರ್ಷದ ಬಳಿಕ ಎಲ್ಲರೂ ಒಗ್ಗೂಡಿ ಹೊರ ಆವರಣದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಮೊದಲೇ ನಿರ್ಮಿಸಿದ್ದ ಹೊಂಡದಲ್ಲಿ ಗಣ್ಯರು, ಸಭಿಕರೆಲ್ಲರೂ ಸೇರಿ ಮಾವು, ಬೇವು ಮೊದಲಾದ ಗಿಡ ನೆಟ್ಟು ಸಂತಸ ವ್ಯಕ್ತಪಡಿಸಿದರು.
ಒಳಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಬಾಬು ರಾಜನ್ ಮಾತನಾಡಿದರು. ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ ರಾವ್ ಅವರು ಎಲ್ಲರನ್ನೂ ಸ್ವಾಗತಿಸಿದರು, ಪರಿಸರ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಕಾರ್ಯದರ್ಶಿ ಕುಮಾರ ಸ್ವಾಮಿ ಧನ್ಯವಾದ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!
Akshaya Patra: ಗ್ಯಾರಂಟಿಗಳೆಂದರೆ ಆರ್ಥಿಕ ಶಕ್ತಿ ತುಂಬುವ ಅಕ್ಷಯ ಪಾತ್ರೆ
“ರಾಜೀ’ಕೀಯದಿಂದ ಗಡಿ ಸಮಸ್ಯೆ ಜೀವಂತ… 6 ರಾಜ್ಯಗಳ ಗಡಿಭಾಗದಲ್ಲೂ ಒಂದಲ್ಲ ಒಂದು ಸಮಸ್ಯೆ
Balipadyami: ಅನ್ನದಾತೆ ಆರಾಧನೆಯ ಬಲಿಪಾಡ್ಯಮಿ… ಇಂದು ಬಲಿಪಾಡ್ಯಮಿ, ಗೋಪೂಜೆ
Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.