ಇಂದು ವಿಶ್ವ ಸಾಕ್ಷರತಾ ದಿನ : ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬು ಸಾಕ್ಷರತೆ


Team Udayavani, Sep 8, 2021, 6:20 AM IST

ಇಂದು ವಿಶ್ವ  ಸಾಕ್ಷರತಾ ದಿನ : ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬು ಸಾಕ್ಷರತೆ

ದೇಶದ ಜನಜಾಗೃತಿಗೆ, ಜೀವನ ಮಟ್ಟ ಮತ್ತು ಕೌಶಲವನ್ನು ವೃದ್ಧಿಸಲು ಸಾಕ್ಷರತೆ ಅತೀ ಅವಶ್ಯ. ಆಧುನಿಕ ಸಮಾಜದಲ್ಲಿ ಸಾಕ್ಷರತೆ ನಿತ್ಯ ಬದುಕಿನ ಒಂದು ಸಾಧನ. ಬಡತನದ ವಿರುದ್ಧ ಒಂದು ರಕ್ಷಣ ವ್ಯವಸ್ಥೆ ಎನ್ನಬಹುದು. ಪ್ರಜಾಪ್ರಭುತ್ವ ಸ್ಥಾಪನೆಗೆ ಒಂದು ವೇದಿಕೆ. ದೇಶದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಗುರುತನ್ನು ಪ್ರಚುರಪಡಿಸುವ ಒಂದು ವಾಹನ! ವಿಶೇಷವಾಗಿ ಮಹಿಳೆ ಮತ್ತು ಹೆಣ್ಣುಮಕ್ಕಳ ಪಾಲಿಗೆ ಸಾಕ್ಷರತೆಯು ಕುಟುಂಬ ಆರೋಗ್ಯ ಮತ್ತು ಪೌಷ್ಟಿಕತೆಯ ಏಜೆಂಟ್‌. ಶಿಕ್ಷಣ ಪ್ರತಿಯೊಬ್ಬರ ಮೂಲ ಭೂತ ಹಕ್ಕು.

ಓದುವ, ಬರೆಯುವ ಮತ್ತದನ್ನು ಗ್ರಹಿಸಿ, ಪರಿಣಾಮಕಾರಿಯಾಗಿ ಸಂವಹನ ನಡೆಸುವ ಸಾಮರ್ಥ್ಯವನ್ನು ಸಾಕ್ಷರತೆ ಎಂದು ಪರಿಗಣಿಸಲಾಗುತ್ತದೆ. ಸಾಮಾಜಿಕ ಮತ್ತು ಮಾನವನ ಅಭಿವೃದ್ಧಿಗೆ ಅದೊಂದು ಇಂಧನ. ಸಾಕ್ಷರತೆ ಶಿಕ್ಷಣದ ಪಂಚಾಂಗ ಮಾತ್ರವಲ್ಲದೆ ಅಭಿವೃದ್ಧಿ ಶೀಲ ರಾಷ್ಟ್ರದ ಬೆನ್ನೆಲುಬು. ಭಾರತದಲ್ಲಿ ವಯಸ್ಕ ಸಾಕ್ಷರ ತೆಯು 15 ವರ್ಷ ಮೇಲ್ಪಟ್ಟವರಿಂದ ಮತ್ತು ಯುವ ಸಾಕ್ಷರತೆಯನ್ನು 15 ರಿಂದ 24 ವರ್ಷದೊಳಗಿನವರಿಂದ ಅಳೆಯಲ್ಪಡುತ್ತದೆ.

ಭಾರತದಲ್ಲಿ ಸಾಕ್ಷರತೆ:

ದೇಶದಲ್ಲಿ 7 ವರ್ಷ ದಾಟಿ ದವನಿಗೆ ಓದು ಬರಹ ತಿಳಿದರೆ ಅವನನ್ನು ಅಕ್ಷರಸ್ಥ ಎಂದು ಪರಿಗಣಿಸಲಾಗುತ್ತದೆ. ಭಾರತದ ಸರಾಸರಿ ಸಾಕ್ಷರತಾ ಪ್ರಮಾಣ ಶೇ.74. ಕೇರಳದಲ್ಲಿ ಅತೀ ಹೆಚ್ಚು ಎಂದರೆ ಶೇ. 94. ಬಿಹಾರದಲ್ಲಿ ಅತೀ ಕಡಿಮೆ ಎಂದರೆ ಶೇ. 64. ಸುಮಾರು 287 ಮಿಲಿಯನ್‌ ಅನಕ್ಷರಸ್ಥ ವಯಸ್ಕರಿಗೆ ತವರಿನಂತಿರುವ ಭಾರತ ವಿಶ್ವದಲ್ಲಿ ಅತೀ ಹೆಚ್ಚು ಅನಕ್ಷರಸ್ಥ ಜನರಿರುವ ದೇಶವಾಗಿದೆ. ಬಿಹಾರ, ಝಾರ್ಖಂಡ್‌ ಮತ್ತು ಉತ್ತರ ಪ್ರದೇಶ ದಲಿತ ಸಾಕ್ಷರತೆಯಲ್ಲಿ ತೀರಾ ಹಿಂದುಳಿದಿವೆ.

ದೇಶದ ಸಾಕ್ಷರತಾ ಬೆಳವಣಿಗೆ :

2011 ರ ಜನಗಣತಿಯಂತೆ ಭಾರತ ಶೇ. 74 (ಇತ್ತೀಚೆಗಿನ ಸರ್ವೇಯಂತೆ ಶೇ.77) ಸಾಕ್ಷರತಾ ಪ್ರಮಾಣ ಸಾಧಿಸಿದೆ. ಇದರಲ್ಲಿ ಪುರುಷ ಸಾಕ್ಷರತಾ ದರ ಶೇ.82. ಸ್ತ್ರೀ ಸಾಕ್ಷರತಾ ಪ್ರಮಾಣ 2011 ರಲ್ಲಿ ಶೇ. 65ರಷ್ಟಿತ್ತು. ಕೆಲವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾಕ್ಷರತಾ ದರ ಶೇ. 85. ಕೇರಳ ಶೇ. 94ರಷ್ಟು ಸಾಕ್ಷರತೆ ಸಾಧಿಸು ವುದರ ಮೂಲಕ ಪ್ರಥಮ ಸ್ಥಾನದಲ್ಲಿದ್ದರೆ ಲಕ್ಷದ್ವೀಪ ಮತ್ತು ಮಿಜೋರಾಂ ದ್ವಿತೀಯ, ತೃತೀಯ ಸ್ಥಾನದಲ್ಲಿದೆ. ಆಂಧ್ರಪ್ರದೇಶದ ಸಾಕ್ಷರತಾ ಪ್ರಮಾಣ ಶೇ.66 ಆಗಿದ್ದು ಕೊನೆಯ ಸ್ಥಾನದಲ್ಲಿದೆ. 1947ರ ಸಮಯದಲ್ಲಿ ಭಾರತದ ಸಾಕ್ಷರತಾ ದರ ಶೇ. 12ರಷ್ಟಾಗಿತ್ತು.

ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಯ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳುತ್ತದೆ. ಅದಕ್ಕಾಗಿ ಅದರಲ್ಲಿ ಹಲವು ಅಂಶಗಳನ್ನು ಸೇರಿಸಲಾಗಿದೆ. ಸಂವಿಧಾನದ ಪರಿವಿಡಿ 30ರಂತೆ, ಅಲ್ಪ ಸಂಖ್ಯಾಕರ ಶಿಕ್ಷಣ, ನಿರ್ದೇ ಶಕ ತಣ್ತೀಗಳಡಿ ಎಲ್ಲ ಭಾರತೀಯರಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ, ಪರಿವಿಡಿ 21 (ಎ) ಅನ್ವಯ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನ ಅವಕಾಶ, ಪರಿಚ್ಛೇದ 15, 17 ಮತ್ತು 46 ರಂತೆ ದುರ್ಬಲ ವರ್ಗದವರಿಗೆ ಶಿಕ್ಷಣ ಇವುಗಳಲ್ಲಿ ಕೆಲವು.

ಸರಕಾರಗಳಿಂದ ಉತ್ತೇಜನ :

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದಾಗಿನಿಂದಲೂ ಎಲ್ಲ ಸರಕಾರಗಳೂ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಲೇ ಬಂದಿವೆ. ಸ್ವಾತಂತ್ರ್ಯಪೂರ್ವಕ್ಕೆ ಹೋಲಿಸಿದಲ್ಲಿ ದೇಶ ಶೈಕ್ಷಣಿಕವಾಗಿ ಗಮನಾರ್ಹ ಸಾಧನೆಗೈದಿದೆಯಾದರೂ ಶತಪ್ರತಿಶತ ಸಾಕ್ಷರತೆಯನ್ನು ಸಾಧಿಸಲು ಸಾಧ್ಯವಾಗಿಲ್ಲ. ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳು, ಬಡವರು, ಪರಿಶಿಷ್ಟ ಜಾತಿ, ಪಂಗಡ, ಬುಡಕಟ್ಟು ಜನಾಂಗದವರು ಇನ್ನೂ ಶಾಲೆಗಳ ಮೆಟ್ಟಲೇರದಿರುವುದು ದೇಶ ಸಾಕ್ಷರತೆಯಲ್ಲಿ ಹಿಂದುಳಿಯಲು ಪ್ರಮುಖ ಕಾರಣಗಳಾಗಿವೆ. ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿದ್ಯಾರ್ಥಿ ವೇತನ, ವಸತಿ ಸಹಿತ ಶಾಲೆಗಳು, ಉಚಿತ ವಿದ್ಯಾರ್ಥಿ ನಿಲಯ, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಲೇಖನ ಸಾಮಗ್ರಿಗಳು, ಸೈಕಲ್‌ ಆದಿಯಾಗಿ ಹತ್ತು ಹಲವು ಯೋಜನೆ ಗಳನ್ನು ಅನುಷ್ಠಾನಗೊಳಿಸಿವೆ. 1995ರಲ್ಲಿ ಜಾರಿಗೆ ಬಂದ ಮಧ್ಯಾಹ್ನದ ಬಿಸಿಯೂಟ ಯೋಜನೆ ಇವುಗಳಲ್ಲಿ ಅತ್ಯಂತ ಮಹತ್ವಾ ಕಾಂಕ್ಷಿ ಯೋಜನೆಯಾಗಿದ್ದು ಇದರಿಂದ ಮಕ್ಕಳಿಗೆ ಶಿಕ್ಷಣದ ಜತೆಜತೆಯಲ್ಲಿ ಪೌಷ್ಟಿಕ ಆಹಾರವನ್ನು ನೀಡಲು ಸಾಧ್ಯವಾಗಿದೆ.

ನಿಪುಣ್‌ ಭಾರತ್‌:

ನೂತನ ಶಿಕ್ಷಣ ನೀತಿಯಡಿಯಲ್ಲಿ “ನಿಪುಣ್‌ ಭಾರತ್‌’ ಎಂಬ ಯೋಜನೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ಇದಕ್ಕೆ 2021-22 ಸಾಲಿನಲ್ಲಿ 2,688 ಕೋ.ರೂ.ಗಳನ್ನು ಮೀಸಲಿಡಲಾಗಿದೆ. 3 ರಿಂದ 9 ವರ್ಷದ ಮಕ್ಕಳಲ್ಲಿ  ಸಾಕ್ಷರತೆಯ ತಳಹದಿ ಮತ್ತು ಅಂಕೆ ಸಂಖ್ಯೆಗಳ ಕೌಶಲವನ್ನು ಸಾಧಿಸುವುದು (ಫೌಂಡೇಶನಲ್‌ ಲಿಟೆರೆಸಿ ಆಂಡ್‌ ನ್ಯೂಮೆರೆಸಿ- ಎಫ್ಎಲ್‌ಎನ್‌) ಈ ಯೋಜನೆಯ ಉದ್ದೇಶ. 2026-27 ರಲ್ಲಿ ಪ್ರತಿಯೊಂದು ವಿದ್ಯಾರ್ಥಿಯೂ ಎಫ್ಎಲ್‌ಎನ್‌ ಕೌಶಲವನ್ನು ಪಡೆಯುವಂತಾಗಬೇಕು. ಪ್ರಾಥಮಿಕ ಶಾಲೆಯ ಹಂತದಲ್ಲಿ ಚಟುವಟಿಕೆ – ಕಥೆ, ಕಲೆ, ಆಧಾರಿತ ಪಾಠ ನಿಪುಣ್‌ ಯೋಜನೆಯ ಪ್ರಮುಖ ಅಂಶಗಳಲ್ಲೊಂದಾಗಿದೆ. ಅಂಗನವಾಡಿ, ಕಿರಿಯ ಪ್ರಾಥಮಿಕ ಹಂತದ ಶಿಕ್ಷಕರಿಗೆ ಈ ನಿಟ್ಟಿನಲ್ಲಿ ವಿಶೇಷ ತರಬೇತಿಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆಯಲ್ಲದೆ ಯೋಜನೆಯ ಯಶಸ್ಸಿಗಾಗಿ ಹೆತ್ತವರು ಮತ್ತು ಸಮುದಾಯದ ಸಹಕಾರವನ್ನು ಪಡೆಯಲಾಗುವುದು.

-ಜಲಂಚಾರು ರಘುಪತಿ ತಂತ್ರಿ,  ಉಡುಪಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.