ಬಿಸಿಲ ಬೇಗೆ… ಇವು ಆರೋಗ್ಯ ರಕ್ಷಣೆಗೆ ಉತ್ತಮವಾದ ಹಣ್ಣುಗಳು


Team Udayavani, Oct 5, 2020, 5:05 PM IST

ಬಿಸಿಲ ಬೇಗೆ… ಇವು ಆರೋಗ್ಯ ರಕ್ಷಣೆಗೆ ಉತ್ತಮವಾದ ಹಣ್ಣುಗಳು

ಸಾಂದರ್ಭಿಕ ಚಿತ್ರ

ಬಿಸಿಲ ಧಗೆಯಂತೂ ದಿನ ದಿನೇ ಹೆಚ್ಚುತ್ತಲೇ ಇದೇ ಹೊರತು ಕಡಿಮೆಯಂತೂ ಆಗುತ್ತಿಲ್ಲ. ಹೀಗಿರುವಾಗ ನಮ್ಮ ಆರೋಗ್ಯದ ಕುರಿತು ಎಷ್ಟೇ ಕಾಳಜಿ ತೆಗೆದುಕೊಂಡರು ಕಡಿಮೆಯೇ. ಒಮ್ಮೆ ಮಳೆ ಬಂದು ಭೂಮಿ ತಂಪಾದರೆ ಸಾಕಪ್ಪಾ ಎನ್ನುವಂತಾಗಿದೆ.

ಬೇಸಿಗೆಯ ಧಗೆ ವಿಪರೀತವಾದಾಗ ಆರೋಗ್ಯಕ್ಕೂ ಅಪಾಯ ಸಹಜ. ಬಿಸಿ ಗಾಳಿ ಸೇರಿದಂತೆ ಅನೇಕ ರೀತಿಯ ಹವಾಮಾನ ಬದಲಾವಣೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು. ಹಾಗಾಗಿ ಬೇಸಿಗೆ ಮುಗಿಯುವವರೆಗೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸೋದು ಮುಖ್ಯ.

ಸಾಮಾನ್ಯವಾಗಿ ಬೇಸಿಗೆ ದಿನಗಳಲ್ಲಿ ನಮ್ಮ ದೇಹದಲ್ಲಿ ನೀರಿನಾಂಶ ಹೆಚ್ಚಿನ ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು ಇಲ್ಲದಿದ್ದರೆ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ. ಇದನ್ನು ತಡೆಯಲು ಹಣ್ಣಿನ ರಸವನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದು ಅತ್ಯಗತ್ಯವಾಗಿದೆ. ಆದಷ್ಟೂ ನೈಸರ್ಗಿಕವಾಗಿ ದೊರೆಯುವ ಪಾನೀಯಗಳ ಸೇವನೆಯಿಂದ ಆರೋಗ್ಯವನ್ನು ಮತ್ತಷ್ಟು ಉತ್ತಮವಾಗಿರಿಸಬಹುದು.  ದಿನಕ್ಕೆ 3ರಿಂದ 4ಲೀ ನೀರನ್ನು ಕುಡಿಯುವುದರಿಂದ ಬಿಸಿಲ ದಾಹವನ್ನು ಕಡಿಮೆ ಮಾಡಿಕೊಳ್ಳಬಹುದು.

ದೇಹವನ್ನು ತಂಪಾಗಿಡಲು ಹಣ್ಣು, ತರಕಾರಿ, ಸೊಪ್ಪು ಸೇವನೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಮಾಡಬೇಕು. ಇವುಗಳಲ್ಲಿ ನೀರಿನ ಅಂಶ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ದಾಹವನ್ನು ಕಡಿಮೆ ಮಾಡಿ ದೇಹದ ಉಷ್ಣವನ್ನು ಕಾಪಾಡುತ್ತದೆ. ಕಲ್ಲಂಗಡಿ, ನಿಂಬೆ, ಮುಸಂಬಿ, ಮುರುಗಲು(ಪುನರ್ಪುಳಿ) ಹೀಗೆ ವಿವಿಧ ಹಣ್ಣಿನ ರಸದಿಂದ ಮಾಡಲಾದ ಪಾನೀಯಗಳಿಗೆ ಆದ್ಯತೆ ನೀಡಬೇಕು.

ಬೇಸಿಗೆಯಲ್ಲಿ ಆರೋಗ್ಯ ರಕ್ಷಣೆ ಮಾಡಬಹುದಾದ ಹಣ್ಣುಗಳು:
ಎಳನೀರು: ಸುಡುವ ಬಿಸಿಲಿಂದಾಗಿ ದೇಹದಲ್ಲಿ ನಿರ್ಜಲೀಕರಣ ಉಂಟಾಗಿ ಉಷ್ಣತೆ ಏರುತ್ತದೆ ಇಂತಹ ಸಂದರ್ಭದಲ್ಲಿ ಎಳನೀರು ಬಹಳ ಉಪಯೋಗಿ.
ಹಲಸಿನ ಹಣ್ಣು: ಈ ಹಣ್ಣಿನಲ್ಲಿ ವಿಟಮಿನ್‌ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ.
ಕಲ್ಲಂಗಡಿ ಹಣ್ಣು: ಈ ಹಣ್ಣಿನಲ್ಲಿ 92%ದಷ್ಟು ನೀರಿನಂಶ ತುಂಬಿದೆ. ಇದು ದೇಹಕ್ಕೆ ಶಕ್ತಿ ನೀಡುವುದರೊಂದಿಗೆ ಜೀರ್ಣಶಕ್ತಿಯನ್ನೂ ಹೆಚ್ಚಿಸುತ್ತದೆ ಹಾಗೂ ದೇಹದಲ್ಲಿನ ಉರಿ ಕಡಿಮೆಗೊಳಿಸುತ್ತದೆ.
ಪಪ್ಪಾಯಿ ಹಣ್ಣು: ಇದರ ಸೇವನೆಯಿಂದ ದೇಹವನ್ನು ತಂಪಾಗಿಟ್ಟು, ಜೀರ್ಣಕ್ರಿಯೆಗೆ ಸಹಕಾರಿ ಹಾಗೂ ದೇಹದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ.
ಕರಬೂಜ ಹಣ್ಣು: ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು. ನೀರಿನಂಶ ಧಾರಾಳವಾಗಿರುವ , ದೇಹವನ್ನು ಸದಾ ತಂಪಾಗಿ ಇಡುವ ಕರಬೂಜ ಹಣ್ಣಿನ ಜ್ಯೂಸ್‌ ಬಾಯಾರಿಕೆ ನೀಗಿಸುವುದಷ್ಟೇ ಅಲ್ಲದೇ ಹೊಟ್ಟೆ ಉರಿಗೂ ರಾಮಾಬಾಣವಾಗಿದೆ.
ಅನಾನಸು ಹಣ್ಣು: ಇದರಲ್ಲಿ ವಿಟಮಿನ್‌ “ಎ” ಮತ್ತು ಬೆಟಾ ಕ್ಯಾರೋಟಿನ್‌ ಅಂಶಗಳಿವೆ. ಅನಾನಸು ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುವುದು. ಇದರಲ್ಲಿರುವ ನಾರಿನಾಂಶದಿಂದ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರ ಹಾಕುವುದು.
ಮಾವಿನಹಣ್ಣು: ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವಿನ ಹಣ್ಣಿನಲ್ಲಿ ಕಬ್ಬಿಣದಂಶ ಹಾಗೂ ಸೆಲೆನಿಯಮ್‌ ಅಧಿಕ ಪ್ರಮಾಣದಲ್ಲಿದೆ. ಈ ಹಣ್ಣಿನ ಸೇವನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
ನಿಂಬೆ ಹುಣ್ಣು: ಬಾಯಾರಿಕೆಯಾದಾಗ ನಿಂಬು ಪಾನೀಯ ಮಾಡಿ ಕುಡಿದರೆ ಬಾಯಾರಿಕೆ ಕಡಿಮೆಯಾಗುವುದು ಹಾಗೂ ದೇಹವನ್ನು ತಂಪಾಗಿಡುತ್ತದೆ.
ನೆಲ್ಲಿಕಾಯಿ: ಇದರಲ್ಲಿ ವಿಟಮಿನ್‌ ಸಿ, ಕಬ್ಬಿಣದಂಶ ಹಾಗೂ ರಂಜಕದಂಶ ಅಧಿಕವಾಗಿದೆ. ನೆಲ್ಲಿಕಾಯಿ ಜ್ಯೂಸ್‌ ಕುಡಿಯುವುದರಿಂದ ದೇಹದಲ್ಲಿರುವ ಅಧಿಕ ಕೊಬ್ಬಿನಾಂಶ ಕರಗುತ್ತದೆ.

ಇಷ್ಟೇ ಅಲ್ಲದೇ ಕೀವಿ ಹಣ್ಣು, ಅಂಜೂರ, ದ್ರಾಕ್ಷಿ, ಬಾಳೆಹಣ್ಣು, ನೇರಳೆ ಹಣ್ಣು ವಿವಿಧ ಹಣ್ಣು ಹಾಗೂ ಅದರ ಪಾನೀಯ ಸೇವನೆಯಿಂದ ಬೇಸಿಗೆಯಲ್ಲಿ ಆರೋಗ್ಯದ ಮೇಲಾಗಬಹುದಾದ ಪರಿಣಾಮಗಳಿಂದ ರಕ್ಷಣೆ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

1-zakir

Ustad; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

Aditya

Kaup: ಯುವ ಕ್ರಿಕೆಟಿಗ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

1-maha

Maharashtra: ಫಡ್ನವೀಸ್ ಸಂಪುಟಕ್ಕೆ 39 ಮಂದಿ ಸಚಿವರ ಸೇರ್ಪಡೆ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

vijayendra-3

Waqf: ಅನ್ವರ್‌ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5–jaundice

Jaundice: ಜಾಂಡಿಸ್‌ ಅಥವಾ ಅರಶಿನ ಕಾಮಾಲೆ

4-oral-cancer-2

Oral cancer: ನಿಶ್ಶಬ್ದ ಅಪಾಯ; ಬಾಯಿಯ ಕ್ಯಾನ್ಸರ್‌ ವಿರುದ್ಧ ಹೋರಾಟ

7-health

Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ

6-surgery

Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

missing

Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು

de

Puttur: ಮರದ ವ್ಯಾಪಾರಿ ಆತ್ಮಹ*ತ್ಯೆ; ಪ್ರಕರಣ ದಾಖಲು

1-zakir

Ustad; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ

accident

Mulki: ಬಪ್ಪನಾಡು; ಕಾರು-ರಿಕ್ಷಾ ಢಿಕ್ಕಿ

3

Kasaragod: ದಾರಿ ತರ್ಕ; ಹೊಡೆದಾಟ; ಆರು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.