ಚಳಿಗಾಲದ ಕೆಮ್ಮು, ಕಫ ನಿವಾರಣೆಗೆ ಮನೆ ಮದ್ದು ಆರೋಗ್ಯಕ್ಕೆ ಉತ್ತಮ!
Team Udayavani, Feb 10, 2020, 6:38 PM IST
ಸಾಂದರ್ಭಿಕ ಚಿತ್ರ
ಚಳಿಗಾಲದಲ್ಲಿ ಸಾಮಾನ್ಯವಾಗಿ ಕಾಡುವ ಶೀತ, ಕೆಮ್ಮು ಹಾಗೂ ನೆಗಡಿ ಸಮಸ್ಯೆಗಳು ಮಳೆಗಾಲದಲ್ಲಿ ಆವರಿಸಿಕೊಳ್ಳುತ್ತದೆ. ಇಂತಹ ತೊಂದರೆಗಳು ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆಯತ್ತ ಮುಖ ಮಾಡುವವರೇ ಹೆಚ್ಚು. ಆದರೆ ಅಡುಗೆ ಮನೆಯಲ್ಲಿರುವ ಕೆಲ ಪದಾರ್ಥಗಳನ್ನು ಬಳಸುವುದರಿಂದ ಇಂತಹ ಸಮಸ್ಯೆಗಳಿಗೆ ಆರಂಭದಲ್ಲೇ ಪರಿಹಾರ ಕಂಡುಕೊಳ್ಳಬಹುದು. ಅಂತಹ ಕೆಲವೊಂದು ಮನೆ ಮದ್ದುಗಳನ್ನು ಇಲ್ಲಿದೆ…
ಕೆಮ್ಮು ಶುರುವಾದಾಗ ಬೆಚ್ಚಗಿನ ನೀರನ್ನು ಕುಡಿಯುವುದು ಉತ್ತಮ. ಇದರಿಂದ ಗಂಟಲಿನ ಉರಿಯೂತ ಕಡಿಮೆಯಾಗುತ್ತದೆ.
ಒಂದೆಲಗದ ಕಷಾಯವನ್ನು ಸೇವಿಸಿದರೆ ಕೆಮ್ಮು ಗುಣವಾಗುತ್ತದೆ.
ಒಂದು ಚಮಚ ಜೇನುತುಪ್ಪಕ್ಕೆ ಕಾಳು ಮೆಣಸಿನ ಪುಡಿಯನ್ನು ಸೇರಿಸಿ ಸೇವಿಸಿದರೆ ಕಫದ ಸಮಸ್ಯೆಗೆ ಪರಿಹಾರ ಕಾಣಬಹುದು.
ಉಪ್ಪಿನ ಜೊತೆ ಶುಂಠಿ ಮತ್ತು ಲವಂಗವನ್ನು ಸೇರಿಸಿ ಜಗಿಯುವುದರಿಂದ ಕಫ ಮತ್ತು ಗಂಟಲ ಕೆರೆತವನ್ನು ದೂರ ಮಾಡಬಹುದು.
ನಿಂಬೆ, ಕಲ್ಲು ಸಕ್ಕರೆ ಮತ್ತು ಕಾಳುಮೆಣಸನ್ನು ಸೇರಿಸಿ ಗಟ್ಟಿಯಾದ ಪಾಕವನ್ನು ಮಾಡಿಕೊಳ್ಳಬೇಕು. ಈ ಪಾಕವನ್ನು ದಿನವೂ 2 ಚಮಚ ಸೇವಿಸುತ್ತಾ ಬಂದರೆ ಕಫ ಕಡಿಮೆಯಾಗುವುದಲ್ಲದೇ ಕೆಮ್ಮಿನ ಸಮಸ್ಯೆ ದೂರವಾಗುತ್ತದೆ.
ಶುಂಠಿಯ ಚಹಾವನ್ನು ಮಾಡಿ ಕುಡಿಯುವುದರಿಂದ ಸಹ ನೆಗಡಿ ಮತ್ತು ಕಫವನ್ನು ನಿವಾರಿಸಿಕೊಳ್ಳಬಹುದು.
ಒಂದು ಲೋಟ ನೀರಿಗೆ ಶುಂಠಿ, ನಿಂಬೆ ರಸ, ಕಾಳು ಮೆಣಸು ಮತ್ತು ಬೆಲ್ಲವನ್ನು ಹಾಕಿ ಕುದಿಸಬೇಕು. ಇದನ್ನು ಬಿಸಿ ಆರುವ ಮುನ್ನವೇ ಕುಡಿಯುವುದರಿಂದ ನೆಗಡಿ ಮತ್ತು ಕಫ ಕಡಿಮೆಯಾಗುತ್ತದೆ.
ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಗಂಟಲು ನೋವು ನಿವಾರಣೆಯಾಗುತ್ತದೆ.
ಇನ್ನು ಒಣ ಕೆಮ್ಮು ಇದ್ದರೆ ಏಲಕ್ಕಿ ಮತ್ತು ಶುಂಠಿ ಪುಡಿಯನ್ನು ಸೇರಿಸಿಕೊಂಡು ಸೇವಿಸುವುದು ಉತ್ತಮ.
ಹಾಗೆಯೇ ನೆಲ್ಲಿಕಾಯಿಯನ್ನು ಸೇವಿಸುತ್ತಿದ್ದರೆ ನೆಗಡಿ, ಕೆಮ್ಮು, ಕಫದ ಸಮಸ್ಯೆಯಿಂದ ದೂರವಿರಬಹುದು.
ಬಿಸಿ ಹಾಲಿಗೆ ಅರಿಶಿಣ ಮತ್ತು ಕಲ್ಲು ಸಕ್ಕರೆಯನ್ನು ಬೆರೆಸಿ ರಾತ್ರಿ ಮಲಗುವ ಮುನ್ನ ಕುಡಿದರೂ ಕಫ ಮತ್ತು ನೆಗಡಿ ಕಡಿಮೆಯಾಗುತ್ತದೆ.
ಜೇನು ಮತ್ತು ನಿಂಬೆರಸದೊಂದಿಗೆ ದಾಲ್ಚಿನಿಯನ್ನು ಸೇರಿಸಿ ಸೇವಿಸಿದರೂ ನೆಗಡಿ ಮತ್ತು ಕಫದ ಸಮಸ್ಯೆ ದೂರವಾಗುತ್ತದೆ.
ಕೆಮ್ಮು ಉಂಟಾಗುವ ಸಂದರ್ಭದಲ್ಲಿ ಕಲ್ಲು ಸಕ್ಕರೆ ಮತ್ತು ಲವಂಗವನ್ನು ಸೇವಿಸಿದರೆ ಸಮಸ್ಯೆ ಕಡಿಮೆಯಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ
JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?
“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…
ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!
ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.