ಹೋಳಿ : ಹೋಲಿಕಾ ದಹನದಂದು ಕೋವಿಡ್ ದಹಿಸಲಿ ಎಂದು ಪ್ರಾರ್ಥಿಸೋಣ


Team Udayavani, Mar 17, 2021, 4:34 PM IST

how do you celebrate the festival of Holi?

ಪಾಲ್ಗುಣ ಮಾಸದ ಶುಕ್ಷ ಪಕ್ಷದ ಪುರ್ಣಿಮೆಯಂದು ಹೊಳಿ ಹಬ್ಬ ಅಥವಾ ಕಾಮನ ಹಬ್ಬವನ್ನು ಆಚರಿಸುತ್ತೇವೆ. ಉತ್ತರ ಭಾರತದಲ್ಲಿ ಈ ಹಬ್ಬಕ್ಕೆ ಹೆಚ್ಚು ಮಹತ್ವವಿದೆ.

ಪುರಾಣದಲ್ಲಿ ಉಲ್ಲೇಖವಿರುವ ಕಾಮದಹನದಲ್ಲಿ- ತಾರಕಾಸುರನೆಂಬ ರಾಕ್ಷಸ ರಾಜ ಬ್ರಹ್ಮನ ವರಬಲದ ಸೊಕ್ಕಿನಿಂದ ಲೋಕದಲ್ಲಿ ಮೆರೆಯತೊಡಗಿದಾಗ, ಆತನ ಉಪಟಳ ತಾಳಲಾರದೆ, ಅವನ ಸಂಹಾರಕ್ಕೆ ದೇವತೆಗಳು ಉಪಾಯ ಹೂಡುತ್ತಾರೆ. ಶಿವನಿಗೆ ಜನಿಸಿದ ಏಳು ದಿನದ ಮಗುವಿನಿಂದ ಮಾತ್ರವೇ ತನಗೆ ಸಾವು ಎಂಬ ವರಬಲವೇ ಆತನ ಮದಕ್ಕೆ ಕಾರಣ. ಆದರೆ ಆ ಸಂದರ್ಭದಲ್ಲಿ ಶಿವನು ದಕ್ಷ ಯಜ್ಞದಲ್ಲಿ ದಾಕ್ಷಾಯಿಣಿಯನ್ನು ಕಳೆದುಕೊಂಡು ಭೋಗಸಮಾಧಿಯಲ್ಲಿದ್ದ ಕಾರಣ, ಮತ್ತೊಂದೆಡೆ ಶಿವೆಯೂ ಶಿವನಿಗಾಗಿ ತಪಸ್ಸು ಮಾಡುತ್ತಿದ್ದ ಕಾರಣ, ಅವರಿಬ್ಬರೂ ಒಂದುಗೂಡುವಂತಿರಲಿಲ್ಲ. ದೇವತೆಗಳು ಕಾಮ(ಮನ್ಮಥ)ನ ಮೊರೆ ಹೋದರು. ತತ್ಫಲವಾಗಿ ತನ್ನ ನಿರ್ನಾಮದ ಅರಿವಿದ್ದೂ, ಲೋಕಕಲ್ಯಾಣವೆಂಬ ಅತಿಶಯವಾದ ಪರೋಪಕಾರಾರ್ಥವಾಗಿ ಕಾಮನು ತನ್ನ ಹೂಬಾಣಗಳಿಂದ ಶಿವನನ್ನು ಬಡಿದೆಬ್ಬಿಸಿ, ತಪೋಭಂಗ ಮಾಡುತ್ತಾನೆ. ಕೆರಳಿ ಮೂರನೇ ಚಕ್ಷುವನ್ನು ತೆರೆದ ಈಶ್ವರನ ಕ್ರೋಧಾಗ್ನಿಗೆ ಕಾಮನು ಸುಟ್ಟು ಭಸ್ಮವಾಗುತ್ತಾನೆ.

ಕಾಮನರಸಿ ರತಿದೇವಿಯು ಪರಿಪರಿಯಾಗಿ ಶಿವನಲ್ಲಿ ಪತಿಭಿಕ್ಷೆ ಯಾಚಿಸಲು, ಕಾಮನು ಅನಂಗನಾಗಿಯೇ ಇರುತ್ತಾನೆ. ಆದರೆ ಪತ್ನಿಗೆ ಮಾತ್ರ ಶರೀರಿಯಾಗಿ ಕಾಣಿಸುತ್ತಾನೆ ಎಂದು ಶಿವನು ಅಭಯ ನೀಡಿದನೆಂಬುವುದನ್ನು ಪುರಾಣ ಕಥೆಗಳು ಹೇಳುತ್ತದೆ.

ಇನ್ನೊಂದು ಪುರಾಣದ ಪ್ರಕಾರ,  ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದ. ದುರಹಂಕಾರಿಯೂ ಕ್ರೂರಿಯೂ ಆದ ತಾರಕಾಸುರನು ಲೋಕಕಂಟಕನಾಗಿ ಮೆರೆಯುತ್ತಿದ್ದ. ಮಾತ್ರವಲ್ಲದೇ, ತನಗೆ ಮರಣವು ಬಾರದಿರಲಿ, ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಎಂದು ಬ್ರಹ್ಮನಲ್ಲಿ ವರವನ್ನು ಯಾಚಿಸಿದ್ದ. ಭೋಗ ಸಮಾಧಿಯಲ್ಲಿದ್ದ ಶಿವ, ಪಾರ್ವತಿಯ ಜೊತೆ ಸಮಾಗಮ ಹೊಂದಲು ಸಾದ್ಯವಿರಲಿಲ್ಲ. ದೇವತೆಗಳು ನಿರುಪಾಯರಾಗಿ ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಕಾಮನಲ್ಲಿ ಬೇಡಿದರು.

ಓದಿ :  ತಮಿಳುನಾಡು : ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ವೈಕೊ ನೇತೃತ್ವದ MDMK

ಕಾಮ(ಮನ್ಮಥ) ಮತ್ತು ಅವನ ಪತ್ನಿ ರತಿದೇವಿ ಈ ಸತ್ಕಾರ್ಯಕ್ಕೆ ಒಪ್ಪತ್ತಾರೆ. ಭೋಗ ಸಮಾಧಿಯಲ್ಲಿದ್ದ ಶಿವನಿಗೆ ಹೂ ಬಾಣಗಳಿಂದ ಹೊಡೆದು ಸಮಾಧಿಯಿಂದ ಎಚ್ಚರಿಸಿಸುತ್ತಾರೆ. ಇದರಿಂದ ಕುಪಿತಗೊಂಡ ಶಿವನು ತನ್ನ ಮೂರನೇ ಕಣ್ಣಿಂದ ಕಾಮನನ್ನು ಸುಟ್ಟು ಭಸ್ಮ ಮಾಡುತ್ತಾನೆ. ರತಿದೇವಿ ದು:ಖದಿಂದ ಶಿವನಲ್ಲಿ ಪತಿಭಿಕ್ಷೆಯನ್ನು ಬೇಡುತ್ತಾಳೆ. ಶಾಂತಗೊಂಡ ಶಿವನು ಪತ್ನಿಯೊಡನೆ ಮಾತ್ರ ಶರೀರಿಯಾಗುವಂತೆ ಕಾಮನಿಗೆ ವರ ಕೊಡುತ್ತಾನೆ. ಲೋಕಕಲ್ಯಾಣಕ್ಕಾಗಿ ಮನ್ಮಥನು ಅನಂಗನಾದ. ಈ ಘಟನೆ ನಡೆದದ್ದು ಫಾಲ್ಗುಣ ಶುದ್ಧ ಪೂರ್ಣಿಮೆಯಂದು. ಆದ್ದರಿಂದ ಈ ದಿನವನ್ನು “ಕಾಮನ ಹುಣ್ಣಿಮೆ”ಯಾಗಿ ಆಚರಿಸಲ್ಪಡುತ್ತದೆ.

ನಾರದ ಪುರಾಣದಲ್ಲಿ ಮತ್ತೊಂದು ಕಥೆ ಬರುತ್ತದೆ. ತಾನೇ ದೇವರು ಎಂದು ಒಪ್ಪಿಕೊಳ್ಳದೆ ಶ್ರೀ ಹರಿಯನ್ನೇ ಜಗನ್ನಿಯಾಮಕನೆಂದು ಪರಿಭಾವಿಸುವ ತನ್ನದೇ ಕರುಳ ಕುಡಿ ಪ್ರಹ್ಲಾದನನ್ನು ಕೊಲ್ಲಲು, ದೈತ್ಯ ರಾಜ ಹಿರಣ್ಯ ಕಶ್ಯಪು ನಾನಾ ವಿಧದ ಪ್ರಯತ್ನಗಳನ್ನು ಮಾಡಿಯೂ ವಿಫಲನಾಗಿ, ಕೊನೆಗೆ, ಬೆಂಕಿಯಿಂದ ರಕ್ಷಣೆ ನೀಡುವ ವಸ್ತ್ರ ಹೊಂದಿರುವ ತಂಗಿ ಹೋಳಿಕಾ(ಹೋಲಿಕಾ)ಳ ಮೊರೆ ಹೋಗುತ್ತಾನೆ. ಅಣ್ಣನ ಅನುಜ್ಞೆಯಂತೆ ಬಾಲ ಪ್ರಹ್ಲಾದನನ್ನು ಹೊತ್ತುಕೊಂಡ ಹೋಳಿಕಾ, ಅಗ್ನಿಕುಂಡ ಪ್ರವೇಶಿಸುತ್ತಾಳೆ. ಆಗ ವಸ್ತ್ರವು ಹಾರಿಹೋಗುತ್ತದೆ, ಹೋಳಿಕಾಳ ದಹನವಾಗುತ್ತದೆ. ವಿಷ್ಣು ಭಕ್ತ ಶ್ರೇಷ್ಠ ಪ್ರಹ್ಲಾದ ಬದುಕುಳಿಯುತ್ತಾನೆ.

ಓದಿ :  6 ತಿಂಗಳಲ್ಲಿ ಸರ್ಕಾರ ಸಮಸ್ಯೆ ಬಗೆಹರಿಸದಿದ್ದರೆ ಬೃಹತ್ ಸಮಾವೇಶ: ಜಯಮೃತ್ಯುಂಜಯ ಸ್ವಾಮೀಜಿ

ಮೇಲೆ ಹೇಳಿದ ಎರಡೂ ಪುರಾಣ ಕಥನಗಳ ಸಂದೇಶ ಒಂದೇ. ಕೆಟ್ಟದ್ದನ್ನು ಸುಟ್ಟು ಬಿಡುವುದು; ಕಾಮಕ್ರೋಧಾದಿ ಅರಿಷಡ್ವರ್ಗಗಳನ್ನು ಅಗ್ನಿಕುಂಡದಲ್ಲಿ ಸುಟ್ಟು, ಸದಾಚಾರವನ್ನು ರೂಢಿಸಿಕೊಳ್ಳುವುದು. ಅಸುರ ಶಕ್ತಿಗಳ ನಿರ್ನಾಮದ ದ್ಯೋತಕವಾಗಿ ಹೋಳಿ ಅಂದರೆ ಉತ್ಸವಾಗ್ನಿ ಹಾಕುವ ಪದ್ಧತಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಆಚರಣೆಯಲ್ಲಿದೆ. ಇಂಥದ್ದೊಂದು ಅಮೂಲ್ಯ ಸಂದೇಶ ಸಾರುವ ಮತ್ತು ಆ ಮೂಲಕ ಕೆಡುಕಿಗೆ ಯಾವತ್ತೂ ಸೋಲು ಕಾದಿದೆ ಎಂಬ ಸಂದೇಶ ಸಾರುವ ಹೋಳಿ ಹಬ್ಬ ಅಥವಾ ಕಾಮನ ಹಬ್ಬದ ಆಚರಣೆಯಲ್ಲಿ ಸದುದ್ದೇಶವಿದೆ.

ಈ  ಹೋಳಿ ಹಬ್ಬದ ಆಚರಣೆ ಪ್ರದೇಶದಿಂದ ಪ್ರದೇಶಕ್ಕೆ ಬಹಳ ವ್ಯತ್ಯಾಸವಿದೆ. ಆಯಾಯ ಪ್ರದೇಶದಲ್ಲಿ ನಂಬಿಕೊಂಡು ಬಂದ ಆಚರಣೆ, ಸಂಪ್ರದಾಯ ಹಾಗೂ ಪದ್ಧತಿಗಳಿಗನುಗುಣವಾಗಿ ಹೋಳಿ ಹಬ್ಬವನ್ನು ಆಚರಿಸುತ್ತಾರೆ. ಉತ್ತರ ಭಾರತದಲ್ಲಿ ಹೆಚ್ಚಾಗಿ ಆಚರಿಸುವ ಹಬ್ಬ ಇದಾಗಿದ್ದು, ಭಿನ್ನ ಶೈಲಿಯನ್ನು ನಾವು ಕಾಣುತ್ತೇವೆ.

ಈ ದಿನದಂದು ಅಕ್ಕಿಹಿಟ್ಟು ಮತ್ತು ಅರಿಶಿನ ಬೆರೆಸಿದ ಗುಲಾಲು ತಯಾರಿಸಿ, ಬಿದಿರಿನಿಂದ ಪಿಚಕಾರಿ ತಯಾರಿಸಿ ಬಣ್ಣದಾಟ ಆಡುತ್ತಾರೆ. ರಂಗಿನಾಟದ ನಂತರ ಅಭ್ಯಂಜನ ಸ್ನಾನ ಮಾಡಿ ದೇವರಲ್ಲಿ ಪ್ರಾರ್ಥಿಸಿ ಮನೆಗಳಲ್ಲಿ ವಿಶೇಷ ಅಡಿಗೆಗಳನ್ನು ತಯಾರಿಸುವರು.

ಉತ್ತರ ಪ್ರದೇಶದಲ್ಲಿ ಹೊಳಿಯ ಸಂದರ್ಭಲ್ಲಿ ಜೋಳದ ಹಿಟ್ಟಿನ ಗುಜಿಯಾ ಹಾಗೂ ಪಾಪ್ಡಿ ಜನಪ್ರಿಯವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದಿನದಂದು ಬಹಳ ವಿಶೇಷವಾಗಿ ಆಚರಿಸಲಾಗುತ್ತದೆ. ಹತ್ತು ತಲೆಯ ರಾವಣನ ಮೂರ್ತಿಯನ್ನು ಬಿದಿರಿನಿಂದ ತಯಾರಿಸಿ, ಅದಕ್ಕೆ ಹಳೇ ಬಟ್ಟೆಗಳನ್ನೇಲ್ಲ ಧರಿಸಿ ಗಣ್ಯರನ್ನೇಲ್ಲ ಕರೆದು, ಅವರ ಸಮ್ಮುಖದಲ್ಲಿ ಲಂಕೇಶನನ್ನು ಸುಡುವ ನಂಬಿಕೆ ಇದೆ. ಅಂದರೇ, ಅಸುರ ಶಕ್ತಿಯನ್ನು ಸಂಹಾರ ಮಾಡುವುದರ ಮೂಲಕ ಜಯೋತ್ಸವವನ್ನು ಆಚರಿಸುವುದು ಎಂದರ್ಥ.

ಇನ್ನು ಭಾರತದ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಹೋಳಿಯ ದಿನ ಊರಿನವರ ಮನೆಯಲ್ಲಿ ಸಿಗುವ ಬೇಡದ ವಸ್ತುಗಳನ್ನೆಲ್ಲ ತಂದು ಒಂದೆಡೆ ಗುಡ್ಡೆ ಮಾಡಿ, ರಾತ್ರಿ ಹುಡುಗನೊಬ್ಬನಿಗೆ ಶಿಖಂಡಿಯ ವೇಷ ಹಾಕಿಸಿ, ಅವನಿಂದ ಊರಿನ ಐದು ಮನೆಗಳಲ್ಲಿ ಭಿಕ್ಷೆ ಎತ್ತಿಸಿ ಕರೆತಂದು ಅವನಿಂದ ಆ ಬೇಡದ ವಸ್ತುಗಳ ಗುಡ್ಡೆಗೆ ಬೆಂಕಿ ಇಡಿಸುತ್ತಾರೆ. ಅದೇ ಅವರ ಕಾಮದಹನದ ಹಬ್ಬ.

ಓದಿ :  ಒಡಿಶಾ ಸರ್ಕಾರಿ ಆಸ್ಪತ್ರೆ: ಬೀದಿ ನಾಯಿ ಬಾಯಿಯಲ್ಲಿ ನವಜಾತ ಶಿಶುವಿನ ಶವ!

ಹೌದು ಇಷ್ಟೆಲ್ಲಾ ಹೋಳಿ ಹಬ್ಬದ ಹಿನ್ನೆಲೆ ಹೇಳುವುದಕ್ಕೆ ಕಾರಣವಿದೆ. ಇದೆ ಮಾರ್ಚ್ 28 ಹಾಗೂ 29 ರಂದು ಹೋಳಿ ಹಬ್ಬ ಮತ್ತೆ ಬಂದಿದೆ. ರಂಗು ರಂಗಿನ ರಂಗಿನಾಟಕ್ಕೆ ಇನ್ನು ಕೇವಲ ದಿನಗಣನೆಯಷ್ಟೇ ಬಾಕಿ ಇದೆ.

ಈ ವರ್ಷ ಕೋವಿಡ್ ಕರಿಚಾಯೆ ಇರುವುದರಿಂದ ಹೋಳಿಯ ಬಣ್ಣ ಕಳೆದುಕೊಳಳ್ಳುತ್ತದೆಯೇ.? ಎಂಬ ಆತಂಕ, ಬೇಸರದೊಂದಿಗೆ ಹೋಳಿ ಹಬ್ಬವನ್ನು ಎದುರುಗಾಣುತ್ತಿದ್ದೇವೆ. ಮಾರಣಾಂತಿಕ ಕೋವಿಡ್   ಸಾಂಕ್ರಾಮಿಕ ಸೋಂಕು ತನ್ನ ಬಾಹುವನ್ನು ಅಗಲಿಸಿ ಒಂದು ವರ್ಷ ಪೂರ್ಣಗೊಂಡಿದೆ. ಸಾಮಾಜಿಕ ಅಂತರ, ಮುಖಗವಸುಗಳು ನಮ್ಮ ಬದುಕಿನಲ್ಲಿ ತೀರಾ ಸಾಮಾನ್ಯವಾಗಿ ಹೋಗಿ ಬಿಟ್ಟಿದೆ. ಕೋವಿಡ್ ನಿಂದ ತತ್ತರಿಸಿ ಹೋಗಿದ್ದ ನಾಗರಿಕ ವ್ಯವಸ್ಥೆ , ಸುಧಾರಿಸಿಕೊಳ್ಳುತ್ತಿದೆ ಎನ್ನುವಷ್ಟರಲ್ಲೇ ಕೋವಿಡ್ ಎರಡನೇ ಅಲೆ ಮತ್ತೆ ಆತಂಕಕ್ಕೆ ಕಾರಣವಾಗಿದೆ. ಈಗ, ರಾಷ್ಟ್ರವ್ಯಾಪಿ ಲಸಿಕೆ ಚಾಲನೆಯೂ ಜಾರಿಯಲ್ಲಿದ್ದರೂ, ಈ ಬಾರಿ ಹೋಳಿ ಆಚರಣೆಗೆ ಕೋವಿಡ್ ಅಡ್ಡ ಬಂದಿದೆ. ನೀವು ಹೋಳಿ ಹಬ್ಬವನ್ನು ಹೇಗೆ ಆಚರಿಸುತ್ತೀರಿ…? ಅಂತ ಕೇಳುವುದಕ್ಕೂ ಕಷ್ಟವಾಗುತ್ತಿದೆ. ಬಣ್ಣದ ಮಸಿ ಬಳಿದ ಕೋವಿಡ್ ನ ದಹನ ಈ ಹೋಲಿಕಾ ದಹನದಂದು ಆಗಲಿ ಎನ್ನುವ ಸಂಕಲ್ಪ ಮಾಡೋಣ.

ಬಿ ಕೇರ್ ಫುಲ್,  ಕೋವಿಡ್ 19 ನ ಇನ್ನೂ ಮುಗಿದಿಲ್ಲ, ಆದ್ದರಿಂದ, ದೊಡ್ಡ ಗುಂಪುಗಳು, ಸಾಮಾಜಿಕ ಕೂಟಗಳು ಇತ್ಯಾದಿಗಳಿಂದ ದೂರವಿರುವುದು ನಮಗೆ ಮುಖ್ಯವಾಗುತ್ತದೆ. ಹೋಳಿ ಹಬ್ಬ ಈ ಬಾರಿ ಹಿಂದಿನಂತೆ ಆಚರಿಸಲಸಾಧ್ಯವಾದರೂ ಹೊಳಿ ನಿಮ್ಮ ಮನ ತುಂಬಲಿ, ನಿಮ್ಮ ಬದುಕಿಗೆ ಹೊಸ ತಿರುವನ್ನು ತಂದು ಕೊಡಲಿ.  ಕೋವಿಡ್ ಬಗ್ಗೆ ಎಚ್ಚರಿಕೆಯಿರಲಿ.

ಇದು ಉದಯವಾಣಿ ಕಳಕಳಿ.   

ಓದಿ :  ಹಿಮಾಚಲ್ ಪ್ರದೇಶ ಬಿಜೆಪಿ ಸಂಸದ ರಾಮ್ ಸ್ವರೂಪ್ ಶವ ಪತ್ತೆ, ಆತ್ಮಹತ್ಯೆ ಶಂಕೆ?

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.