ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡುತ್ತೆ…ಮೀನಿನಿಂದ ಆರೋಗ್ಯಕ್ಕೆ ಹಲವು ಲಾಭಗಳಿವೆ ಗೊತ್ತಾ!

Team Udayavani, Oct 8, 2020, 7:11 PM IST

Fish

ಪ್ರಕೃತಿ ನಮಗೆ ನೀಡಿರುವಂತಹ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು. ಮೀನು ಮಾಂಸಹಾರಿಗಳಿಗೆ ತುಂಬಾ ಪ್ರಿಯ ಆಹಾರ. ಮೀನು ತುಂಬಾ ಆರೋಗ್ಯಕರ ಆಹಾರ ಮತ್ತು ಇದರಲ್ಲಿ ಹಲವಾರು ರೀತಿಯ ಪೋಷಕಾಂಶಗಳು ದೇಹಕ್ಕೆ ಲಭ್ಯವಾಗುವುದು. ಮೀನಿನಲ್ಲಿ ಪ್ರೋಟೀನ್, ವಿಟಮಿನ್ ಡಿ, ಕ್ಯಾಲ್ಸಿಯಂ, ಫೋಸ್ಫರಸ್ ಲಭ್ಯವಿದೆ. ಮೀನಿನಲ್ಲಿ ಕಬ್ಬಿಣ, ಸತು, ಮೆಗ್ನಿಶಿಯಂ, ಅಯೋಡಿನ್ ಮತ್ತು ಪೊಟಾಶಿಯಂನಂತಹ ಖನಿಜಾಂಶಗಳಿವೆ. ಮೀನಿನಿಂದ ಆರೋಗ್ಯಕ್ಕೆ ಹಲವು ರೀತಿಯ ಲಾಭಗಳಿವೆ.

ಹೃದಯ ಕಾಯಿಲೆ ಸಮಸ್ಯೆ ಕಡಿಮೆ ಮಾಡುವುದು:
ಮೀನುಗಳಲ್ಲಿ ಸ್ಯಾಚುರೇಟೆಡ್ ಫ್ಯಾಟ್‌ಗಳು ಇಲ್ಲದಿರುವ ಕಾರಣ ಇವುಗಳ ಸೇವನೆಯಿಂದ ಮನುಷ್ಯನ ಹೃದಯಕ್ಕೆ ಯಾವುದೇ ಬಗೆಯ ತೊಂದರೆಗಳು ಉಂಟಾಗುವುದಿಲ್ಲ. ಬದಲಿಗೆ ಹೃದಯದ ಆರೋಗ್ಯಕ್ಕೆ ಒಳ್ಳೆಯದೇ ಆಗುತ್ತದೆ. ಇದಕ್ಕೆ ಕಾರಣ ಮನುಷ್ಯನ ಹೃದಯದ ಆರೋಗ್ಯವನ್ನು ಹಾಳು ಮಾಡುವ ಕೊಲೆಸ್ಟ್ರಾಲ್ ಅಂಶವನ್ನು ಮೀನುಗಳ ದಿನ ನಿತ್ಯ ಸೇವನೆಯಿಂದ ದೂರ ಇಡಬಹುದು.

ವಿಟಮಿನ್ ಡಿ ಮೂಲ:
ಮೀನಿನಲ್ಲಿ ವಿಟಮಿನ್ ಡಿ ಸಮೃದ್ಧವಾಗಿದೆ ಮತ್ತು ಇದು ದೇಹಕ್ಕೆ ಬೇಕಾಗುವ ಪ್ರಮುಖ ಪೋಷಕಾಂಶಗಳಲ್ಲಿ ಒಂದಾಗಿದೆ. ಮೂಳೆಗಳ ಆರೋಗ್ಯ ಮತ್ತು ಬೆಳವಣಿಗೆಗೆ ಕ್ಯಾಲ್ಸಿಯಂ ಹೀರಿಕೊಳ್ಳಲು ವಿಟಮಿನ್ ಡಿ ಅತೀ ಅಗತ್ಯ.

ಸ್ಮರಣಶಕ್ತಿ ವೃದ್ಧಿ:
ಮೀನುಗಳ ಸೇವನೆಯಿಂದ ಮಿದುಳಿನ ಬೆಳವಣಿಗೆಯಾಗಿ ಸ್ಮರಣಶಕ್ತಿ ವೃದ್ಧಿಗೆ ಸಹಕಾರಿಯಾಗಿದೆ. ಇದು ಮಕ್ಕಳಿಗೆ ಬಹಳ ಉಪಯುಕ್ತ.

ಖಿನ್ನತೆ ಕಡಿಮೆ ಮಾಡುವುದು:
ಮೀನು ಮತ್ತು ಮೀನಿನ ಎಣ್ಣೆಯು ಖಿನ್ನತೆ ದೂರ ಮಾಡುವುದು. ಇದು ಖಿನ್ನತೆಯ ಲಕ್ಷಣವನ್ನು ಕಡಿಮೆ ಮಾಡಿ ಮಾನಸಿಕ ಆರೋಗ್ಯ ಸುಧಾರಿಸುವುದು.

ದೃಷ್ಟಿ ಸುಧಾರಣೆ:
ಮೀನಿನಲ್ಲಿ ಇರುವ ಕೊಬ್ಬಿನಾಮ್ಲವು ಕಣ್ಣಿನ ದೃಷ್ಟಿ ಮತ್ತು ಆರೋಗ್ಯ ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಯಾಕೆಂದರೆ ಮೆದುಳು ಮತ್ತು ಕಣ್ಣುಗಳು ಒಮೆಗಾ 3 ಕೊಬ್ಬಿನಾಮ್ಲಗಳ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿವೆ ಮತ್ತು ಅವುಗಳ ಆರೋಗ್ಯ ಮತ್ತು ಚಟುವಟಿಕೆಗೆ ಈ ಪೋಷಕಾಂಶಗಳು ಅತೀ ಅಗತ್ಯ.

ಸರಿಯಾದ ನಿದ್ರೆ:
ಸರಿಯಾಗಿ ನಿದ್ರೆ ಪೂರ್ತಿಯಾಗದಿದ್ದರೆ ನಿಯಮಿತವಾಗಿ ಮೀನು ಸೇವಿಸಿ. ಮೀನಿನಲ್ಲಿರುವಂತಹ ಉನ್ನತ ಮಟ್ಟದ ವಿಟಮಿನ್ ಡಿ ನಿದ್ರೆ ಸರಾಗವಾಗಿ ಆಗುವಂತೆ ಮಾಡುವುದು.

ಉತ್ತಮ ಚರ್ಮ ಮತ್ತು ಕೂದಲು ಬೆಳೆಯಲು ಸಹಕಾರಿ:
ಮೀನು ಸೇವನೆಯಿಂದ ನಿಮ್ಮ ಕೂದಲು ಉದ್ದವಾಗಿ ಬೆಳೆಯಲು ಸಹಕಾರಿ. ಇದರಲ್ಲಿರುವ ಕಡಿಮೆ ಕೊಬ್ಬಿನ ಅಂಶಗಳು ಮತ್ತು ಉತ್ತಮ ಕೊಬ್ಬಿನಾಮ್ಲಗಳು ಕೂದಲು ಉದುರುವುದನ್ನು ಮತ್ತು ಚರ್ಮ ಸುಕ್ಕುಗಟ್ಟುವುದನ್ನು ತಡೆದು ಹೊಳಪು ನೀಡುತ್ತದೆ.

ಸಂಧಿವಾತ ಕಡಿಮೆ ಮಾಡುವುದು:
ನೀವು ಸಂಧಿವಾತದಿಂದ ಬಳಲುತ್ತಿದ್ದರೆ ದಿನನಿತ್ಯ ಮೀನಿನ ಸೇವನೆ ಮಾಡಿ. ಸಂಧಿವಾತವು ಗಂಟುಗಳ ತೀವ್ರವಾದ ಉರಿಯೂತವಾಗಿದ್ದು, ನಿಯಮಿತವಾಗಿ ಮೀನು ಸೇವಿಸಿದರೆ ಅದರಿಂದ ನೋವು ಮತ್ತು ಊತ ಕಡಿಮೆ ಮಾಡಬಹುದು.

ಕೊಲೆಸ್ಟ್ರಾಲ್ ತಗ್ಗಿಸುವುದು:
ಮೀನು ದೇಹದಲ್ಲಿರುವ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಮೀನಿನಲ್ಲಿ ಇರುವಂತಹ ಒಮೆಗಾ 3 ಕೊಬ್ಬಿನಾಮ್ಲವು ದೇಹದಲ್ಲಿ ಇರುವಂತಹ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು.

ಮಧುಮೇಹ ತಗ್ಗಿಸುವುದು:
ಟೈಪ್ 1 ಮಧುಮೇಹವನ್ನು ಮೀನು ತಗ್ಗಿಸುವುದು. ಮೀನಿನಲ್ಲಿ ಇರುವಂತಹ ಉನ್ನತ ಮಟ್ಟದ ವಿಟಮಿನ್ ಡಿ ದೇಹದ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಗ್ಲುಕೋಸ್ ಚಯಾಪಚಯಕ್ಕೆ ನೆರವಾಗುವುದು.

ಟಾಪ್ ನ್ಯೂಸ್

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.