ಆಶ್ಲೇಷಾ ಅಬ್ಬರ: ರಾಜ್ಯ ತತ್ತರ ; ಕರಾವಳಿಯಲ್ಲೂ ಮಳೆ ಜೋರು

ರೆಡ್‌ ಅಲರ್ಟ್‌: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ

Team Udayavani, Aug 7, 2020, 6:15 AM IST

Karnataka-Rain-01

ಹುಬ್ಬಳ್ಳಿ/ ಮಡಿಕೇರಿ: ಮಹಾ ಮಳೆನಕ್ಷತ್ರ ಆಶ್ಲೇಷಾದ ಅಬ್ಬರಕ್ಕೆ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಭಾಗ ಅಕ್ಷರಶಃ ತತ್ತರಿಸಿ ಹೋಗಿವೆ.

ಪ್ರಮುಖ ನದಿ, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತೀರ ಪ್ರದೇಶದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಕೊಡಗಿನ ಕಾವೇರಿ ಉಗಮತಾಣ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟದ ಭಾಗ ಕುಸಿದು ಅಲ್ಲಿನ ಅರ್ಚಕರ ಕುಟುಂಬದ ಮನೆ ಸಂಪೂರ್ಣ ನೆಲಸಮವಾಗಿದೆ. ಅಲ್ಲಿದ್ದ ಐವರು ಕಣ್ಮರೆಯಾಗಿದ್ದಾರೆ.

ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಹಲವೆಡೆ ಭೂಕುಸಿತ ಉಂಟಾಗಿ ಸಂಪರ್ಕ ಕಡಿತಗೊಂಡಿದೆ. ಚಿಕ್ಕೋಡಿ ಉಪವಿಭಾಗದಲ್ಲಿ 6, ಬಾಗಲಕೋಟೆ ಜಿಲ್ಲೆಯಲ್ಲಿ 3, ಹಾವೇರಿ ಜಿಲ್ಲೆಯಲ್ಲಿ 2 ಸೇರಿದಂತೆ 11 ಸೇತುವೆಗಳು ಮುಳುಗಡೆಯಾಗಿವೆ. ತೀರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಜಕ್ಕನಹಳ್ಳಿ ಗ್ರಾಮದ ಪರಮೇಶ್ವರಪ್ಪ (38) ತೋಟದಿಂದ ವಾಪಸ್‌ ಬರುವ ವೇಳೆ ವಿದ್ಯುತ್‌ ತಂತಿ ತುಳಿದು ಮೃತಪಟ್ಟಿದ್ದಾರೆ.


ಮೈಸೂರು ಭಾಗದಲ್ಲೂ ಭಾರೀ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ನೂರಾರು ಎಕರೆ ಪ್ರದೇಶದಲ್ಲಿ ಬೆಳೆ ಮುಳುಗಿದೆ. ಕಬಿನಿ ಜಲಾಶಯದಿಂದ 50 ಸಾವಿರ ಕ್ಯುಸೆಕ್‌ ನೀರು ಹೊರಬಿಡಲಾಗಿದೆ.
ಕೆಆರ್‌ಎಸ್‌ ಜಲಾಶಯವು ಒಂದು ವಾರದಲ್ಲಿ ಭರ್ತಿ ಯಾಗುವ ಸಾಧ್ಯತೆ ಇದೆ. ಕೃಷ್ಣಾ, ವೇದಗಂಗಾ, ದೂಧ ಗಂಗಾ, ಘಟಪ್ರಭಾ, ಮಲಪ್ರಭಾ, ತುಂಗಾ, ಭದ್ರಾ, ಹೇಮಾವತಿ, ಕಾಳಿ, ಶರಾವತಿ, ಗಂಗಾವಳಿ, ಅಘನಾಶಿನಿ ನದಿಗಳು, ಧಾರವಾಡ ಜಿಲ್ಲೆಯ ತುಪ್ಪರಿ, ಬೆಣ್ಣಿ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ತುಂಗಾ, ನಾರಾಯಣಪುರ, ನವಿಲುತೀರ್ಥ, ಧೂಪದಾಳ, ಕದ್ರಾ ಜಲಾಶಯಗಳು ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿದೆ. ವಿಶ್ವವಿಖ್ಯಾತ ಜೋಗ ಮತ್ತು ಗೋಕಾಕ ಜಲಪಾತ ಮೈದುಂಬಿವೆ. ಶಿಕಾರಿಪುರ, ಸಾಗರ, ತೀರ್ಥಹಳ್ಳಿ, ಹೊಸನಗರ, ಉತ್ತರ ಕನ್ನಡದ ಘಟ್ಟದ ಮೇಲ್ಭಾಗದಲ್ಲಿ ವ್ಯಾಪಕ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬಾ ದೇವಾಲಯ ಸಮೀಪದ ಕಪ್ಪೆ ಶಂಕರ ಮಂಟಪ, ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಟಾಳ ಸೇತುವೆ ಮುಳುಗಡೆಯಾಗಿದೆ.

ಮಹಾ ಮಳೆಗೆ ಪ್ರವಾಹ

ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದರೂ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಮತ್ತೆ ನೆರೆ ಉಂಟಾಗಿದೆ. ಚಿಕ್ಕೋಡಿ ಬಳಿ ಕೃಷ್ಣಾ ನದಿಗೆ 1.32 ಲಕ್ಷ ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ನದಿಯ ಮಟ್ಟದಲ್ಲಿ 10 ಅಡಿಗಳಷ್ಟು ಏರಿಕೆಯಾಗಿದೆ. ಎನ್‌ಡಿಆರ್‌ಎಫ್‌ ತಂಡ ನದಿ ತೀರದಲ್ಲಿ ಬೀಡು ಬಿಟ್ಟಿದೆ. ಕೋಯ್ನಾ, ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ ನೀರು ಹರಿದು ಬರುತ್ತಿರುವುದರಿಂದ ಬಾಗಲಕೋಟೆ, ಜಮಖಂಡಿ, ಬೀಳಗಿ, ಹುನಗುಂದ, ವಿಜಯಪುರ, ರಾಯಚೂರು, ಯಾದಗಿರಿ ಮೊದಲಾದೆಡೆಯಲ್ಲೂ ನೆರೆ ಭೀತಿ ಎದುರಾಗಿದೆ.

ತತ್‌ಕ್ಷಣ ಪರಿಹಾರ: ಸಿಎಂ
ಮಳೆಯಿಂದ ಹಾನಿ ಗೊಳಗಾದ ಕುಟುಂಬಗಳಿಗೆ ತತ್‌ಕ್ಷಣ 10,000 ರೂ. ಪರಿಹಾರದ ಜತೆಗೆ ಸಂಪೂರ್ಣ ಮನೆ ಹಾನಿಯಾಗಿದ್ದರೆ  5 ಲಕ್ಷ ರೂ. ಪರಿಹಾರ ನೀಡುವಂತೆ ಸಿಎಂ ಬಿಎಸ್‌ವೈ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಹಳ್ಳಿಗಳ ಶಾಲಾ-ಕಾಲೇಜುಗಳನ್ನೇ ನಿರಾಶ್ರಿತರ ಕೇಂದ್ರವನ್ನಾಗಿಸಿ ಎಲ್ಲ ಸೌಲಭ್ಯ ಕಲ್ಪಿಸಬೇಕು ಎಂದು ಆದೇಶ ನೀಡಿದ್ದಾರೆ.


ಕರಾವಳಿಯಲ್ಲೂ ಮಳೆ ಜೋರು

ಕರಾವಳಿಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಗುರುವಾರ ಅಪರಾಹ್ನದ ಬಳಿಕ ಬಿರುಸುಗೊಂಡಿತ್ತು. ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿದ್ದು, ಕೆಲವೆಡೆ ಹಾನಿ ಉಂಟಾಗಿದೆ. ಭಾರೀ ಮಳೆಯಿಂದ ಅವಿಭಜಿತ ಜಿಲ್ಲೆಯಲ್ಲಿ ಹಲವು ಮನೆಗಳಿಗೆ ಹಾನಿ ಉಂಟಾಗಿದೆ. ಬೆಳ್ತಂಗಡಿ, ಸುಳ್ಯ ತಾಲೂಕುಗಳಲ್ಲಿಯೂ ಭಾರೀ ಮಳೆಯಾಗುತ್ತಿದೆ. ಸುಬ್ರಹ್ಮಣ್ಯದ ಬಿಸಿಲೆ ಘಾಟ್‌ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಕೆಲವು ಕಡೆಗಳಲ್ಲಿ ರಸ್ತೆಗೆ ಮರಬಿದ್ದು, ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಕುಸಿದ ಕೊಂಕಣ ರೈಲ್ವೇ ಸುರಂಗ
ಭಾರೀ ಮಳೆಯಿಂದ ಕೊಂಕಣ ರೈಲ್ವೇಯ ಕಾರವಾರ ವ್ಯಾಪ್ತಿಯ ಪೆರ್ನೆಮ್‌ ಸುರಂಗ ಕುಸಿದಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಮಳೆ ಏಕೆ?
ಬಂಗಾಲ ಕೊಲ್ಲಿಯಲ್ಲಿ ನಿಮ್ನ ಒತ್ತಡ ಉಂಟಾಗಿ ಮುಂಗಾರು ಮಾರುತಗಳು ಚುರುಕಾಗಿರುವುದು.

ರೆಡ್‌ ಅಲರ್ಟ್‌: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ

ಎಷ್ಟು ದಿನ?
ಹವಾಮಾನ ಇಲಾಖೆ ಪ್ರಕಾರ ಆ.10ರ ವರೆಗೂ ಮಳೆ ಮುಂದುವರಿಯಲಿದೆ.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.