Ayodhya: ಗರ್ಭಗುಡಿಯಲ್ಲಿ ರಾಮಲಲ್ಲಾ ವಿರಾಜಮಾನ… ಮೊದಲ ಫೋಟೋ ಬಹಿರಂಗ
Team Udayavani, Jan 19, 2024, 8:32 AM IST
ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಗುರುವಾರ ವಿರಾಜಮಾನ ನಾಗಿದ್ದಾನೆ. ಸಂಜೆ ವೇಳೆಗೆ ಬಾಲರಾಮನ ವಿಗ್ರಹವನ್ನು ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಗರ್ಭಗುಡಿಯ ಹೊರಗೆ ವಾಸ್ತು ಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು 121 ಅರ್ಚಕರು ಸೇರಿ ನೆರವೇರಿಸುವ ಮೂಲಕ ವಿಗ್ರಹ ಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ.
ಬುಧವಾರ ರಾತ್ರಿಯೇ ವಿಶೇಷ ಪೂಜೆಯೊಂದಿಗೆ ರಾಮಲಲ್ಲಾನ ವಿಗ್ರಹವನ್ನು ಮಂದಿರದ ಗರ್ಭಗುಡಿಗೆ ತರಲಾಗಿತ್ತು ಆದರೆ, ಕೆಲ ತಾಂತ್ರಿಕ ಕಾರಣಗಳಿಂದ ಪ್ರತಿಷ್ಠಾಪಿಸಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರ ಖ್ಯಾತ ಜ್ಯೋತಿಷಿಗಳಾದ ಆಚಾರ್ಯ ಗಣೇಶ್ವರ ಶಾಸ್ತ್ರೀ ಅವರ ನೇತೃತ್ವದಲ್ಲಿ ಜಲಾಧಿವಾಸ್ ವಿಧಿಯ ಪ್ರಕಾರ ವಿಗ್ರಹವನ್ನು ಸ್ವತ್ಛಗೊಳಿಸಿ ಸತತ 4 ಗಂಟೆಗಳ ಕಾಲ ಪೂಜೆ, ಮಂತ್ರ ಪಠಣೆಯನ್ನು ನೆರ ವೇರಿಸಿ ಶುಭ ಮುಹೂರ್ತದಲ್ಲಿ ವಿಗ್ರಹ ಪ್ರತಿಷ್ಠಾಪಿಸಲಾಗಿದೆ. ಗೌರಿ ಗಣೇಶ ಪೂಜೆ, ವರುಣ ಪೂಜೆ ಸೇರಿ ವಿವಿಧ ಪೂಜಾ ಪ್ರಕ್ರಿಯೆಗಳನ್ನು ಅನುಸರಿಸಲಾಗಿದೆ ಎಂದು ಮಂದಿರ ಟ್ರಸ್ಟ್ ಮಾಹಿತಿ ನೀಡಿದೆ.
ಇದನ್ನೂ ಓದಿ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.