Ayodhya: ಜ.22 ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ… ಎಂ.ಎಸ್. ಧೋನಿಗೆ ಆಹ್ವಾನ
Team Udayavani, Jan 16, 2024, 9:37 AM IST
ಅಯೋಧ್ಯಾ: ವಿಶ್ವಕಪ್ ವಿಜೇತ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ಅಯೋಧ್ಯೆಯ ರಾಮಮಂದಿರದ ಬಹು ನಿರೀಕ್ಷಿತ “ಪ್ರಾಣ ಪ್ರತಿಷ್ಠಾ ಸಮಾರಂಭ”ಕ್ಕೆ ಆಹ್ವಾನಿಸಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕನಿಗೆ ಜನವರಿ 15 ರ ಸೋಮವಾರ ರಾಂಚಿಯಲ್ಲಿರುವ ಅವರ ನಿವಾಸದಲ್ಲಿ ಆಹ್ವಾನವನ್ನು ನೀಡಲಾಯಿತು.
ಎಂಎಸ್ ಧೋನಿ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಹ-ಪ್ರಾಂತೀಯ ಕಾರ್ಯದರ್ಶಿ ಧನಂಜಯ್ ಸಿಂಗ್ ಅವರು ಆಹ್ವಾನ ನೀಡಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಪ್ರತಿಷ್ಠಾಪನೆಗೆ ಮಾಜಿ ಕ್ರಿಕೆಟಿಗನನ್ನು ಔಪಚಾರಿಕವಾಗಿ ಆಹ್ವಾನಿಸಿದಾಗ ಬಿಜೆಪಿಯ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕರ್ಮವೀರ್ ಸಿಂಗ್ ಸಹ ಉಪಸ್ಥಿತರಿದ್ದರು.
ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರ ನಂತರ ಎಂಎಸ್ ಧೋನಿ ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭಕ್ಕೆ ಆಹ್ವಾನಿಸಲ್ಪಟ್ಟ ಇತ್ತೀಚಿನ ಕ್ರಿಕೆಟಿಗರಾಗಿದ್ದಾರೆ. ಜನವರಿ 13 ರಂದು ಸಚಿನ್ ತೆಂಡೂಲ್ಕರ್ ಅವರು ಮುಂಬೈನಲ್ಲಿರುವ ತಮ್ಮ ನಿವಾಸದಲ್ಲಿ ಆಹ್ವಾನವನ್ನು ಸ್ವೀಕರಿಸಿದರು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಶದ 6000 ಕ್ಕೂ ಹೆಚ್ಚು ಜನರಿಗೆ ಆಮಂತ್ರಣಗಳನ್ನು ನೀಡಿದೆ. ಜನವರಿ 22 ರಂದು ನಡೆಯಲಿರುವ ರಾಮ ಮಂದಿರದ ಸಮಾರಂಭದಲ್ಲಿ ಜೀವನದ ವಿವಿಧ ಕ್ಷೇತ್ರಗಳ ಹಲವಾರು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದಿನಿಂದ ವಿಧಿವಿಧಾನಗಳು ಆರಂಭ:
ಇಂದಿನಿಂದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ವಿಧಿವಿಧಾನಗಳು ಆರಂಭವಾಗಲಿವೆ. ಈ ಅದ್ಧೂರಿ ಸಮಾರಂಭಕ್ಕೆ ಇಡೀ ನಗರವೇ ನವವಧುವಿನಂತೆ ಸಿಂಗಾರಗೊಳ್ಳುತ್ತಿದೆ. ಜನವರಿ 22 ರಂದು ಮಧ್ಯಾಹ್ನ 12:30 ರಿಂದ 1 ಗಂಟೆಯವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಈ ಸಮಾರಂಭದಲ್ಲಿ 150 ದೇಶಗಳ ರಾಮಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಜನವರಿ 21 ಮತ್ತು ಜನವರಿ 22 ರಂದು ಭಕ್ತರಿಗೆ ದೇವಾಲಯಡಾ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಪ್ರಾಣ ಪ್ರತಿಷ್ಠೆಯ ನಂತರ, ಈ ದೇವಾಲಯವನ್ನು ಜನವರಿ 23 ರಂದು ರಾಮಲಾಲಾ ದರ್ಶನಕ್ಕಾಗಿ ತೆರೆಯಲಾಗುತ್ತದೆ ಎನ್ನಲಾಗಿದೆ.
ಇದನ್ನೂ ಓದಿ: Gaza: ಬಾಂಬ್ ದಾಳಿಯಲ್ಲಿ ಇಬ್ಬರು ಇಸ್ರೇಲಿ ಒತ್ತೆಯಾಳುಗಳ ಸಾವು… ವಿಡಿಯೋ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ
Ayodhya: ವ್ಯಾಟಿಕನ್, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ
Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?
Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ
Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.