Special train: ಜ. 31ರಿಂದ ರಾಜ್ಯದಿಂದ ಅಯೋಧ್ಯೆಗೆ ವಿಶೇಷ ರೈಲು
Team Udayavani, Jan 22, 2024, 11:00 AM IST
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಚುರುಕುಗೊಳ್ಳುತ್ತಿದ್ದಂತೆ, ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಈ ನಡುವೆ ಭಾರತೀಯ ರೈಲ್ವೇ ಇಲಾಖೆಯು ಕರ್ನಾಟಕದಿಂದ ಆಯೋಧ್ಯೆಗೆ ಇದೇ 31 ರಿಂದ 11 ವಿಶೇಷ ರೈಲುಗಳ ಸಂಚಾರವನ್ನು ಆರಂಭಿಸಲಿದೆ.
ಬೆಂಗಳೂರು ನೈರುತ್ಯ ರೈಲ್ವೇ ವಿಭಾಗದಿಂದ ಮೂರು, ಹುಬ್ಬಳ್ಳಿ, ಮೈಸೂರು, ಮಂಗಳೂರು ವಿಭಾಗದಿಂದ ತಲಾ ಎರಡು ಹಾಗೂ ಶಿವಮೊಗ್ಗ, ಬೆಳಗಾವಿ ವಿಭಾಗದಿಂದ ಒಂದು ವಿಶೇಷ ಆಸ್ತಾ ರೈಲು ಸಂಚಾರವನ್ನು ಜ.31ರಿಂದ ಹಂತವಾಗಿ ಪ್ರಾರಂಭಿಸಿ ಮಾ.31ಕ್ಕೆ ಮುಕ್ತಾಯಗೊಳಿಸಲಿದೆ.
ಅಯೋಧ್ಯೆಗೆ ಸದ್ಯಕ್ಕೆ ಒಂದು ರೈಲು!: ಪ್ರಸ್ತುತ ರಾಜ್ಯದಿಂದ ಅಯೋಧ್ಯೆಗೆ ನೈಋತ್ಯ ರೈಲ್ವೇಯ ಬೆಂಗಳೂರಿನ ಯಶವಂತಪುರದಿಂದ ನೇರವಾಗಿ ಒಂದು ರೈಲು ಸಂಚರಿಸುತ್ತಿದೆ. ಯಶವಂತಪುರ ನಿಲ್ದಾಣದಿಂದ ಪ್ರತಿ ಗುರುವಾರ ರಾತ್ರಿ 11.40ಕ್ಕೆ ಹೊರಟ ರೈಲು ಶನಿವಾರ ಮಧ್ಯಾಹ್ನ 4.24ಕ್ಕೆ ಅಯೋಧ್ಯೆಗಢ ನಿಲ್ದಾಣಕ್ಕೆ ತಲುಪಲಿದೆ. ತದನಂತರ ರೈಲು ಗೋರಖ್‌ಪುರದಲ್ಲಿ ನಿಲುಗಡೆ ಮಾಡಲಿದೆ. ಇದರ ಹೊರತಾಗಿ ಯಾವುದೇ ರೈಲು ಅಯೋಧ್ಯಗಢ ಮೂಲಕ ಹಾದು ಹೋಗುವುದಿಲ್ಲ.
ಸಂಪರ್ಕ ವ್ಯವಸ್ಥೆ: ಬೆಂಗಳೂರಿನಿಂದ ತೆರಳುವ ಪ್ರಯಾಣಿಕರು ಲಕ್ನೋ ಹಾಗೂ ಬಾದಶಾ ರೈಲುಗಳ ಮೂಲಕ ತೆರಳಿದರೆ ಅಯೋಧ್ಯಗಢಕ್ಕೆ ಸಂಪರ್ಕ ಸಾಧಿಸಬಹುದಾಗಿದೆ. ಈ ಮಾರ್ಗವಾಗಿ ಪ್ರತಿ ಸೋಮವಾರ ಹಾಗೂ ಬುಧವಾರ ತಲಾ ಎರಡು ರೈಲುಗಳು ಸಂಚರಿಸಲಿದೆ. ಪ್ರಯಾಣಿಕರು ಲಕ್ನೋ ಹಾಗೂ ಬಾದಶಾ ರೈಲು ನಿಲ್ದಾಣದಲ್ಲಿ ಇಳಿದು 130 ರಿಂದ 150 ಕಿ.ಮೀ. ದೂರದಲ್ಲಿರುವ ಅಯೋಧ್ಯೆಗಢಕ್ಕೆ ರೈಲು, ಬಸ್ ಅಥವಾ ಇತರೆ ಸಾರಿಗೆ ಮೂಲಕ ಅಯೋಧ್ಯೆ ತಲುಪಬಹುದಾಗಿದೆ.
ವೈಟಿಂಗ್ ಲಿಸ್ಟ್ ಹೆಚ್ಚಳ: ರಾಮನವಮಿ ಸೇರಿದಂತೆ ವಿಶೇಷ ದಿನಗಳು ಹಾಗೂ ರಜಾ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವುದರಿಂದ ಕಳೆದೊಂದು ತಿಂಗಳಿನಿಂದ ಈ ರೈಲುಗಳಲ್ಲಿ ಆಸನಗಳ ಕಾಯ್ದಿರಿಸುವವರ ಸಂಖ್ಯೆಯಲ್ಲಿಯೂ ಹೆಚ್ಚಿದೆ. ಇದೀಗ ಒಟ್ಟಾರೆ 1,000ಕ್ಕೂ ಅಧಿಕ ಟಿಕೆಟ್‌ಗಳು ವೈಟಿಂಗ್ ಲಿಸ್ಟ್‌ನಲ್ಲಿವೆ.
ಬೆಂಗಳೂರಿನಿಂದ ಅಯೋಧ್ಯೆಗಢ ಹಾಗೂ ಲಖನೌ, ಬಾದಶಾ ನಗರದ ರೈಲ್ವೇ ನಿಲ್ದಾಣಕ್ಕೆ ವಾರದಲ್ಲಿ 5 ರೈಲುಗಳ ಸಂಚಾರವಿದೆ. ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆಯ ಬಳಿಕ ಸೀಟು ಕಾಯ್ದಿರಿಸುವವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ●ಕುಸುಮಾ ಹರಿಪ್ರಸಾದ್, ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕಿನೈ ಋತ್ಯ ರೈಲ್ವೇ ಬೆಂಗಳೂರು.
ಬೆಂಗಳೂರಿನಿಂದ ಅಯೋಧ್ಯೆಗೆ ನೇರವಾದ ವಿಶೇಷ ರೈಲು ಸಂಚಾರ ಪ್ರಾರಂಭಿಸುವ ಕುರಿತು ಮನವಿ ಮಾಡಲಾಗಿದೆ. ●ಪಿ.ಸಿ.ಮೋಹನ್, ಬೆಂಗಳೂರು ಸಂಸದ.
–ತೃಪ್ತಿ ಕುಮ್ರಗೋಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.