Ayodhya: ಹೆಚ್ಚಿದ ಭದ್ರತೆ… ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ, ತೀವ್ರ ವಿಚಾರಣೆ
Team Udayavani, Jan 19, 2024, 8:52 AM IST
ಅಯೋಧ್ಯೆ: ಜನವರಿ 22 ರಂದು ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ಮುನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಗುರುವಾರ ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದೆ.
ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದೆ ಎಂದು ಹೇಳಿದ್ದಾರೆ ಅಲ್ಲದೆ ಮೂವರನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ವಿಚಾರಣೆಯ ವೇಳೆ ಇಲ್ಲಿಯವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಇರುವುದು ಬೆಳಕಿಗೆ ಬಂದಿಲ್ಲ,” ಎಂದು ಹೇಳಲಾಗಿದ್ದು ಇನ್ನೂ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದಿದ್ದಾರೆ.
ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೆ ಕೆಲವೇ ದಿನಗಳಿರುವಾಗ ಈ ಬೆಳವಣಿಗೆ ನಡೆದಿದೆ. ಉತ್ತರ ಪ್ರದೇಶ ಸರ್ಕಾರವು ಡ್ರೋನ್ಗಳ ಮೂಲಕ ಕಣ್ಗಾವಲು ಹೆಚ್ಚಿಸುವ ಮೂಲಕ ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ.
ಇದನ್ನೂ ಓದಿ: Ayodhya: ಗರ್ಭಗುಡಿಯಲ್ಲಿ ರಾಮಲಲ್ಲಾ ವಿರಾಜಮಾನ… ಮೊದಲ ಫೋಟೋ ಬಹಿರಂಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.