Live Update: ಬಾಬ್ರಿ ಪ್ರಕರಣ; 28 ವರ್ಷಗಳ ನಂತರ ಹೊರಬಿತ್ತು ಅಂತಿಮ ತೀರ್ಪು
ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕೆಲವು ಆರೋಪಿಗಳು ಹಾಜರಾಗಿದ್ದಾರೆ.
Team Udayavani, Sep 30, 2020, 9:57 AM IST
ನವದೆಹಲಿ: ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಸ್ ಕೆ ಯಾದವ್ ಅವರು ಬುಧವಾರ(ಸೆಪ್ಟೆಂಬರ್ 30, 2020) ಪ್ರಕಟಿಸಿದ್ದು, ಪ್ರಮುಖ ಆರೋಪಿಗಳಾದ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾಭಾರತಿ ಸೇರಿದಂತೆ ಎಲ್ಲಾ ಆರೋಪಿಗಳು ನಿರ್ದೋಷಿಗಳು ಎಂದು ತಿಳಿಸಿದೆ.
ಈ ಹಿಂದೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಮಸೀದಿ ಧ್ವಂಸ ತಪ್ಪು ಎಂದು ತಿಳಿಸಿತ್ತು. ಸಾಕ್ಷ್ಯದ ಆಧಾರದ ಮೇಲೆಯೇ ವಿಶೇಷ ಕೋರ್ಟ್ ತೀರ್ಪು ನೀಡಬೇಕು ಎಂದು ಹೇಳಿತ್ತು.
ಆರೋಪಿಗಳ ಪರ ವಕೀಲರು ಬೇಲ್ ಬಾಂಡ್ ಅನ್ನು ಸಿದ್ದಪಡಿಸುತ್ತಿದ್ದಾರೆ. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದರೆ ಸಿಬಿಐ ವಿಶೇಷ ಕೋರ್ಟ್ ನಲ್ಲಿಯೇ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ. ಮೂರು ವರ್ಷಕ್ಕಿಂತ ಹೆಚ್ಚು ಶಿಕ್ಷೆ ವಿಧಿಸಿದರೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಇದೆ.
ಆಡ್ವಾಣಿ, ಉಮಾ ಭಾರತಿ, ನೃತ್ಯ ಗೋಪಾಲ್ ದಾಸ್, ಕಲ್ಯಾಣ್ ಸಿಂಗ್, ಮುರಳಿ ಮನೋಹರ ಜೋಶಿ ಸೇರಿದಂತೆ ಆರು ಆರೋಪಿಗಳಿಗೆ ಕೋರ್ಟ್ ವಿನಾಯ್ತಿ ನೀಡಿದ್ದು, ಉಳಿದ 26 ಮಂದಿ ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದಾರೆ.
ಈ ಹಿಂದೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಮಸೀದಿ ಧ್ವಂಸ ತಪ್ಪು ಎಂದು ತಿಳಿಸಿತ್ತು. ಸಾಕ್ಷ್ಯದ ಆಧಾರದ ಮೇಲೆಯೇ ವಿಶೇಷ ಕೋರ್ಟ್ ತೀರ್ಪು ನೀಡಬೇಕು ಎಂದು ಹೇಳಿತ್ತು.
ಕೋರ್ಟ್ ಹಾಲ್ ನಲ್ಲಿ 18 ಮಂದಿ ಆರೋಪಿಗಳು ಹಾಜರಾಗಿದ್ದಾರೆ. ನಿನ್ನೆಯೇ ಕೋರ್ಟ್ ಹಾಲ್ ಗೆ ಬಂದು ಅಂತಿಮ ತೀರ್ಪು ಅನ್ನು ನ್ಯಾಯಾಧೀಶರು ಬರೆದಿರುವುದಾಗಿ ವರದಿ ವಿವರಿಸಿದೆ.
ಸುಮಾರು 28 ವರ್ಷಗಳ ಹಿಂದಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಬಗ್ಗೆ ಇಡೀ ದೇಶಾದ್ಯಂತ ಕುತೂಹಲದಿಂದ ಕಾಯುತ್ತಿದ್ದು, ಮುಂದೇನು ಎಂಬುದು ಕೋರ್ಟ್ ತೀರ್ಪಿನ ನಂತರ ತಿಳಿದು ಬರಲಿದೆ.
ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕೆಲವು ಆರೋಪಿಗಳು ಹಾಜರಾಗಿದ್ದಾರೆ. ಕೋರ್ಟ್ ಗೆ ವಿನಯ್ ಕಟಿಯಾರ್, ಧರ್ಮದಾಸ್, ಲಲ್ಲೂ ಸಿಂಗ್, ಪವನ್ ಪಾಂಡೆ, ಸಾಕ್ಷಿ ಮಹಾರಾಜ್, ರಾಮಮಂದಿರ ಕಾರ್ಯದರ್ಶಿ ಚಂಪತ್ ರಾಯ್ ಆಗಮಿಸಿರುವುದಾಗಿ ವರದಿ ತಿಳಿಸಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವುದಾಗಿ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ ತಿಳಿಸಿರುವುದಾಗಿ ವರದಿ ಹೇಳಿದೆ.
ಪ್ರಕರಣದ ಪ್ರಮುಖ ಆರೋಪಿಗಳಾದ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ ಸೇರಿದಂತೆ ಹಲವರು ಕೋರ್ಟ್ ಗೆ ಗೈರು ಹಾಜರಾಗಿದ್ದಾರೆ. ಇದರಲ್ಲಿ ಕೋವಿಡ್ 19 ದೃಢಪಟ್ಟಿರುವ ಕಲ್ಯಾಣ್ ಸಿಂಗ್ ಮತ್ತು ಉಮಾ ಭಾರತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ಘೋಷಣೆ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ಸುತ್ತ=ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್ ಗೆ 600 ದಾಖಲೆಗಳನ್ನು ಸಲ್ಲಿಸಿತ್ತು, 351 ಸಾಕ್ಷಿಗಳ ವಿಚಾರಣೆ ನಡೆಸಿತ್ತು. ಅಲ್ಲದೇ 48 ಮಂದಿ ವಿರುದ್ಧ ದೋಷಾರೋಪ ಹೊರಿಸಿದ್ದು, 28 ವರ್ಷಗಳ ವಿಚಾರಣೆಯ ಅವಧಿಯಲ್ಲಿ 16 ಆರೋಪಿಗಳು ಸಾವನ್ನಪ್ಪಿದ್ದಾರೆ. ಉಳಿದ 32 ಆರೋಪಿಗಳು ಕೋರ್ಟ್ ಗೆ ಹಾಜರಾಗುವಂತೆ ಆದೇಶ ನೀಡಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.