‌BBK11: ಬಿಗ್‌ಬಾಸ್‌ ನಿರ್ಧಾರಕ್ಕೆ ಅಗೌರವ.. ಮನೆಬಿಟ್ಟು ಹೋಗಲು ಸಿದ್ದವೆಂದ ತ್ರಿವಿಕ್ರಮ್

Team Udayavani, Dec 7, 2024, 5:18 PM IST

‌BBK11: ಬಿಗ್‌ಬಾಸ್‌ ನಿರ್ಧಾರಕ್ಕೆ ಅಗೌರವ.. ಮನೆಬಿಟ್ಟು ಹೋಗಲು ಸಿದ್ದವೆಂದ ತ್ರಿವಿಕ್ರಮ್

ಬೆಂಗಳೂರು: ಬಿಗ್‌ ಬಾಸ್‌ (Bigg Boss Kannada-11) ವಾರದ ಕತೆಯಲ್ಲಿ ಕಿಚ್ಚ ಸುದೀಪ್‌ (Kiccha Sudeep) ಈ ವೀಕೆಂಡ್‌ ನಾನಾ ವಿಚಾರದ ಬಗ್ಗೆ ಕ್ಲಾಸ್‌ ತೆಗೆದುಕೊಳ್ಳಲಿದ್ದಾರೆ.

ವಾರ ವಾರ ಕಳೆಯುತ್ತಿದ್ದಂತೆ ಬಿಗ್‌ ಬಾಸ್‌ ಮನೆಯಲ್ಲಿನ ಕೆಲವರ ವೈಯಕ್ತಿಕ ದ್ವೇಷಗಳ ಅಂತರ ಹೆಚ್ಚಾಗುತ್ತಿದೆ. ಗೌತಮಿ – ಮಂಜು ಒಂದು ಕಡೆ ಜತೆಯಾಗಿದ್ದರೆ ಇವರಬ್ಬರ ಜತೆಯೂ ಅಷ್ಟಕಷ್ಟಕ್ಕೆ ಎನ್ನುವಂತಿರುವ ಮೋಕ್ಷಿತಾ ಅವರ ಪರಿಸ್ಥಿತಿ ಮನೆಯಲ್ಲಿ ಬೇರೆಯೇ ರೀತಿಯಲ್ಲಿದೆ.

ಗೌತಮಿ ಅವರ ಜತೆ ಆಡೋದಾದ್ರೆ ತಾನು ಆಡೋದೆ ಇಲ್ಲ ಎಂದು ಮೋಕ್ಷಿತಾ ಕ್ಯಾಪ್ಟನ್ಸಿ ಟಾಸ್ಕ್‌ ನಿಂದಲೇ ಆಚೆ ಉಳಿದಿದ್ದರು. ನನಗೆ ನನ್ನ ಸ್ವಾಭಿಮಾನನೇ ಮುಖ್ಯವೆಂದ ಮೋಕ್ಷಿತಾಗೆ ಪಂಚಾಯ್ತಿಯಲ್ಲಿ ಕಿಚ್ಚ ಕ್ಲಾಸ್‌ ತೆಗೆದುಕೊಳ್ಳಲಿದ್ದಾರೆ.

ಅರ್ಥ ಆಯ್ತಾ, ಅರ್ಥ ಆಯ್ತಾ ಎಂದು ಊರಿಗೆಲ್ಲ ಹೇಳುವ ಒಬ್ಬರಿಗೆ ಇನ್ನು ಬಿಗ್‌ ಬಾಸ್ ರಿಯಲ್‌ ಗೇಮ್‌ ಏನು ಅಂಥ ಅರ್ಥನೇ ಆಗಿಲ್ಲವೆಂದು ಸುದೀಪ್‌ ಮೋಕ್ಷಿತಾ ಅವರ ನಿರ್ಧಾರದ ಬಗ್ಗೆ ಮಾತನಾಡಿದ್ದಾರೆ.

ಇನ್ನು ಶೋಭಾ ಶೆಟ್ಟಿ ಆಚೆ ಹೋದ ವಿಚಾರದಲ್ಲಿ ಗೌತಮಿ ಜತೆ ಮಾತನಾಡಿದ ತ್ರಿವಿಕ್ರಮ್‌ ಅವರಿಗೆ ಬಿಗ್‌ ಬಾಸ್‌ ನಿರ್ಧಾರಗಳ ಬಗ್ಗೆ ಗೌರವವಿಲ್ಲವೆಂದು ಸುದೀಪ್‌ ಹೇಳಿದ್ದಾರೆ.

ನೀವಿಬ್ಬರು ಬಿಗ್‌ ಬಾಸ್‌ನ ಜಡ್ಜ್‌ ಗಳು.. ಶೋಭಾ ಅವರು ಮಾಡಿದ್ದು, ಶೋಭಾ ಅವರು ಯಾಕೆ ಹೋದ್ರು.. ಎಂದು ಕೇಳಿದಾಗ ತ್ರಿವಿಕ್ರಮ್‌ ನಾನು ಕನ್‌ ಫ್ಯೂಷನ್‌ನಲ್ಲಿದ್ದೆ ಎಂದಿದ್ದಾರೆ. ಇದಕ್ಕೆ ಸುದೀಪ್‌ ಯಾಕೆ ಕನ್‌ ಫ್ಯೂಷನ್‌ ನಿಮ್ಮ ಎದುರಲ್ಲೇ ತಾನೇ ಆದದ್ದು ಎಂದಿದ್ದಾರೆ.

ನೀವು ಕೋಪ ಮಾಡಿಕೊಳ್ಳಲ್ಲ ಅಂದ್ರೆ ಎರಡು ನಿಮಿಷ ಮಾತನಾಡುತ್ತೇನೆ ಅಣ್ಣಾ. ನಿಮ್ಮ ಮುಂದೆ ತಲೆತಗ್ಗಿಸೋದರಲ್ಲಿ ನನ್ನಗೇನು ಇಲ್ಲ ಅಣ್ಣಾ. ನಾನು ಬಿಗ್‌ ಬಾಸ್‌ ಅಗೌರವ ಕೊಟ್ಟಿದ್ದೇನೆ ಅಂದ್ರೆ ಈಗಲೂ ನಾನು ಆಚೆ ಹೋಗಲು ರೆಡಿಯಾಗಿದ್ದೇನೆ ಎಂದು ತ್ರಿವಿಕ್ರಮ್‌ ಹೇಳಿದ್ದಾರೆ.

ನಾನು ಏನು ಮಾಡಬೇಕು ಅದನ್ನು ನನಗೆ ಬಿಡಿ. ನಿಮ್ಮ ಕೇಳಿ ನಾನು ಮಾಡ್ಕೋಬೇಕಾ? ನನ್ನ ಮುಂದೆ ತಲೆತಗ್ಗಿಸುವ ನನ್‌ ಮಗದ್‌ ನನ್ನ ಜೀವನದಲ್ಲಿ ಇಲ್ಲ. ಆ ತರಾ ಆಗಿದ್ರೆ ಅಂಥ ಹೇಳಬೇಡಿ. ಆ ತರಾ ಆಗಿದೆ ಎಂದು ಕಿಚ್ಚ ವಾರ್ನ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

6-mahadevapura

Mahalingpur: ಎರಡು ವರ್ಷದ ಮಹಾಲಿಂಗಪುರದ ನೂತನ ಬಸ್ ನಿಲ್ದಾಣದಲ್ಲಿ ನೂರೆಂಟು ಸಮಸ್ಯೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.