100ಕ್ಕೆ ಸೆನ್ಸಾರ್ ಆದ್ರೂ ಸದ್ಯ ಬಿಡುಗಡೆ ಭಾಗ್ಯವಿಲ್ಲ
Team Udayavani, Apr 8, 2020, 10:34 AM IST
ರಮೇಶ್ ಅರವಿಂದ್ ಅಭಿನಯಿಸಿ, ನಿರ್ದೇಶನ ಮಾಡಿರುವ ಮುಂಬರುವ ಚಿತ್ರ 100 ಎಲ್ಲ ಅಂದುಕೊಂಡಂತೆ ನಡೆದಿದ್ದರೆ ಇಷ್ಟೊತ್ತಿಗಾಗಲೇ ತೆರೆಗೆ ಬರಬೇಕಿತ್ತು. ಕೆಲ ತಿಂಗಳ ಹಿಂದೆಯೇ ಚಿತ್ರಕ್ಕೆ ಸೆನ್ಸಾರ್ ನಿಂದ ‘ಯು/ಎ’ ಪ್ರಮಾಣಪತ್ರ ಸಿಕ್ಕಿದ್ದು, ಇನ್ನೇನು ಚಿತ್ರದ ಬಿಡುಗಡೆಯ ದಿನಾಂಕವನ್ನು ನಿರ್ಧರಿಸಬೇಕು ಎನ್ನುವಷ್ಟರಲ್ಲಿ ಕೋವಿಡ್ 19 ಭೀತಿಯಿಂದ ದೇಶಾದ್ಯಂತ ಲಾಕ್ ಡೌನ್ ಜಾರಿಯಾಯಿತು.
ಹೀಗಾಗಿ ಅನಿವಾರ್ಯವಾಗಿ ಚಿತ್ರತಂಡ ‘100’ ಚಿತ್ರದ ಬಿಡುಗಡೆಯ ಯೋಜನೆಯನ್ನು ಮುಂದೂಡಿದೆ. ಚಿತ್ರರಂಗ ಮತ್ತೆ ಮೊದಲಿನಂತೆ ಚೇತರಿಸಿಕೊಳ್ಳುವುದಕ್ಕಾಗಿ ನಾವು ಕಾಯುತ್ತಿದ್ದೇವೆ. ಆ ನಂತರ ಚಿತ್ರದ ಬಿಡುಗಡೆ ಆಗಲಿದೆ ಎನ್ನುತ್ತಿವೆ ಚಿತ್ರತಂಡದ ಮೂಲಗಳು.
ಈ ಬಗ್ಗೆ ಮಾತನಾಡುವ ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ, ಚಲನಚಿತ್ರಗಳು ಪ್ರೇಕ್ಷಕರನ್ನು ರಂಜಿಸಲಿಕ್ಕಾಗಿ ಇದೆ. ನಾವು ಪ್ರೇಕ್ಷಕರ ಮುಂದೆ ನಮ್ಮ ಚಿತ್ರವನ್ನು ಬಿಡುಗಡೆ ಮಾಡಲು ಕಾತುರರಾಗಿದ್ದೇವೆ. ಆದರೆ ಪ್ರಸ್ತುತ ಎಲ್ಲೆಡೆ ಪರಿಸ್ಥಿತಿ ಕೋವಿಡ್ 19 ಕಾರಣದಿಂದಾಗಿ ವಿಕೋಪಕ್ಕೆ ಹೋಗಿದೆ. ಹೀಗಿರುವಾಗ, ನಮ್ಮ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದರೂ, ಬಿಡುಗಡೆಯ ದಿನಾಂಕವನ್ನು ನಿಗದಿಪಡಿಸುವ ಸ್ಥಿತಿಯಲ್ಲಿ ನಾವು ಇಲ್ಲ ಎಂದಿದ್ದಾರೆ.
ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ 100 ಸೈಬರ್ ಅಪರಾಧ ಆಧಾರಿತ ಚಿತ್ರವಾಗಿದ್ದು, ನಿರ್ದೇಶಕ ರಮೇಶ್ ಅರವಿಂದ್ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.