13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ
ಮಾ. 3 ವಿಶ್ವ ಕನ್ನಡ ಸಿನಿಮಾ ದಿನವೆಂದು ಘೋಷಣೆ: ಸಿಎಂ
Team Udayavani, Mar 4, 2022, 6:34 AM IST
ಬೆಂಗಳೂರು: ಕನ್ನಡದ ಮೊದಲ ಟಾಕಿ ಚಿತ್ರ ಸತಿ ಸುಲೋಚನೆ ಬಿಡುಗಡೆಯಾದ ಮಾ.3ರನ್ನು “ವಿಶ್ವ ಕನ್ನಡ ಸಿನಿಮಾ ದಿನ’ವಾಗಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಘೋಷಿಸಿದರು.
ನಗರದ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ಗುರುವಾರ ಹಮ್ಮಿಕೊಂಡ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡ ಚಲನಚಿತ್ರ ರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಹುಟ್ಟೂರು ಕಣಗಾಲ್ ನಲ್ಲಿ ಶಿಥಿಲಾವಸ್ಥೆಯಲ್ಲಿರುವ ಮನೆ ಸ್ಮಾರಕವಾಗಿ ರೂಪಿಸಲು ಹಾಗೂ ಬೆಂಗಳೂರಿನ ನಂದಿನಿ ಬಡಾವಣೆಯಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿ ಸ್ವಾಮ್ಯದ ಕನ್ನಡ ಚಲನಚಿತ್ರ ಅಮೃತೋತ್ಸವ ಭವನದಲ್ಲಿ ಚಿತ್ರ ಮಂದಿರವನ್ನು ನಿರ್ಮಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.
ಈ ಹಿಂದೆ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಘೋಷಣೆ ಮಾಡುವುದಾಗಿ ಘೋಷಣೆಯನ್ನು ಮಾಡಲಾಗಿತ್ತು. ಅದರ ಮುಂದುವರೆದ ಭಾಗವಾಗಿ 2023-24ರಲ್ಲಿ ಮೈಸೂರಿನಲ್ಲಿ ಚಲನಚಿತ್ರ ನಗರಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಕನ್ನಡ ಚಿತ್ರರಂಗವನ್ನು ಉಳಿಸಲು ಹೊಸ ತಂತ್ರಜ್ಞಾನ ಬಳಕೆ ಹಾಗೂ ಸ್ಥಳೀಯ ಪ್ರತಿಭೆಗೆ ಅವಕಾಶ ಲಭಿಸಲು ರಾಜ್ಯ ಸರ್ಕಾರ ಈ ದಿಕ್ಕಿನಲ್ಲಿ ಕನ್ನಡ ಚಿತ್ರರಂಗ ಹಿರಿಯರ ಜತೆ ಸೇರಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿದ್ದ ಚಿತ್ತೋತ್ಸವವನ್ನು ನಮ್ಮ ಅಧಿಕಾರಿಗಳ ಕಾರ್ಯಕ್ಷಮತೆಯಿಂದ ಕೇವಲ 35 ದಿನಗಳಲ್ಲಿ ಸಿನಿಮಾ ಹಬ್ಬ ಮಾಡುವ ಕಾರ್ಯಕ್ರಮ ಕಾರ್ಯಗತವಾಗಿದೆ. ದೇಶದಲ್ಲಿ ಹೊಸದಿಲ್ಲಿ , ಕೋಲ್ಕತಾ, ಗೋವಾ, ಕೇರಳ, ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುತ್ತಿದೆ. ಆ ಪೈಕಿ ಮುಂದಿನ ದಿನದಲ್ಲಿ ಬೆಂಗಳೂರು ಮೊದಲ ಸ್ಥಾನಕ್ಕೆ ಪಡೆಯುವಂತಾಗಬೇಕು. ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ನಡೆದರೆ ಕನ್ನಡ ಚಿತ್ರಗಳಿಗೆ ಅವಕಾಶ ಹೆಚ್ಚಲಿದೆ ಎಂದು ಹೇಳಿದರು.
ನಟ ದರ್ಶನ್ ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ನಟಿ ಡಾ.ಭಾರತಿ ವಿಷ್ಣುವರ್ಧನ್, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ ಪ್ರಿಯದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ತೋಟಗಾರಿಕಾ ಸಚಿವ ಮುನಿರತ್ನ ಮಾತನಾಡಿದರು.
ಕರ್ನಾಟಕ ಚಲಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿಗಳ ಪ್ರ. ಕಾರ್ಯದರ್ಶಿ ಮಂಜುನಾಥ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹರ್ಷ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್. ಜಯರಾಜ್ ಉಪಸ್ಥಿತರಿದ್ದರು.
ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ :
ರಾಜ್ಯ ಸರ್ಕಾರದಿಂದ ಈ ಹಿಂದೆ ಘೋಷಣೆ ಮಾಡಿದಂತೆ ಪುನೀತ್ ರಾಜ್ ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ವಿತರಿಸಲಿದೆ. ಈ ಕಾರ್ಯಕ್ರಮದ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ಮುಖ್ಯಮಂತ್ರಿನ ಬಸವರಾಜ್ ಬೊಮ್ಮಾಯಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಸಮಯ ನಟ ದರ್ಶನ ಸಭಾ ಕಾರ್ಯಕ್ರಮಕ್ಕೆ ಆಗಮಿಸಿದ್ದು, ವೇಳೆ ಸಭೀಕರು ಡಿ-ಬಾಸ್ ಎನ್ನುವ ಘೋಷಣೆ ಹಾಕಿದ್ದು, ತದನಂತರ ಸಿಎಂ ಅವರು ಮಾತನಾಡಲು ಪ್ರಾರಂಭಿಸಿದರೂ, ಪ್ರೇಕ್ಷಕರು ಘೋಷಣೆ ಹಾಕುವುದು ನಿಲ್ಲಿಸದ ಕಾರಣ ಭಾಷಣ ಅರ್ಧದಲ್ಲಿ ಬಿಟ್ಟು ಆಸನ ಸ್ವೀಕರಿಸಿದರು. ಈ ವೇಳೆ ದರ್ಶನ ಅಭಿಮಾನಿಗಳನ್ನು “ರಾಜ್ಯದ ಉನ್ನತವಾದ ಸ್ಥಾನದಲ್ಲಿರುವ ಮಹಾನ್ ವ್ಯಕ್ತಿ ಮಾತನಾಡುವ ಗೌರವಿಸುವುದು ಎಲ್ಲರ ಜವಾಬ್ದಾರಿ’ಎಂದು ಹೇಳುತ್ತಿದ್ದಂತೆ ಸಭೀಕರು ಮೌನವಹಿಸಿದರು. ಅನಂತರ ಸಿಎಂ ಅವರು ಮತ್ತೆ ಭಾಷಣವನ್ನು ಪ್ರಾರಂಭಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.