Kannada Movie: ನಿರಂಜನ್ ಶೆಟ್ಟಿಯ ʼ31 ಡೇಸ್ʼ ಚಿತ್ರ
Team Udayavani, Jan 4, 2025, 4:49 PM IST
“31ಡೇಸ್’ ಎಂಬ ಹೊಸ ಕನ್ನಡ ಚಿತ್ರ ನಿರ್ಮಾಣವಾಗುತ್ತಿದೆ. ಜಾಲಿಡೇಸ್ ಸಿನಿಮಾ ಖ್ಯಾತಿಯ ನಿರಂಜನ್ ಶೆಟ್ಟಿ ಈ ಚಿತ್ರದ ನಾಯಕ ನಟ. ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಗೊಂಡಿತು. ವಿ. ಮನೋಹರ್ ಅವರ ಸ್ವರ ಸಂಯೋಜನೆ, ಸಾಹಿತ್ಯ ಹಾಗೂ ಗಾಯನದಲ್ಲಿ ಈ ಹಾಡು ಮೂಡಿ ಬಂದಿದೆ. ಇದು ವಿ. ಮನೋಹರ್ ಅವರ 150ನೇ ಸಂಗೀತ ನಿರ್ದೇಶನದ ಸಿನಿಮಾ ಎಂಬುದು ವಿಶೇಷ.
ಗೀತೆಯ ಬಗ್ಗೆ ಮಾತನಾಡಿದ ವಿ. ಮನೋಹರ್, “ಇದು ಒಪೇರ ಶೈಲಿಯ ಹಾಡು. ಕನ್ನಡದಲ್ಲಿ ಈ ರೀತಿ ಬಂದಿದ್ದು ಇದೇ ಮೊದಲು. ನಿರಂಜನ್ ಅವರ ಒತ್ತಾಯಕ್ಕೆ ಮಣಿದು ಈ ಹಾಡಿನಲ್ಲಿ ಅಭಿನಯ ಕೂಡ ಮಾಡಿದ್ದೇನೆ’ ಎಂದರು.
“31 ದಿನಗಳಲ್ಲಿ ನಡೆಯುವ ಈಗಿನ ಕಾಲಘಟ್ಟದ ಪ್ರೇಮಕಥೆ. ಹಾಗಾಗಿ “31 ಡೇಸ್’ ಎಂದು ಹೆಸರಿಟ್ಟಿದ್ದೇವೆ. ಮಧ್ಯಂತರಕ್ಕೂ ಮುನ್ನ ಹದಿನೈದು ದಿನಗಳು ಹಾಗೂ ನಂತರ ಹದಿನೈದು ದಿನಗಳ ಕಥೆ ಸಾಗುತ್ತದೆ’ ಎನ್ನುವುದು ನಟ ನಿರಂಜನ್ ಮಾತಾಗಿತ್ತು.
ನಾಗವೇಣಿ ಎನ್. ಶೆಟ್ಟಿ ಈ ಚಿತ್ರಕ್ಕೆ ಹಣ ಹೂಡಿದ್ದು, ರಾಜ್ ರವಿಕುಮಾರ್ ಅವರ ನಿರ್ದೇಶನ ಚಿತ್ರಕ್ಕಿದೆ. ಪ್ರಜ್ವಲಿ ಸುವರ್ಣ ಚಿತ್ರಕ್ಕೆ ನಾಯಕಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.