“ಕಬ್ಜ’ ಮಾಡಲು ಹೊರಟ ಉಪ್ಪಿ-ಚಂದ್ರು ಜೋಡಿ

ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌

Team Udayavani, Sep 15, 2019, 3:02 AM IST

Kabza–first-look

ನಿರ್ದೇಶಕ ಆರ್‌.ಚಂದ್ರು ಹಾಗೂ ಉಪೇಂದ್ರ ಅವರ ಕಾಂಬಿನೇಶನ್‌ನಲ್ಲಿ ಮೂರನೇ ಸಿನಿಮಾ ಬರುತ್ತಿರುವ ವಿಚಾರವನ್ನು ನೀವು ಇದೇ ಬಾಲ್ಕನಿಯಲ್ಲಿ ಓದಿದ್ದೀರಿ. ಆಗ ಆ ಚಿತ್ರಕ್ಕೆ ಟೈಟಲ್‌ ಆಗಿರಲಿಲ್ಲ. ಈಗ ಚಿತ್ರಕ್ಕೆ ಟೈಟಲ್‌ ಫಿಕ್ಸ್‌ ಆಗಿದೆ. ಅದು “ಕಬ್ಜ’. ಹೌದು, ಉಪೇಂದ್ರ ಹಾಗೂ ಆರ್‌.ಚಂದ್ರು ಕಾಂಬಿನೇಶನ್‌ ಸಿನಿಮಾಕ್ಕೆ “ಕಬ್ಜ’ ಎಂಬ ಶೀರ್ಷಿಕೆ ಇಡಲಾಗಿದೆ. ಶೀರ್ಷಿಕೆ ಕೇಳಿದ ಮೇಲೆ ಇದೊಂದು ಆ್ಯಕ್ಷನ್‌ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಭೂಗತ ಜಗತ್ತಿನಲ್ಲಿ ಈ ಪದ ಹೆಚ್ಚು ಬಳಕೆಯಲ್ಲಿರುವುದರಿಂದ ನಿರ್ದೇಶಕ ಚಂದ್ರು, ಚಿತ್ರಕ್ಕೆ “ಕಬ್ಜ’ ಎಂಬ ಶೀರ್ಷಿಕೆ ಇಟ್ಟಿದ್ದಾರೆ. ಯಾರಧ್ದೋ ಜಾಗ ಅಥವಾ ವಸ್ತುವನ್ನು ಅತಿಕ್ರಮಣ ಮಾಡಿಕೊಳ್ಳುವುದಕ್ಕೆ ಕಬ್ಜ ಎಂಬ ಪದವೂ ಬಳಕೆಯಲ್ಲಿದೆ. ಚಂದ್ರು ಈಗ “ಕಬ್ಜ’ ಇಟ್ಟುಕೊಂಡು ರೌಡಿಸಂ ಹಿನ್ನೆಲೆಯಲ್ಲಿ ಕಥೆ ಹೇಳಲು ಹೊರಟಿದ್ದಾರೆ. ಚಿತ್ರದ ಫ‌ಸ್ಟ್‌ಲುಕ್‌ ಕೂಡಾ ಬಿಡುಗಡೆ ಮಾಡಿದ್ದು, ಕೈಯಲ್ಲಿ ಲಾಂಗ್‌ ಹಿಡಿದಿರುವ ಉಪೇಂದ್ರ ಗೆಟಪ್‌ ಇದು ಪಕ್ಕಾ ಆ್ಯಕ್ಷನ್‌ ಸಿನಿಮಾ ಎನ್ನುವಂತಿದೆ.

ಜೊತೆಗೆ ಉಪೇಂದ್ರ ಅವರ ಕಾಸ್ಟ್ಯೂಮ್‌ ಕೂಡಾ 80ರ ದಶಕವನ್ನು ಸೂಚಿಸುತ್ತಿದ್ದು, ಬೆಲ್‌ ಬಾಟಮ್‌ ಪ್ಯಾಂಟ್‌, ದೊಡ್ಡ ಕಾಲರ್‌ ಶರ್ಟ್‌ ಮೂಲಕ ಇದೊಂದು ರೆಟ್ರೋ ಸ್ಟೈಲ್‌ ಸಿನಿಮಾ ಎಂಬುದನ್ನೂ ತೋರಿಸುವಂತಿದೆ. ಈ ಹಿಂದೆ “ಐ ಲವ್‌ ಯು’ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಷ್ಟೇ ಬಿಡುಗಡೆ ಮಾಡಿದ್ದ ಚಂದ್ರು, ಈ ಬಾರಿ ಬರೋಬ್ಬರಿ ಏಳು ಭಾಷೆಗಳಲ್ಲಿ ತಮ್ಮ ಹೊಸ ಸಿನಿಮಾವನ್ನು ಬಿಡುಗಡೆ ಮಾಡಲಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಬೆಂಗಾಲಿ, ಮರಾಠಿ ಭಾಷೆಗಳಲ್ಲಿ ಈ ಚಿತ್ರವನ್ನು ಏಕಕಾಲಕ್ಕೆ ಬಿಡುಗಡೆಯಾಗಲಿದೆ.

ಈ ಮೂಲಕ ಚಂದ್ರು ಪ್ಯಾನ್‌ ಇಂಡಿಯಾದತ್ತ ಮುಖ ಮಾಡಿದ್ದಾರೆ. “ಐ ಲವ್‌ ಯು’ ಚಿತ್ರದ ನೂರನೇ ದಿನದ ಕಾರ್ಯಕ್ರಮದಲ್ಲಿ ಚಂದ್ರು, ತಮ್ಮ ಹೊಸ ಸಿನಿಮಾದ ಟೈಟಲ್‌ ಹಾಗೂ ಫ‌ಸ್ಟ್‌ಲುಕ್‌ ಲಾಂಚ್‌ ಮಾಡಿದ್ದಾರೆ. ಈ ವರ್ಷದ ಹಿಟ್‌ ಸಿನಿಮಾಗಳ ಸಾಲಿನಲ್ಲಿ ಉಪೇಂದ್ರ ನಾಯಕರಾಗಿರುವ “ಐ ಲವ್‌ ಯು’ ಚಿತ್ರ ಕೂಡಾ ಸೇರುತ್ತದೆ. ಆರ್‌.ಚಂದ್ರು, ನಿರ್ಮಿಸಿ, ನಿರ್ದೇಶಿಸಿದ ಈ ಚಿತ್ರ ಉಪೇಂದ್ರ ಅಭಿಮಾನಿಗಳಿಗೆ ಇಷ್ಟವಾಗುವ ಮೂಲಕ ಹಿಟ್‌ಲಿಸ್ಟ್‌ ಸೇರಿತ್ತು.

ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರ ಬಿಝಿನೆಸ್‌ ವಿಷಯದಲ್ಲೂ ನಿರ್ಮಾಪಕರಿಗೆ ದೊಡ್ಡ ಲಾಭವನ್ನೇ ತಂದುಕೊಟ್ಟಿದೆ. ದೊಡ್ಡ ಗ್ಯಾಪ್‌ನ ಬಳಿಕ ಬಂದ ಉಪೇಂದ್ರ ಅವರಿಗೂ “ಐ ಲವ್‌ ಯು’ ಯಶಸ್ಸಿನ ಖುಷಿ ಕೊಟ್ಟಿದ್ದು ಸುಳ್ಳಲ್ಲ. ಈಗ ಈ ಜೋಡಿ ಮೂರನೇ ಸಿನಿಮಾಕ್ಕೆ ಜೊತೆಯಾಗಿದೆ. “ಕಬ್ಜ’ ಕೂಡಾ ಬಿಗ್‌ಬಜೆಟ್‌ ಚಿತ್ರವಾಗಿದ್ದು, ಪ್ಯಾನ್‌ ಇಂಡಿಯಾ ಮಟ್ಟಕ್ಕೆ ಚಿತ್ರ ಮಾಡಲು ಚಂದ್ರು ಸಿದ್ಧತೆ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.