ಅಂಬರೀಶ್‌ ಆಗಿ ನಟಿಸೋದು ಸವಾಲಿನ ಕೆಲಸ

Team Udayavani, Jun 11, 2018, 10:52 AM IST

sudeep.jpg

ಅತ್ತ ಕಡೆ “ಅಂಬಿ ನಿಂಗೆ ವಯಸ್ಸಾಯ್ತೋ’, ಇತ್ತ ಕಡೆ “ಪೈಲ್ವಾನ್‌’, ಇನ್ನೊಂದು ಕಡೆ “ದಿ ವಿಲನ್‌’, ಮಗದೊಂದು ಕಡೆ “ಕೋಟಿಗೊಬ್ಬ-3′ … ಬಹುಶಃ ಯಾವ ವರ್ಷವೂ ಈ ಮಟ್ಟಿಗೆ ಸುದೀಪ್‌ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿರಲಿಲ್ಲ. ಆದರೆ, ಈ ವರ್ಷ ಸತತವಾಗಿ ಒಂದಲ್ಲ, ಒಂದು ಸಿನಿಮಾದ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಅಂಬರೀಶ್‌ ಅವರು ಪ್ರಮುಖ ಭೂಮಿಕೆಯಲ್ಲಿರುವ “ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದಲ್ಲಿ ಸುದೀಪ್‌ ಕೂಡಾ ನಟಿಸುತ್ತಿದ್ದಾರೆ.

ಅಂಬರೀಶ್‌ ಅವರ ಯೌವ್ವನದ ದಿನಗಳ ಪಾತ್ರವನ್ನು ಸುದೀಪ್‌ ಮಾಡುತ್ತಿದ್ದು, ಈಗಾಗಲೇ ಚಿತ್ರೀಕರಣ ಮುಗಿಸಿದ್ದಾರೆ ಸುದೀಪ್‌. ಈ ಮೂಲಕ “ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರೀಕರಣ ಮುಗಿದು ಹೋಗಿದೆ. ಸುದೀಪ್‌ ಇಲ್ಲಿ ಅಂಬರೀಶ್‌ ಆಗಿ ನಟಿಸಿರುವುದರಿಂದ ಸಾಕಷ್ಟು ಎಕ್ಸೆ„ಟ್‌ ಆಗಿದ್ದಾರೆ. ಚಿತ್ರೀಕರಣ ಮುಗಿದ ಹಿನ್ನೆಲೆಯಲ್ಲಿ ಸುದೀಪ್‌ ತಮ್ಮ ಅನುಭವನ್ನು ಹಂಚಿಕೊಂಡಿದ್ದಾರೆ. “ಯೌವ್ವನದ ಅಂಬಿಯಾಗಿ ನಟಿಸಿರುವುದು ಖುಷಿಕೊಟ್ಟಿದೆ.

ಅಂಬರೀಶ್‌ ಅವರ ಬಾಡಿ ಲಾಂಗ್ವೇಜ್‌, ಮ್ಯಾನರೀಸಂ ಅನ್ನು ಅನುಕರಿಸೋದು ನಿಜಕ್ಕೂ ಸವಾಲಿನ ಕೆಲಸ. ಅಂಬರೀಶ್‌ ಆಗೋದು ಎಷ್ಟು ಕಷ್ಟವೆಂದು ಮನವರಿಕೆಯಾಯಿತು. ಹಾಗಾಗಿ, ನನ್ನದೇ ಶೈಲಿಯಲ್ಲಿ ಪಾತ್ರ ನಿರ್ವಹಿಸಿದ್ದೇನೆ’ ಎಂದು ಹೇಳುವ ಅಂಬಿ ಪಾತ್ರದ ಹೇಳಿದ್ದಾರೆ. ಚಿತ್ರವನ್ನು ಜಾಕ್‌ ಮಂಜು ನಿರ್ಮಿಸುತ್ತಿದ್ದಾರೆ.  ಈ ಚಿತ್ರವನ್ನು ಗುರುದತ್‌ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಸುದೀಪ್‌ ಅವರ ಜೊತೆ ಸಹಾಯಕ ನಿರ್ದೇಶಕರಾಗಿದ್ದ ಗುರುದತ್‌ ಅವರಿಗೆ ನಿರ್ದೇಶಕರಾಗಿ ಇದು ಚೊಚ್ಚಲ ಸಿನಿಮಾ.  

ಚಿತ್ರದಲ್ಲಿ ಸುದೀಪ್‌ಗೆ ಜೋಡಿಯಾಗಿ ಶ್ರುತಿ ಹರಿಹರನ್‌ ನಟಿಸಿದ್ದಾರೆ. ಅರ್ಜುನ್‌ ಜನ್ಯಾ ಸಂಗೀತ, ಜೆಬಿನ್‌ ಜಾಕೋಬ್‌ ಛಾಯಾಗ್ರಹಣ ಚಿತ್ರಕ್ಕಿದೆ. ಇತ್ತ ಕಡೆ ಸುದೀಪ್‌ ಹಾಗೂ ಶಿವರಾಜಕುಮಾರ್‌ ಕಾಂಬಿನೇಶನ್‌ನಲ್ಲಿ ಬರುತ್ತಿರುವ “ದಿ ವಿಲನ್‌’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಟೀಸರ್‌ ಬಿಡುಗಡೆಯಾಗಲಿದೆ. ಇನ್ನು, ಸುಮಾರು 15 ದಿನಗಳ ಕಾಲ “ಪೈಲ್ವಾನ್‌’ ಚಿತ್ರದ ಚಿತ್ರೀಕರಣ ಕೂಡಾ ನಡೆದಿದೆ. ಇತ್ತ ಕಡೆ “ಕೋಟಿಗೊಬ್ಬ-3′ ಚಿತ್ರೀಕರಣಕ್ಕೆ ಅಣಿಯಾಗಿದೆ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.