900ಕ್ಕೂ ಅಧಿಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್‌ ನಿಧನ

ರವಿಚಂದ್ರನ್‌ ಅವರ ʼಪ್ರೇಮಲೋಕʼದಿಂದ ವೃತ್ತಿ ಬದುಕು ಆರಂಭ

Team Udayavani, Dec 27, 2023, 9:24 AM IST

tdy-2

ಬೆಂಗಳೂರು: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಸಿನಿರಂಗದಲ್ಲಿ ನೂರಾರು ಸಿನಿಮಾಗಳಲ್ಲಿ ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ್ದ ಜಾಲಿ ಬಾಸ್ಟಿನ್(57) ಹೃದಯಾಘಾತದಿಂದ ನಿಧನರಾಗಿದ್ದಾರೆ.

1966 ರಲ್ಲಿ ಕೇರಳದಲ್ಲಿ ಜನಿಸಿದ ಅವರು, ಬೆಂಗಳೂರಿನಲ್ಲೇ ಬೆಳೆದು ಶಿಕ್ಷಣವನ್ನು ಪಡೆದರು. ಆರಂಭದಲ್ಲಿ ಬೈಕ್‌ ಮೆಕ್ಯಾನಿಕ್‌ ಆಗಿ ಕೆಲಸ ಮಾಡುತ್ತಿದ್ದ‌ ಜಾಲಿ ಬಾಸ್ಟಿನ್‌ ಸಿನಿಮಾದಲ್ಲಿ ಬೈಕ್‌ ಸಾಹಸದ ದೃಶ್ಯಗಳನ್ನು ಮಾಡುತ್ತಿದ್ದರು. ರವಿಚಂದ್ರನ್‌ ಅವರ ʼಪ್ರೇಮ ಲೋಕʼ ಸಿನಿಮಾದಲ್ಲಿ ಡ್ಯೂಪ್‌ ಹಾಕಿದ್ದರು. ಈ ಸಮಯದಲ್ಲಿ ಅವರಿಗೆ 17 ವರ್ಷ ಆಗಿತ್ತು.

ನಿಧನವಾಗಿ ಸ್ಟಂಟ್‌ ಮನ್‌ ಆಗಿ ಸಿನಿಮಾರಂಗಕ್ಕೆ ಪರಿಚಯವಾದ ಜಾಲಿ ಬಾಸ್ಟಿನ್‌, ಅನೇಕ ಸಿನಿಮಾಗಳಲ್ಲಿ ಸಾಹಸ ನಿರ್ದೇಶಕನಾಗಿ ಕಾಣಿಸಿಕೊಂಡರು. ಸಾಹಸ ನಿರ್ದೇಶನದ ಜೊತೆಗೆ ಅವರು ʼನಿನಗಾಗಿ ಕಾದಿರುವೆʼ(2013) ಎನ್ನುವ ಸಿನಿಮಾವನ್ನು ನಿರ್ದೇಶನ ಮಾಡಿಯೂ ಗಮನ ಸೆಳೆದರು.

900 ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ಕೆಲಸ:  ಸಾಹಸ ನಿರ್ದೇಶನ ಹಾಗೂ ಸಾಹಸ ಕಲಾವಿದನಾಗಿ ಕನ್ನಡ ಮಾತ್ರವಲ್ಲದೆ, ತಮಿಳು, ಮಲಯಾಳಂ, ತೆಲುಗು ಹಾಗೂ ಹಿಂದಿ ಸಿನಿಮಾರಂಗದಲ್ಲಿ ಗುರುತಿಸಿಕೊಂಡ ಅವರು ಸುಮಾರು 900 ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.

‘ಪ್ರೇಮಲೋಕ’, ‘ಪುಟ್ನಂಜ’, ‘ಅಣ್ಣಯ್ಯ’, ‘ಶಾಂತಿ ಕ್ರಾಂತಿʼಸೇರಿದಂತೆ ಕ್ರೇಜಿಸ್ಟಾರ್‌ ರವಿಚಂದ್ರನ್‌ ಅವರ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದರು. ʼ ‘ಮಾಸ್ಟರ್​ ಪೀಸ್’, ʼʼಏಕಾಂಗಿʼʼಸೂಪರ್‌ ರಂಗʼ, ʼಗಾಳಿಪಟʼ, ʼಪಾಪ್‌ ಕಾರ್ನ್‌ ಮಂಕಿ ಟೈಗರ್‌ʼ, ʼಬೆಂಗಳೂರು ಡೇಸ್‌ʼ, ʼಆಪರೇಷನ್‌ ಜೀವʼ, ಅಂಗಮಲಿ ಡೈರೀಸ್(ಮಲಯಾಳಂ), ʼಅಣ್ಣಯ್ಯʼ,ʼ ನಕ್ಷತ್ರಂ(ತೆಲುಗು), ʼದಿ ಬಾಡಿ(ಹಿಂದಿ), ಇರಿದ(ತಮಿಳು) ಸೇರಿದಂತೆ 900 ಕ್ಕೂ ಹೆಚ್ಚಿನ ಸಿನಿಮಾಗಳಿಗೆ  ಸಾಹಸ ನಿರ್ದೇಶನ ಮಾಡಿದ್ದರು. ಸ್ಟಂಟ್‌ ಮನ್‌ ಆಗಿ ಅವರು ಕೆಲಸ ಮಾಡುವ ವೇಳೆ ಕೆಲವು ಸಲಿ ದೇಹಕ್ಕೆ ಪೆಟ್ಟು ಮಾಡಿಕೊಂಡಿದ್ದರು. ‘ಭಲೇ ಚತುರ’ ಸಿನಿಮಾದ ಸಾಹಸ ದೃಶ್ಯದ ವೇಳೆ ಅವರ ದೇಹಕ್ಕೆ ಸಾಕಷ್ಟು ಹಾನಿ ಆಗಿತ್ತು. ‘ಪುಟ್ನಂಜ’ ಸಿನಿಮಾ ಶೂಟ್ ವೇಳೆ ಬೈಕ್​ನಿಂದ ಬಿದ್ದು ಅವರ ಮುಖ ಹಾಗೂ ಕಾಲಿಗೆ ಪೆಟ್ಟಾಗಿತ್ತು.

ಅವರ ಪುತ್ರ ವಿಹಾನ್ ಪ್ರಜ್ವಲ್‌ ದೇವರಾಜ್‌ ಅವರ ʼಮಾಫಿಯಾʼ ಸಿನಿಮಾದಲ್ಲಿ ಅವರು ನಟಿಸಿದ್ದರು. ‌ಮತ್ತೊಬ್ಬ ಪುತ್ರ ಅಮಿತ್‌ ಕೂಡ ಸಾಹಸ ನಿರ್ದಶನದ ಹಾದಿಯಲ್ಲಿ ನಡೆಯುತ್ತಿದ್ದಾರೆ. ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನದ ಜೊತೆಗೆ ಒಳ್ಳೆಯ ಗಾಯಕರಾಗಿಯೂ ಗುರುತಿಸಿಕೊಂಡಿದ್ದರು. ಅವರದೇ ಆರ್ಕೇಸ್ಟ್ರಾ ತಂಡವನ್ನು ಕಟ್ಟಿಕೊಂಡಿದ್ದರು.

ಒಂದು ಕಾಲದಲ್ಲಿ ಜಾಲಿ ಬಾಸ್ಟಿನ್‌ ಅರವು ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಸಾಹಸ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದರು.

ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.