Darshan: ಮಾಧ್ಯಮದವರ ಬಳಿ ವಿಷಾದ ವ್ಯಕ್ತಪಡಿಸಿದ ನಟ ದರ್ಶನ್? ಪತ್ರ ವೈರಲ್
Team Udayavani, Apr 25, 2023, 10:39 AM IST
ಬೆಂಗಳೂರು: ನಟ ದರ್ಶನ್ ಕಳೆದ ಕೆಲ ಸಮಯದ ಹಿಂದೆ ಮಾಧ್ಯಮಗಳೊಂದಿಗೆ ಸ್ವಲ್ಪಮಟ್ಟಿಗಿನ ಎಡವಟ್ಟನ್ನು ಮಾಡಿಕೊಂಡಿರುವುದು ಗೊತ್ತೇ ಇದೆ. ಇದೀಗ ನಟ ದರ್ಶನ್ ಅವರು ಬರೆದಿದ್ದಾರೆ ಎನ್ನಲಾದ ವಿಷಾದ ವ್ಯಕ್ತಪಡಿಸಿದ ಪತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಾಧ್ಯಮದವರ ಬಗ್ಗೆ ನಟ ದರ್ಶನ್ ಅವರು ಕೆಲ ಸಮಯದ ಹಿಂದೆ ಹೇಳಿದ ಮಾತುಗಳು ಮಾಧ್ಯಮದವರಿಗೆ ನೋವುಂಟು ಮಾಡಿತ್ತು. ಇದಾದ ಬಳಿಕ ದೃಶ್ಯ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮಗಳು ದರ್ಶನ್ ಅವರ ಸಿನಿಮಾ ಸುದ್ದಿ ಸೇರಿದಂತೆ ಇತರೆ ಸುದ್ದಿಯನ್ನು ಪ್ರಸಾರ ಮತ್ತು ಪ್ರಕಟ ಮಾಡುವುದನ್ನು ನಿರ್ಬಂಧಿಸಿ ಅಘೋಷಿತವಾಗಿ ನಿರ್ಧರಿಸಲಾಗಿತ್ತು. ಇದೀಗ ನಟ ದರ್ಶನ್ ಅವರು ತಾವು ಆಡಿದ ಮಾತುಗಳು ಮಾಧ್ಯಮ ಮಿತ್ರರಿಗರ ನೋವುಂಟಾಗಿದ್ದರೆ ವಿಷಾದ ವ್ಯಕ್ತಪಡಿಸಿ ಬರೆದ ಪತ್ರವೊಂದು ಕೆಲ ಮಾಧ್ಯಮಗಳ ಕಚೇರಿಗೆ ತಲುಪಿದೆ ಎನ್ನಲಾಗಿದೆ.
ಪತ್ರದಲ್ಲಿ ಏನಿದೆ?
75 ವರ್ಷಗಳ ಇತಿಹಾಸವಿರುವ ಕನ್ನಡ ಚಿತ್ರರಂಗದಲ್ಲಿ ಅಳಿಸಲಾಗದ ಕೆಲವು ವ್ಯಕ್ತಿಗಳು ಮತ್ತು ಕೆಲವು ಹೆಸರುಗಳು ಮಾತ್ರ ಚರಿತ್ರೆಯಲ್ಲಿ ಉಳಿದಿರುತ್ತವೆ. ಆ ಸಾಲಿನಲ್ಲಿ, ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್, ತೂಗುದೀಪ ಶ್ರೀನಿವಾಸ್, ಬಾಲಕೃಷ್ಣ, ದಿನೇಶ್, ಇವರ ಸಮಕಾಲೀನ ದಿಗ್ಗಜರುಗಳನ್ನು ಕರ್ನಾಟಕದ ಜನತೆ ಮೆಟ್ಟಿಕೊಂಡು ಮೆರೆಸಿದರು. ಒಪ್ಪುವ ಮಾಧ್ಯಮಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರೋತ್ಸಾಹಿಸಿರುತ್ತೀರಿ. ಈ ಸಾಲಿನಲ್ಲಿ ಇದ್ದಂತಹ ಕನ್ನಡ ಚಿತ್ರರಂಗ ಮರೆಯಲಾಗದಂತಹ ನಟ ತೂಗುದೀಪ ಶ್ರೀನಿವಾಸ್ ರವರ ಕುಟುಂಬದಿಂದ ಬಂದಂತಹ ಸಣ್ಣ ಕುಡಿ ಸಾರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗ ನನ್ನನ್ನು ಆಶೀರ್ವದಿಸಿ ಪ್ರೋತ್ಸಾಹಿಸಿ ಹಲವಾರು ಬಾರಿ ನಾನು ಮಾಡಿರುವ ಪಾತ್ರಗಳ ಬಗ್ಗೆ ವಿಶ್ಲೇಷಣೆ ಮಾಡಿ, ನನ್ನ ಪಾತ್ರದಲ್ಲಿರುವ ತಪ್ಪುಗಳನ್ನು ತಿದ್ದಿ ಹೇಳಿರುವಿರಿ. ನಾನು ಸಹ ಮುಂದಿನ ದಿನಗಳಲ್ಲಿ ಮಾಡಿರುವಂತ ಚಿತ್ರಗಳಲ್ಲಿ ನನ್ನ ಪಾತ್ರಗಳಲ್ಲಿ ಬರುವ ತಪ್ಪುಗಳ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಿಕೊಂಡಿರುವನು.
ಅದೇ ರೀತಿಯಲ್ಲಿ. ನಿಜ ಜೀವನದಲ್ಲಿ ಸಹ ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ-ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ.
ಜೀವನವೆಂಬುದು ಬಹಳ ಅಮೂಲ್ಯ ಹಾಗೂ ತುಂಬ ಚಿಕ್ಕದ್ದು, ಈ ಚಿಕ್ಕ ಸಮಯದಲ್ಲಿ ನಗು ನಗುತಾ ಬಾಳೋಣ
ನನ್ನ ಈ ಭಾವನೆಯನ್ನು ನನ್ನ ಎಲ್ಲಾ ಮಿತ್ರರು ಹಾಗೂ ಅಭಿಮಾನಿಗಳು ಅರ್ಥ ಮಾಡಿಕೊಂಡು ಗೌರವಿಸಬೇಕೆಂದಿದ್ದಾರೆ.
ಪತ್ರದ ಕೆಳಗೆ ನಟ ದರ್ಶನ್ ಅವರ ಸಹಿಯಿದೆ. ಹಾಗಾಗಿ ಇದನ್ನು ಅವರೇ ಬರೆದಿದ್ದಾರೆ ಎನ್ನಲಾಗಿದೆ. ಸದ್ಯ ಅಭಿಮಾನಿಗಳ ವಲಯದಲ್ಲಿ ಈ ಪತ್ರ ವೈರಲ್ ಆಗಿದೆ.
#DarshanThoogudeepa apologies to media after realising his mistake
So he abused the media is true!@tv9kannada @publictvnews @btvnewslive pic.twitter.com/LpXE28rzSK
— 𝑲𝑩𝑶 | 𝑲𝒂𝒓𝒏𝒂𝒕𝒂𝒌𝒂 𝑩𝒐𝒙 𝑶𝒇𝒇𝒊𝒄𝒆 (@Karnatakaa_BO) April 25, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.