ನಿಮ್ಮ ಪ್ರೀತಿ ವಿಶ್ವಾಸಕ್ಕೆ ಸದಾ ಚಿರಋಣಿ….ಅಭಿಮಾನಿಗಳಿಗೆ ದಾಸನ ನಮನ
ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ದಾಖಲೆ ಪ್ರಮಾಣದಲ್ಲಿ ಅಮೋಘ ವೀಕ್ಷಣೆಯಾಗುತ್ತಿದೆ.
Team Udayavani, Feb 19, 2021, 12:57 PM IST
ಬೆಂಗಳೂರು : ನಿನ್ನೆಯಷ್ಟೆ ( ಫೆ.16 ) ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್, ತಮ್ಮ ಜನ್ಮದಿನಕ್ಕೆ ಶುಭ ಕೋರಿದ ಹಾಗೂ ಹುಟ್ಟುಹಬ್ಬದ ನಿಮಿತ್ತ ದಾನ ಧರ್ಮ ಮಾಡಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.
ಅಭಿಮಾನಿಗಳ ಅಚ್ಚುಮೆಚ್ಚಿನ ದಾಸ ಕಳೆದ ಕೆಲ ವರ್ಷಗಳಿಂದ ಅದ್ಧೂರಿ ಬರ್ತ್ ಡೇ ಆಚರಣೆಗೆ ವಿದಾಯ ಹೇಳಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಖರ್ಚು ಮಾಡುವ ಹಣ ಒಳ್ಳೆಯ ಕಾರ್ಯಗಳಿಗೆ ಸದ್ಭಳಕೆ ಮಾಡಿ. ಹಾಗೂ ಈ ಹಣದಲ್ಲಿ ಸಾಧ್ಯವಾದಷ್ಟು ಅನಾಥಾಶ್ರಮ, ವೃದ್ದಾಶ್ರಮಗಳಿಗೆ ದಾನ ಮಾಡಿ ಎಂದು ದಾಸ ಕರೆ ಕೊಟ್ಟಿದ್ದಾರೆ. ದರ್ಶನ್ ಅವರ ಈ ಮಾತು ಪರಿಪಾಲಿಸುತ್ತಿರುವ ಅಭಿಮಾನಿಗಳು, ಈ ಬಾರಿಯೂ ವಿದ್ಯಾರ್ಥಿಗಳಿಗೆ ಪೆನ್ನು-ಪುಸ್ತಕ ಹಾಗೂ ಅನಾಥಾಶ್ರಮಕ್ಕೆ ಸಾಕಷ್ಟು ದಾನ ನೀಡಿದ್ದಾರೆ. ಅದರ ಜತೆಗೆ ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಿತ್ಯ ನಡೆಯುವ ಅನ್ನದಾಸೋಹಕ್ಕೂ ಸೇವೆ ಮಾಡಿದ್ದಾರೆ.
ತಮ್ಮ ಅಭಿಮಾನಿಗಳ ಈ ಕಾರ್ಯಕ್ಕೆ ದರ್ಶನ ಅವರ ಹೃದಯ ತುಂಬಿ ಬಂದಿದೆ. ಇಂದು ಟ್ವಿಟರ್ ನಲ್ಲಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿರುವ ಅವರು, ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದ ಅಭಿಮಾನಿಗಳಿಗೆ ತನ್ನ ಅಭಿನಂದನೆಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಸದಾ ಚಿರಋಣಿ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ದರ್ಶನ್ ಅವರ ರಾಬರ್ಟ್ ಸಿನಿಮಾ ಬರುವ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ. ನಿನ್ನೆಯಷ್ಟೆ ಅವರ ಹುಟ್ಟುಹಬ್ಬದ ಉಡುಗೊರೆಯಾಗಿ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ದಾಖಲೆ ಪ್ರಮಾಣದಲ್ಲಿ ಅಮೋಘ ವೀಕ್ಷಣೆಯಾಗುತ್ತಿದೆ.
ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದ ಅಭಿಮಾನಿಗಳಿಗೆ ನನ್ನ ಅಭಿನಂದನೆಗಳು.
ನಿಮ್ಮ ಪ್ರೀತಿ-ವಿಶ್ವಾಸಕ್ಕೆ ಸದಾ ಚಿರಋಣಿ ?
— Darshan Thoogudeepa (@dasadarshan) February 17, 2021
ನನ್ನ ಕೋರಿಕೆಗೆ ಬೆಲೆಕೊಟ್ಟು ಸಹಕರಿಸಿದ ಅಭಿಮಾನಿ ವರ್ಗಕ್ಕೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಕೋರಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮಾಧ್ಯಮಗಳಿಗೂ, ರಾಜಕೀಯ ಗಣ್ಯರು, ಪ್ರೀತಿಯ ಅಭಿಮಾನಿಗಳಿಗೆ ನನ್ನ ಅನಂತ ಅನಂತ ವಂದನೆಗಳು.
ನಿಮ್ಮ ಪ್ರೀತಿ-ವಿಶ್ವಾಸಕ್ಕೆ ಸದಾ ಚಿರಋಣಿ ? pic.twitter.com/ThvWaqRw4b
— Darshan Thoogudeepa (@dasadarshan) February 17, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.