Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್
Team Udayavani, Nov 29, 2023, 4:53 PM IST
ಬೆಂಗಳೂರು: ಡಿಬಾಸ್ ದರ್ಶನ್ ಅಭಿನಯದ ಬಹುನಿರೀಕ್ಷಿತ ʼಕಾಟೇರʼ ಸಿನಿಮಾ ತಂಡ ಬುಧವಾರ(ನ29 ರಂದು) ಬಿಗ್ ಅಪ್ಡೇಟ್ ವೊಂದನ್ನು ನೀಡಿದ್ದು, ಆ ಮೂಲಕ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಉಡುಗೊರೆ ನೀಡಿದೆ.
ʼರಾಬರ್ಟ್ʼ ಬಳಿಕ ತರುಣ್ ಸುಧೀರ್ ʼದಾಸʼನ ಜೊತೆ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ. ಸಿನಿಮಾ ಅನೌನ್ಸ್ ಆದ ದಿನದಿಂದ ಒಂದಲ್ಲ ಒಂದು ಕಾರಣದಿಂದ ಸದ್ದು ಮಾಡುತ್ತಲೇ ಇದೆ. ಸಿನಿಮಾದಲ್ಲಿ ನಾಯಕಿಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಸಿನಿಮಾ ಅನೌನ್ಸ್ ಆದ ಚಿತ್ರೀಕರಣದ ಸಂದರ್ಭದಲ್ಲಿ ಪೋಸ್ಟರ್ ಗಳಿಂದ ಸದ್ದು ಮಾಡಿತ್ತು. ಇದಾದ ನಂತರ ಅಭಿಮಾನಿಗಳು ಟೀಸರ್ , ಹಾಡುಗಳು ಹಬ್ಬಕ್ಕೆ ರಿಲೀಸ್ ಆಗುತ್ತದೆ ಎಂದುಕೊಂಡಿದ್ದರು. ಆದರೆ ಸಿನಿಮಾ ತಂಡ ಹಬ್ಬಕ್ಕೆ ಸರ್ಪ್ರೈಸ್ ನೀಡುವ ಬದಲು ಮಂಗಳವಾರ(ನ.28 ರಂದು) ಅನೌನ್ಸ್ ವಿಡಿಯೋ ರಿಲೀಸ್ ಮಾಡುವುದಾಗಿ ಹೇಳಿತ್ತು.
ಅದರಂತೆ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಿ, ಬಿಗ್ ಸರ್ಪ್ರೈಸ್ ನೀಡಿದೆ. ದರ್ಶನ್ ಪಕ್ಕಾ ಲೋಕಲ್ ಹೈದನಾಗಿ, ಲುಂಗಿ ಸುತ್ತಿಕೊಂಡು ಧಮ್ ಎಳೆಯುವ ಖಡಕ್ ಲುಕ್ ನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಇದೇ ಡಿಸೆಂಬರ್ 29 ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ.
ಚಿತ್ರದಲ್ಲಿ 70-80ರ ದಶಕದ ಕತೆಯನ್ನು ʼಕಾಟೇರʼದಲ್ಲಿ ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ಕುಮಾರ್ ಗೋವಿಂದ್, ಜಗಪತಿ ಬಾಬು, ಶೃತಿ, ಶ್ರೀನಿವಾಸ್ ಮೂರ್ತಿ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.
ಚಿತ್ರಕ್ಕೆ ಸುಧಾಕರ್ ರಾಜ್ ಛಾಯಾಗ್ರಹಣ, ವಿ. ಹರಿಕೃಷ್ಣ ಸಂಗೀತ ಹಾಗೂ ಮಾಸ್ತಿ ಸಂಭಾಷಣೆಯಿದೆ. ನಿರ್ದೇಶಕ ಜಡೇಶ್ ಕುಮಾರ್ ಜೊತೆ ಸೇರಿ ತರುಣ್ ಕತೆ ಸಿದ್ಧಪಡಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಸಿನಿಮಾಕ್ಕೆ ಬಂಡವಾಳ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.