Sandalwood: ʼದಿ ಜಡ್ಜ್ ಮೆಂಟ್‌ʼ; ಇದು ಮಾಮೂಲಿ ಸಿನಿಮಾ ಅಲ್ಲ


Team Udayavani, May 14, 2024, 10:09 AM IST

Sandalwood: ʼದಿ ಜಡ್ಜ್ ಮೆಂಟ್‌ʼ; ಇದು ಮಾಮೂಲಿ ಸಿನಿಮಾ ಅಲ್ಲ

ʼದಿ ಜಡ್ಜ್ ಮೆಂಟ್‌ʼ ಹೀಗೊಂದು ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಕ್ರೇಜಿಸ್ಟಾರ್‌ ರವಿಚಂದ್ರನ್‌, ದಿಗಂತ್‌, ಧನ್ಯಾ ಸೇರಿದಂತೆ ಬಹುತಾರಾಗಣದ ಈ ಚಿತ್ರ ಮೇ 24ರಂದು ತೆರೆಗೆ ಬರುತ್ತಿದೆ. ಗುರುರಾಜ ಕುಲಕರ್ಣಿನಿರ್ದೇಶನದ ಈ ಚಿತ್ರದ ಮೇಲೆ ದಿಗಂತ್‌ ಭರ್ಜರಿ ನಿರೀಕ್ಷೆ ಇಟ್ಟಿದ್ದಾರೆ. ಚಿತ್ರದ ಕುರಿತ ಪ್ರಶ್ನೆಗಳಿಗೆ ಅವರು ಉತ್ತರವಾಗಿದ್ದಾರೆ.

ʼದಿ ಜಡ್ಜ್ ಮೆಂಟ್‌’ ಸಿನಿಮಾದಲ್ಲಿ ನಿಮ್ಮ ಪಾತ್ರ ಹೇಗಿದೆ?

ನಾನು ಇಲ್ಲಿಯವರೆಗೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರ ಸಿನಿಮಾ ದಲ್ಲಿದೆ. ಇಂದಿನ ಜನರೇಶನ್‌ ಬೆಂಗಳೂರಿ ನಂತಹ ಸಿಟಿಯಲ್ಲಿರುವ ಯುವಕರನ್ನು ಪ್ರತಿನಿಧಿಸುವಂತೆ ನನ್ನ ಪಾತ್ರವಿದೆ. ತನ್ನ ಇಷ್ಟದಂತೆ ಜೀವನ ನಡೆಸಲು ಹೊರಟ ಹುಡುಗನೊಬ್ಬನ ಜೀವನದಲ್ಲಿ ನಡೆಯುವ ಕೆಲವು ಅನಿರೀಕ್ಷಿತ ಘಟನೆಗಳ ಸುತ್ತ ನನ್ನ ಪಾತ್ರವಿದೆ.

ʼದಿ ಜಡ್ಜ್ ಮೆಂಟ್‌’ ಅಂದರೆ ಏನು?

ನನ್ನ ಪ್ರಕಾರ ʼದಿ ಜಡ್ಜ್ ಮೆಂಟ್‌’ ಒಂದು ಕೋರ್ಟ್‌ ರೂಂ ಡ್ರಾಮಾ. ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಅದನ್ನು ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ ನಿರ್ದೇಶಕ ಗುರುರಾಜ ಕುಲಕರ್ಣಿ. ಇಂದಿನ ಕಾನೂನು, ನ್ಯಾಯ ವ್ಯವಸ್ಥೆ ಎಲ್ಲದರ ಚಿತ್ರಣ ಈ ಸಿನಿಮಾದಲ್ಲಿದೆ.

ʼದಿ ಜಡ್ಜ್ ಮೆಂಟ್‌’ ಸಿನಿಮಾ ಒಪ್ಪಿಕೊಳ್ಳಲು ಕಾರಣ?

ಮೊದಲೇ ಹೇಳಿದಂತೆ, ನಾನು ಇಲ್ಲಿಯವರೆಗೆ ಮಾಡಿದ ಸಿನಿಮಾಗಳಿಗಿಂತ ವಿಭಿನ್ನ ಕಥೆ, ಪಾತ್ರ ಎರಡೂ ಈ ಸಿನಿಮಾದಲ್ಲಿದೆ. ರವಿಚಂದ್ರನ್‌ ಅವರಂಥ ದೊಡ್ಡ ನಟರ ಜೊತೆ ಅಭಿನಯಿಸುವ ಅವಕಾಶ. ಈ ಸಿನಿಮಾ ಒಪ್ಪಿಕೊಳ್ಳಲು ಕಾರಣವಾಯಿತು.

ರವಿಚಂದ್ರನ್‌ ಜೊತೆಗಿನ ಚಿತ್ರೀಕರಣದ ಅನುಭವ?

ನಾನು ರವಿ ಸರ್‌ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. ಮೊದಲ ಬಾರಿಗೆ ಈ ಸಿನಿಮಾ ದಲ್ಲಿ ಅವರೊಂದಿಗೆ ಅಭಿನಯಿ ಸುವ ಅವಕಾಶ ಸಿಕ್ಕಿದ್ದಕ್ಕೆ ತುಂಬಾ ಖುಷಿ ಯಾಗಿದೆ. ರವಿ ಸರ್‌ ಜೊತೆಗೆ ಶೂಟಿಂಗ್‌ ಮಾಡುವಾಗ, ಸಮಯ ಹೋಗುವುದೇ ಗೊತ್ತಾಗುವುದಿಲ್ಲ.

ಸಿನಿಮಾದಲ್ಲಿ ನಿಮ್ಮ ಪಾತ್ರಕ್ಕೆ ತಯಾರಿ ಹೇಗಿತ್ತು?

ಸಾಮಾನ್ಯವಾಗಿ ಪ್ರತಿ ಸಿನಿಮಾದ ಪಾತ್ರಗಳಿಗೂ ಅದರದ್ದೇ ಆದ ಒಂದಷ್ಟು ತಯಾರಿ ಇದ್ದೇ ಇರುತ್ತದೆ. ಆದರೆ ನಿಜ ಹೇಳಬೇಕೆಂದರೆ, ಈ ಸಿನಿಮಾಕ್ಕೆ ಅಷ್ಟೊಂದು ತಯಾರಿ ಮಾಡಿಕೊಂಡಿರಲಿಲ್ಲ. ಅದಕ್ಕೆ ಕಾರಣ ನಿರ್ದೇಶಕ ಗುರು ರಾಜ್‌. ಈ ಸಿನಿಮಾದ ಪ್ರತಿ ಪಾತ್ರಗಳು, ಸನ್ನಿವೇಶಗಳು ಹೇಗೆ ಬರಬೇಕು ಎಂಬುದರ ಬಗ್ಗೆ ಅವರಿಗೆ ಸ್ಪಷ್ಟತೆಯಿತ್ತು.

ಚಿತ್ರದ ಮೇಲೆ ನಿಮ್ಮ ನಿರೀಕ್ಷೆ ಹೇಗಿದೆ?

ನನ್ನ ಪ್ರಕಾರ, ʼದಿ ಜಡ್ಜ್ ಮೆಂಟ್‌’ ಮಾಮೂಲಿ ಎಂಟರ್‌ಟೈನ್ಮೆಂಟ್‌ ಸಿನಿಮಾಗಳ ಸಾಲಿಗೆ ಅಥವಾ ಯಾವುದೋ ಒಂದು ವರ್ಗಕ್ಕೆ ಸೇರುವ ಸಿನಿಮಾವಲ್ಲ. ಕನ್ನಡದ ಮಟ್ಟಿಗೆ ತುಂಬ ಅಪರೂಪವಾಗಿರುವ ಲೀಗಲ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಬಂದಿದೆ. ಇದರಲ್ಲೊಂದು ಒಳ್ಳೆಯ ವಿಷಯವಿದೆ. ಅದನ್ನು ಮನಮುಟ್ಟುವಂತೆ ನಿರ್ದೇಶಕರು ತೆರೆಮೇಲೆ ಹೇಳಿದ್ದಾರೆ.

ಟಾಪ್ ನ್ಯೂಸ್

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Rane-Kerala-Cm

Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manada Kadalu Movie: ಮನದ ಕಡಲಲಿ ಹೂ ದುಂಬಿ

Manada Kadalu Movie: ಮನದ ಕಡಲಲಿ ಹೂ ದುಂಬಿ

Sandalwood: ಹಾಡಲ್ಲಿ ಗರುಡ ಪುರಾಣ

Sandalwood: ಹಾಡಲ್ಲಿ ಗರುಡ ಪುರಾಣ

Sherr Kannada Movie: ಘರ್ಜಿಸಲು ಬಂದ ಶೇರ್‌

Sherr Kannada Movie: ಘರ್ಜಿಸಲು ಬಂದ ಶೇರ್‌

Actor Yash: ಈ ವರ್ಷವೂ ಯಶ್‌ ಬರ್ತ್‌ಡೇ ಆಚರಿಸಲ್ಲ

Actor Yash: ಈ ವರ್ಷವೂ ಯಶ್‌ ಬರ್ತ್‌ಡೇ ಆಚರಿಸಲ್ಲ

Kiccha-Sudeep

Sandalwood: ದರ್ಶನ್‌ಗೆ ಟಾಂಗ್‌ ಕೊಡುವ ಅಗತ್ಯ ನನಗಿಲ್ಲ: ನಟ ಸುದೀಪ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Assam; 4 villages in Chahar district child marriage free: CM himanta biswa

Assam; ಚಹಾರ್‌ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್‌

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

50 vehicles get punctured simultaneously on Mumbai-Nagpur highway

Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್‌ ಪಂಕ್ಚರ್‌

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.