ಕೇವಲ ಅರ್ಧ ಗಂಟೆಯಲ್ಲಿ ಆಕ್ಸಿಜನ್ ತಲುಪಿಸಿ ವ್ಯಕ್ತಿಯ ಪ್ರಾಣ ಉಳಿಸಿದ ನಟ ಜಗ್ಗೇಶ್
Team Udayavani, May 1, 2021, 7:14 PM IST
ಬೆಂಗಳೂರು: ನವರಸ ನಾಯಕ ಜಗ್ಗೇಶ್ ಅವರು ಕೋವಿಡ್ ಸಮಯದಲ್ಲಿ ತೊಂದರೆಯಲ್ಲಿದ್ದವರಿಗೆ ಸಹಾಯದ ಹಸ್ತ ಚಾಚುತ್ತಿದ್ದಾರೆ. ಈ ಮೂಲಕ ಸಾಕಷ್ಟು ಜನರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ.
ಕೋವಿಡ್ ಸೋಂಕಿನಿಂದ ಬಳಲುತ್ತಿರುವ ನಾಗೇಂದ್ರ ಭಟ್ ಎಂಬುವರಿಗೆ ಆಕ್ಸಿಜನ್ ಬೇಕಾಗಿತ್ತು. ಎಷ್ಟೇ ಪ್ರಯತ್ನ ಪಟ್ಟರು ಸಹ ಅವರಿಗೆ ಆಕ್ಸಿಜನ್ ಸಿಕ್ಕಿರಲಿಲ್ಲ. ಈ ವೇಳೆ ಭಟ್ ಅವರ ಮಗಳು ಜಗ್ಗೇಶ್ ಅವರ ಸಹಾಯ ಕೋರಿದ್ದಾರೆ. ಕೂಡಲೇ ಸ್ಪಂದಿಸಿರುವ ಜಗ್ಗೇಶ್ ಅರ್ಧ ಗಂಟೆಯಲ್ಲಿ ಆಕ್ಸಿಜನ್ ಸಿಲಿಂಡರ್ ತಲುಪುವಂತೆ ಮಾಡಿದ್ದಾರೆ. ಒಂದೆರಡು ಗಂಟೆ ತಡವಾಗಿದ್ದರೂ ಸಹ ನಾಗೇಂದ್ರ ಭಟ್ ಅವರ ಜೀವಕ್ಕೆ ಅಪಾಯವಿತ್ತಂತೆ. ಆದರೆ, ಜಗ್ಗೇಶ ಅವರ ಸೇವಾ ಮನೋಭಾವನೆಯಿಂದಾಗಿ ಒಂದು ವಿಘ್ನ ತಪ್ಪಿದಂತಾಗಿದೆ.
ನಾಗೇಂದ್ರ ಭಟ್ ಋತ್ವಿಕರು
ಶೃಂಗೇರಿ ಹರಿಹರಪುರ ಮಠದ ಹಿನ್ನೆಲೆಯವರು 1/2ಘಂಟೆ ತಡವಾಗಿದ್ದರೆ ಪ್ರಾಣಕ್ಕೆ ತೊಂದರೆ ಆಗುತ್ತಿತ್ತು!ಅವರ ಪುಟ್ಟ ಮಗಳು
ನನ್ನ ಹಿಡಿದುಬಿಟ್ಟಳು ವಿಘ್ನ ತಪ್ಪಿತು!
ನನ್ನ ಜೊತೆ ಭುಜಕೊಟ್ಟು ನಿಂತ #ಮಾದೇಗೌಡರು #ಶ್ರೇಯಸ್
#narayana ಆಸ್ಪತ್ರೆಯ ಡಾ:ಜಗದೀಶ್ @Srinidhibandri ರವರಿಗೆ ಹೃದಯಪೂರ್ವಕ ಧನ್ಯವಾದ? https://t.co/aHMIDu6BU1— ನವರಸನಾಯಕ ಜಗ್ಗೇಶ್ (@Jaggesh2) April 30, 2021
ಇನ್ನು ಕೊರೊನಾ ವೈರಸ್ ಮಿತಿಮೀರಿ ಹರಡುತ್ತಿದೆ. ಇದರಿಂದ ಅನೇಕ ಸೆಲೆಬ್ರಿಟಿಗಳು ಮನೆಯಲ್ಲೇ ಕೂತಿದ್ದಾರೆ. ಆದರೆ, ಕೆಲವೇ ಕೆಲವು ಸೆಲೆಬ್ರಿಟಿಗಳು ಮಾತ್ರ ಮನೆಯಿಂದ ಹೊರಬಂದು ಕೊರೊನಾ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಇದಕ್ಕೆ ನಟ ಜಗ್ಗೇಶ್ ಕೂಡ ಹೊರತಾಗಿಲ್ಲ.
ಅವರು ಕಳೆದ 20 ದಿನಗಳಿಂದ ಕೊರೊನಾ ರೋಗಿಗಳಿಗೆ ಸಹಾಯ ಮಾಡುತ್ತಿದ್ದಾರೆ.ಇತ್ತೀಚೆಗೆ ಜಗ್ಗೇಶ್ ಟ್ವೀಟ್ ಒಂದನ್ನು ಮಾಡಿದ್ದರು. ಈ ಟ್ವೀಟ್ನಲ್ಲಿ, ಮಾನ್ಯ ಮುಖ್ಯ ಮಂತ್ರಿಗಳ ಗಮನಕ್ಕೆ. ಕೊರೊನಾ ರೋಗಿ ಅಡ್ಮಿಟ್ ಆದ 2-3ದಿನಕ್ಕೆ ಸಾವು ಸಂಭವಿಸುತ್ತಿದೆ. ವೈದ್ಯರು ಯಾವ ರೀತಿ ಚಿಕಿತ್ಸೆ ನೀಡುತ್ತಾರೆ ಎಂಬುದು ಬಂಧುಗಳಿಗೆ ತಿಳಿಯದು. ಸಾವಾಗಿದೆ ಎಂದು ತಿಳಿಸುತ್ತಾರೆ ಆದರೆ ಮುಖ ನೋಡಲಾಗದು. ಕೆಲ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರೂ ಸಿಗುವುದಿಲ್ಲ ಎಂದು ಬರೆದುಕೊಂಡಿದ್ದರು.
ಈ ಟ್ವೀಟ್ಗೆ ನಿಮಗೆ ಚಿಕಿತ್ಸೆ ಬಗ್ಗೆ ಅನುಮಾನ ಇದ್ದರೆ PPE ಕಿಟ್ ಹಾಕಿಕೊಂಡು ಒಳಗೆ ಹೋಗಿ ನೋಡಿ ಬನ್ನಿ ಎಂದು ಅಭಿಮಾನಿಯೋರ್ವ ಕಮೆಂಟ್ ಹಾಕಿದ್ದ. ಇದಕ್ಕೆ ಜಗ್ಗೇಶ್ ಉತ್ತರ ನೀಡಿದ್ದಾರೆ.
20 ದಿನಗಳಿಂದ ಅದೇ ಕೆಲಸ ಮಾಡುತ್ತಿದ್ದೇನೆ. ನಿಮಗೆ ಧೈರ್ಯ ಇದ್ದರೆ ಬರಬಹುದು, ನಾನು ಕರೆದುಕೊಂಡು ಹೋಗುವೆ. ನಾರಾಯಣ ಆಸ್ಪತ್ರೆಯಲ್ಲಿ ಆಮ್ಲಜನಕ ಪಡೆದು ದೇವೆಗೌಡ ಬಂಕ್ ಹತ್ತಿರ ಕೊರೊನಾ ರೋಗಿಗೆ ಕೊಟ್ಟು ಬರುತ್ತಿರುವೆ. ನಿಮಗೆ ಆಗುತ್ತ ನನ್ನ ಸಹಾಯಕ್ಕೆ ಬರಲು ಎಂದು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ತಾವು ಎನು ಮಾಡುತ್ತಿದ್ದೇವೆ ಎಂಬುದನ್ನು ಜಗ್ಗೇಶ್ ಹೇಳಿಕೊಂಡಿದ್ದಾರೆ. ಜಗ್ಗೇಶ್ ಮಾಡುತ್ತಿರುವ ಕಾರ್ಯಕ್ಕೆ ಎಲ್ಲ ಕಡೆಗಳಿಂದ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.