Kannada film industry ಸುರಕ್ಷತೆ: ಸಿಎಂ ಭೇಟಿಯಾದ ನಟಿ ಸಂಜನಾ ಗಲ್ರಾನಿ
Team Udayavani, Sep 5, 2024, 4:47 PM IST
ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅವರು ಗುರುವಾರ(ಸೆ 5) ರಂದು ಸಿಎಂ ಸಿದ್ದರಾಮಯ್ಯ(Siddaramaiah) ಅವರನ್ನು ಭೇಟಿ ಮಾಡಿ ಕನ್ನಡ ಚಿತ್ರರಂಗದಲ್ಲಿ (Sandalwood ) ಕೆಲಸ ಮಾಡುತ್ತಿರುವವರ ಸುರಕ್ಷತೆಗಾಗಿ ಸಂಘ ರಚಿಸುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.
ಮಾಲಿವುಡ್(Mollywood) ಸಿನಿಮಾರಂಗದಲ್ಲಿ ಹೇಮಾ ಸಮಿತಿ ವರದಿ(Hema Committee Report) ಬಳಿಕ ದಿಗ್ಗಜ ಕಲಾವಿದರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಭಾರೀ ಸಡ್ಡು ಮಾಡುತ್ತಿರುವ ಬೆನ್ನಲ್ಲೇ ಟಾಲಿವುಡ್, ಕಾಲಿವುಡ್ ಹಾಗೂ ಸ್ಯಾಂಡಲ್ ವುಡ್‌ನ ಕೆಲ ಕಲಾವಿದರು ಕೂಡ ಹೇಮಾ ಸಮಿತಿಯಂತೆ ತಮ್ಮ ಚಿತ್ರರಂಗದಲ್ಲೂ ಒಂದು ಸಮಿತಿ ರಚನೆ ಆಗಬೇಕೆಂದು ಒಂದಾಗಿ ಧ್ವನಿಗೂಡಿಸಿದ್ದಾರೆ.
#WATCH | Bengaluru | Actor Sanjjanaa Galrani met Karnataka CM Siddaramaiah today and submitted a memorandum to form an association to ensure the safety of those working in the Kannada film industry
(Source: Sanjjanaa Galrani) pic.twitter.com/zcyi6qlWlQ
— ANI (@ANI) September 5, 2024
ಕನ್ನಡ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರೆ ಸಮಸ್ಯೆಗಳ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲು ಒಂದು ಸಮಿತಿ ರಚನೆ ಆಗಬೇಕೆಂದು ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ(ಫೈರ್) ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದೆ.
ಹಿರಿಯ ಸಾಮಾಜಿಕ ಕಾರ್ಯಕರ್ತೆ ವಿಜಯಮ್ಮ, ನಟ ಚೇತನ್ ನೇತೃತ್ವದ ಫೈರ್ ನಿಯೋಗದವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ, ಮಲಯಾಳಂ ಸಿನೆಮಾ ರಂಗದಲ್ಲಿ ನಟಿಯರ ಮೇಲಿನ ಲೈಂಗಿಕ ದೌರ್ಜನ್ಯ ಕುರಿತ ತನಿಖೆಗಾಗಿ ಸಮಿತಿ ರಚನೆ ಮಾಡಿದಂತೆ, ರಾಜ್ಯ ಸರ್ಕಾರವು ಸಮಿತಿ ರಚಿಸಿ, ಕನ್ನಡ ಚಿತ್ರರಂಗದಲ್ಲಿ ನಟಿಯರ ಮೇಲಿನ ಲೈಂಗಿಕ ದೌರ್ಜನ್ಯ… pic.twitter.com/y7LbTx7ERZ
— CM of Karnataka (@CMofKarnataka) September 5, 2024
ಈ ಪತ್ರಕ್ಕೆ ಅಧ್ಯಕ್ಷೆ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ಹಿಡಿದು ರಮ್ಯಾ, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಚೈತ್ರಾ ಜೆ ಆಚಾರ್, ಧನ್ಯಾ ರಾಮ್‌ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧ ಶ್ರೀನಾಥ್, ಕಿಶೋರ್, ನಿಶ್ವಿಕಾ ನಾಯ್ಡು, ವಿನಯ್ ರಾಜ್‌ಕುಮಾರ್, ಪವನ್ ಕುಮಾರ್, ನಟ ಸುದೀಪ್ ಸೇರಿದಂತೆ 153 ಮಂದಿ ಅರ್ಜಿಗೆ ಸಹಿ ಹಾಕುವ ಮೂಲಕ ಸಮಿತಿ ರಚನೆಗೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.