Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
Team Udayavani, Nov 19, 2024, 12:39 PM IST
ಬೆಂಗಳೂರು: ಸಿನಿಮಾ ನಿರ್ದೇಶಕನ (Film Director) ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ನಟ ತಾಂಡವ್ ರಾಮ್ (Thandav Ram) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜೋಡಿಹಕ್ಕಿ ಸೀರಿಯಲ್ (Jodi Hakki Serial) ಮೂಲಕ ಕಿರುತೆರೆಯಲ್ಲಿ ಮಿಂಚಿರುವ ತಾಂಡವ್ ರಾಮ್ ನಿರ್ದೇಶಕ ಭರತ್ ಅವರ ಮೇಲೆ ನಟ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಏನಿದು ಪ್ರಕರಣ?: ಕನ್ನಡದಲ್ಲಿ ʼಮುಗಿಲ್ ಪೇಟೆʼ ಎನ್ನುವ ಸಿನಿಮಾವನ್ನು ಮಾಡಿರುವ ನಿರ್ದೇಶಕ ಭರತ್ ನಾವುಂದ (Bharath Navunda) ಅವರ ಜತೆ ತಾಂಡವ್ ರಾಮ್ ಅವರು ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಿದ್ದ ಕಾರಣಕ್ಕೆ ಜಗಳ ಮಾಡಿದ್ದಾರೆ ಎನ್ನಲಾಗಿದೆ. ಮಾತಿನ ನಡುವೆ ತಾಂಡವ್ ರಾಮ್ ತಮ್ಮ ಲೈಸೆನ್ಸ್ ಗನ್‌ನಿಂದ ಒಂದು ಸುತ್ತ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ನಿರ್ದೇಶಕನನ್ನು ಬೆದರಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ತಾಂಡವ್ ರಾಮ್ ವಿರುದ್ಧ ದೂರು ದಾಖಲಿಸಿಕೊಂಡು ಚಂದ್ರ ಲೇಔಟ್ ಠಾಣಾ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ (ನ.18ರಂದು) ಈ ಘಟನೆ ನಡೆದಿದೆ. ಲೈಸೆನ್ಸ್ ಗನ್ ಸೀಜ್ ಮಾಡಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇದು ಉದ್ದೇಶ ಪೂರ್ವಕವಾಗಿವೆಸಗಿರುವ ಕೃತ್ಯವೆಂದು ಗೊತ್ತಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮೀಷನರ್ ಬಿ. ದಯಾನಂದ್ ಪ್ರಕರಣ ಸಂಬಂಧ ಹೇಳಿದ್ದಾರೆ.
ರವಿಚಂದ್ರನ್ ಅವರ ಹಿರಿ ಮಗ ಮನೋರಂಜನ್ ನಾಯಕನಾಗಿ ನಟಿಸಿದ್ದ ಮುಗಿಲ್‌ಪೇಟೆ ಸಿನಿಮಾವನ್ನು ಭರತ್ ಎಸ್ ನಾವುಂದ ನಿರ್ದೇಶನ ಮಾಡಿದ್ದಾರೆ. ಆದಾದ ಬಳಿಕ ಅಡಚಣೆಗಾಗಿ ಕ್ಷಮಿಸಿ’ಎನ್ನುವ ಸಿನಿಮಾವನ್ನು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.