ಮುಷ್ಕರ ನಿರತ ಸಾರಿಗೆ ನೌಕರರಿಗೆ ಯಶ್ ಬೆಂಬಲ:ಸಚಿವರ ಜತೆ ಮಾತುಕತೆ ನಡೆಸಿದ ರಾಕಿ ಭಾಯ್


Team Udayavani, Apr 15, 2021, 1:28 PM IST

yash

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರಕ್ಕೆ ರಾಕಿಂಗ್ ಸ್ಟಾರ್ ಯಶ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೆಎಸ್‍ಆರ್ ಟಿಸಿ ಹಾಗೂ ಬಿಎಂಟಿಸಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು, ಅವರ ಬೇಡಿಕೆಗಳ ಕುರಿತು ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ಜೊತೆ ಯಶ್ ಚರ್ಚಿಸಿದ್ದಾರೆ.

ಈ ಬಗ್ಗೆ ಇಂದು ತಮ್ಮ ಟ್ವಿಟರ್‍ ನಲ್ಲಿ ಪತ್ರವೊಂದನ್ನು ಪ್ರಕಟಿಸಿರುವ ರಾಕಿ ಬಾಯ್, ಸಾರಿಗೆ ನೌಕರರ ಬಗ್ಗೆ ತಮ್ಮ ಕಳಕಳಿ ವ್ಯಕ್ತಪಡಿಸಿದ್ದಾರೆ.

ಯಶ್ ಬರೆದ ಪತ್ರ :

‘ಇಂದು ನಿಮ್ಮ ಯಶ್ ಏನೇ ಆಗಿರಬಹುದು. ಅದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ. ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿ ಬರೋ ಪ್ರಯಾಣಿಕರಿಗೆ ಟ್ರೈನ್ ಮಿಸ್ ಆಗುತ್ತೇನೋ, ಆಫೀಸ್ ಗೆ ಲೇಟ್ ಆಗುತ್ತೇನೋ..ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೆ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ.’

‘ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ. ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸೈರಗೆ ನೌಕರುಗಳ ದಿನಚರಿ ಹೀಗೆ ಇರುತ್ತೆ. ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿದೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯ ವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವೂ ನಾನು ಹತ್ತಿರದಿಂದ ಬಲ್ಲವನು.’

‘ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿದೆ.’

‘ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ.’

‘ಸಮಾಧಾನದ ವಿಷಯ ಅಂದ್ರೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ, ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಗಳ ಬಗ್ಗೆ ಇದ್ದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡ್ತು.’ ಎಂದು ದೀರ್ಘವಾಗಿ ಬರೆದಿದ್ದಾರೆ. ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ’.

ಯಶ್ ಅವರು ಸಾಮಾಜಿಕ ಕಳಕಳಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಮುಷ್ಕರ ನಿರತ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಬಲವಾಗಿ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.