ಮುಂದುವರೆದ ‘ಅಮೃತಮತಿ’ ಪ್ರಶಸ್ತಿ ಬೇಟೆ: ಕನ್ನಡತಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ
Team Udayavani, Jul 8, 2021, 1:56 PM IST
ಬೆಂಗಳೂರು : ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರದ ಅಭಿನಯಕ್ಕಾಗಿ ಕನ್ನಡದ ನಟಿ ಹರಿಪ್ರಿಯಾ ಅವರಿಗೆ ಹಾಲಿವುಡ್ ನ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ.
ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣಗೊಂಡಿರುವ ‘ಅಮೃತಮತಿ’ ಚಿತ್ರ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗಳಲ್ಲಿ ಪ್ರದರ್ಶನ ಕಂಡಿದೆ. ಇದೀಗ ‘ಹಾಲಿವುಡ್ ಇಂಟರ್‌ನ್ಯಾಷನಲ್ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ನಟಿ ಹರಿಪ್ರಿಯಾಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಲಭಿಸಿದೆ.
ಹರಿಪ್ರಿಯಾ ಈ ಹಿಂದೆ ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿಯೂ ಅಮೃತಮತಿ ಚಿತ್ರದಲ್ಲಿನ ನಟನೆಗಾಗಿ ‘ಶ್ರೇಷ್ಠ ನಟಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಒಟ್ಟು ಮೂರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರು ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ.
‘ಅಮೃತಮತಿ’ಗೆ ಪ್ರಶಸ್ತಿಗಳ ಗೊಂಚಲು
ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ವಿದೇಶಿ ಭಾಷೆಯ ಚಿತ್ರ’ ಪ್ರಶಸ್ತಿ ಅಮೃತಮತಿ ಸಿನಿಮಾಕ್ಕೆ ಲಭಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ಚಿತ್ರ’ ಮತ್ತು ‘ಶ್ರೇಷ್ಠ ಚಿತ್ರಕತೆ’ ಪ್ರಶಸ್ತಿ ಲಭಿಸಿತ್ತು. ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ವಿಶೇಷ ಚಿತ್ರ ಮನ್ನಣೆಗೆ ಚಿತ್ರ ಪಾತ್ರವಾಗಿತ್ತು.
ಕನ್ನಡದ ಕವಿ ಜನ್ನ ರಚಿಸಿರುವ ‘ಯಶೋಧರಚರಿತೆ’ ಕಾವ್ಯವನ್ನು ಆಧರಿಸಿ ಅಮೃತಮತಿ ಸಿನಿಮಾ ತಯಾರಾಗಿದೆ. ಬರಗೂರು ರಾಮಚಂದ್ರಪ್ಪ ಅವರು ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ಸಂಕಲನಕಾರರಾಗಿ ಸುರೇಶ ಅರಸು, ಛಾಯಾಗ್ರಾಹಕರಾಗಿ ನಾಗರಾಜ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತಾ ಮಲ್ನಾಡ್ ಕಾರ್ಯ ನಿರ್ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.