ಕಂದನ ಜೊತೆಗಿನ ಮುದ್ದಾದ ಫೋಟೊ ಹಂಚಿಕೊಂಡ ನಟಿ ಮೇಘನಾ ರಾಜ್
Team Udayavani, Aug 2, 2021, 2:45 PM IST
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಮೇಘನಾ ರಾಜ್ ಅವರು ತಮ್ಮ ಮಗ ಜೂನಿಯರ್ ಜೊತೆಗಿನ ಸುಂದರವಾದ ಫೋಟೋ ಶೇರ್ ಮಾಡಿಕೊಂಡಿದ್ದಾರೆ.
ನಿನ್ನೆಯಷ್ಟೇ ಗೆಳೆಯರ ದಿನದಂದು ತಮ್ಮ ಪತಿ ದಿ. ಚಿರಂಜೀವಿ ಸರ್ಜಾ ಜೊತೆಗಿನ ಫೋಟೋ ಶೇರ್ ಮಾಡಿಕೊಂಡಿದ್ದರು. ಇಂದು ತನ್ನ ಕಂದನ ಮುದ್ದಾದ ಪಿಕ್ ಹಂಚಿಕೊಂಡಿದ್ದಾರೆ.
ಈ ಫೋಟೋದಲ್ಲಿ ಮೇಘನಾ ಅವರು ಆಗಷ್ಟೇ ಎದ್ದಿರುವ ತಮ್ಮ ಮಗನನ್ನು ಖುಷಿಯಿಂದ ಅಪ್ಪಿಕೊಂಡಿರುವುದನ್ನು ಕಾಣಬಹುದಾಗಿದೆ. ಇತ್ತ ಜ್ಯೂನಿಯರ್ ಚಿರು ಕೂಡ ಅಮ್ಮನ ಆಲಿಂಗನದಿಂದ ಸಂತಸ ವ್ಯಕ್ತಪಡಿಸಿರುವುದನ್ನು ನೋಡಬಹುದು.
ಮಂಡೇ ಮಾರ್ನಿಂಗ್ಸ್ ಎಂದು ಬರೆದುಕೊಂಡು ಮೇಘನಾ ಮಗನ ಜೊತೆಗೆ ಸೆಲ್ಫಿ ತೆಗೆದುಕೊಂಡು ಅದನ್ನು ತಮ್ಮ ಇನ್ ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಗನ ಜೊತೆಗಿನ ಫೋಟೋ ಶೇರ್ ಮಾಡಿಕೊಳ್ಳುತ್ತಿದ್ದಂತೆಯೇ ಚಿರು ಹಾಗೂ ಮೇಘನಾ ಅಭಿಮಾನಿಗಳು ಕಾಮೆಂಟ್ ಗಳ ಸುರಿಮಳೆಯನ್ನೇ ಸುರಿಸಿದ್ದಾರೆ.
ಇನ್ನು ಚಿರಂಜೀವಿ ಸರ್ಜಾ ಅವರು ಇಹಲೋಕ ತ್ಯಜಿಸಿದ್ದರೂ ಮೇಘನಾ ರಾಜ್ ಅವರು ಒಂದಲ್ಲಾ ಒಂದು ರೀತಿಯಲ್ಲಿ ಪತಿಯನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಮೇಘನಾ ಕೆಲವು ದಿನಗಳ ಹಿಂದೆ ಅಭಿಮಾನಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದರು. ವರ್ಷಗಳ ನಂತರ ಕ್ಯಾಮೆರಾ ಎದುರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದರು. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
BBK11: ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.