ನಟಿ ರಾಗಿಣಿ ದ್ವಿವೇದಿ ಬಂಧನ ; ಪ್ರಮುಖ ಆರೋಪಿ ವಿರೇನ್ ಖನ್ನಾ ಅಂದರ್


Team Udayavani, Sep 4, 2020, 6:46 PM IST

ನಟಿ ರಾಗಿಣಿ ದ್ವಿವೇದಿ ಬಂಧನ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದೆ.

ಈ ವಿಚಾರವಾಗಿ ಇಂದು ಸಿಸಿಬಿ ಪೊಲೀಸರ ಮುಂದೆ ತನಿಖೆಗೆ ಹಾಜರಾಗಿದ್ದ ನಟಿ ರಾಗಿಣಿ ದ್ವಿವೇದಿ ಅವರನ್ನು ಇದೀಗ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ಯಾಂಡಲ್ ವುಡ್ ನಲ್ಲಿ ಮಾದಕ ದ್ರವ್ಯ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಳೆದ ಕೆಲವು ದಿನಗಳಿಂದ ತಮ್ಮ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇನ್ನೊಂದೆಡೆ ಡ್ರಗ್ಸ್ ಜಾಲ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ದೆಹಲಿ ಮೂಲದ ವಿರೇನ್ ಖನ್ನಾ ಎಂದು ಗುರುತಿಸಲಾಗಿದ್ದು ಈತ ದೊಡ್ಡ ದೊಡ್ಡ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಕುರಿತಾಗಿ ಇದೀಗ ಮಾಹಿತಿ ಲಭ್ಯವಾಗಿದೆ. ಇವೆಂಟ್ ಮ್ಯಾನೇಜ್ ಮೆಂಟ್ ಮಾಡುತ್ತಿದ್ದ ಖನ್ನಾ ಬೆಂಗಳೂರಿನಲ್ಲೇ ನೆಲೆಸಿದ್ದ. ಆತನನ್ನು ಇದೀಗ ದೆಹಲಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇವೆಂಟ್ ಮ್ಯಾನೇಜ್ ಮೆಂಟ್ ಮಾಡುತ್ತಿದ್ದ ಖನ್ನಾ ಬೆಂಗಳೂರಿನಲ್ಲೇ ನೆಲೆಸಿದ್ದ. ಆತನನ್ನು ಇದೀಗ ದೆಹಲಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಅವರ ಆಪ್ತ ರವಿಶಂಕರ್ ನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದ ಸಂದರ್ಭದಲ್ಲಿ ಮಾದಕ ದ್ರವ್ಯ ವ್ಯವಹಾರ ಚಟುವಟಿಕೆಗಳಲ್ಲಿ ರಾಗಿಣಿಗೂ ಸಂಬಂಧ ಇರುವ ಕುರಿತಾಗಿ ಮಾಹಿತಿ ಲಭ್ಯವಾಗಿತ್ತು.

ಬಳಿಕ ಸಿಸಿಬಿ ಪೊಲೀಸರು ಗುರುವಾರ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ರಾಗಿಣಿ ಅವರಿಗೆ ಬುದವಾರದಂದು ನೊಟೀಸ್ ಜಾರಿ ಮಾಡಿದ್ದರು. ಆದರೆ ರಾಗಿಣಿ ಅವರು ಅನ್ಯ ಕಾರಣಗಳನ್ನು ನೀಡಿ ಸೋಮವಾರದಂದು ವಿಚಾರಣೆಗೆ ಹಾಜರಾಗುವುದಾಗಿ ಪೊಲೀಸರಿಗೆ ತಿಳಿಸಿದ್ದರು.

ಇದನ್ನೂ ಓದಿ: ದಿಢೀರ್ ಶಾಕ್! ಬೆಳ್ಳಂಬೆಳಗ್ಗೆ ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ

ಆದರೆ ಇಂದು ಬೆಳಿಗ್ಗೆ ನಡೆದ ದಿಢೀರ್ ಬೆಳವಣಿಗೆಯಲ್ಲಿ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರ ಮನೆಯ ಮೇಲೆ ದಿಢೀರ್ ದಾಳಿ ನಡೆಸಿ ಶೋಧ ಕಾರ್ಯವನ್ನು ಕೈಗೊಂಡಿದ್ದರು. ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿಯನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಸತತ 7 ಗಂಟೆಗಳ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು ಅಂತಿಮವಾಗಿ ರಾಗಿಣಿಯನ್ನು ಇದೀಗ ಬಂಧಿಸಿದ್ದಾರೆ.

ಇದನ್ನೂ ಓದಿ: ಹೈಪ್ರೊಫೈಲ್ ಡ್ರಗ್ಸ್ ಜಾಲ: ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸಿಸಿಬಿ ವಶಕ್ಕೆ

ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಛೇರಿಯಲ್ಲಿ ರಾಗಿಣಿಯನ್ನು ತೀವ್ರ ವಿಚಾರಣೆ ನಡೆಸಿದ ಪೊಲೀಸರು ಸಾಯಂಕಾಲ ಈ ನಟಿಯನ್ನು ಬಂಧಿಸಿದ್ದಾರೆ. ಈ ನಡುವೆ ಬಂಧನದ ಭೀತಿಯಿಂದ ರಾಗಿಣಿ ಅವರು ತಮ್ಮ ವಕೀಲರ ಮೂಲಕ ಸಿಟಿ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಎಸಿಪಿ ಗೌತಮ್ ಅವರು ರಾಗಿಣಿಯ ವಿಚಾರಣೆಯನ್ನು ನಡೆಸಿದ್ದರು.

ಇದನ್ನೂ ಓದಿ: ಡ್ರಗ್ಸ್ ಜಾಲ: 25 ಸಾವಿರ ಸಂಬಳದ ರವಿಶಂಕರ್ ರಾಗಿಣಿಗಾಗಿ ದಿನಕ್ಕೆ ಎಷ್ಟು ಖರ್ಚು ಮಾಡ್ತಿದ್ದ ?

ನಟಿ ರಾಗಿಣಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಅವರನ್ನು ವಿಡಿಯೋ ಕಾನ್ಫೆರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೊಪ್ಪಿಸುವಂತೆ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆಗಳಿವೆ.

 

ಟಾಪ್ ನ್ಯೂಸ್

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.