ನಟ ದರ್ಶನ ವಿರುದ್ಧ ನಟಿ ರಕ್ಷಿತಾ ಆಕ್ರೋಶ
Team Udayavani, Jul 18, 2021, 2:21 PM IST
ಬೆಂಗಳೂರು : ತಮ್ಮ ಪತಿ ಪ್ರೇಮ್ ಬಗ್ಗೆ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತ ಪಡಿಸಿರುವ ನಟಿ ರಕ್ಷಿತಾ, ”ಯಾರಾದರೂ ಇನ್ನೊಬ್ಬ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಮಾತನಾಡುವ ಮುನ್ನ ಅವರು ತಮ್ಮ ಜೀವನದಲ್ಲಿ ಏನಾಗಿದ್ದಾರೆ ಎಂದು ನೋಡಿಕೊಳ್ಳಬೇಕು ಎಂದಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ರಕ್ಷಿತಾ ಪ್ರೇಮ್, ಜನಗಳ ಮುಂದೆ ಏನು ಮಾತನಾಡಬೇಕು, ಹೇಗೆ ಮಾತನಾಡಬೇಕು ಎಂದು ಅರಿತುಕೊಳ್ಳಬೇಕು” ಎಂದಿದ್ದಾರೆ.
”ಮುಖ ಇಲ್ಲದ ಫೇಸ್‌ಬುಕ್ ಪ್ರೊಫೈಲ್‌ಗಳು ನನ್ನನ್ನು ಟಾರ್ಗೆಟ್ ಮಾಡುತ್ತಿವೆ ಏಕೆ? ನಾನು, ನನ್ನ ಪತಿ ಪ್ರೇಮ್ ಪರ ಬೆಂಬಲಕ್ಕೆ ನಿಂತಿದ್ದೇನೆ. ಅದಕ್ಕೆ ಅವರೆಲ್ಲ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನಾನು ನನ್ನ ಪತಿಯ ಪರವಾಗಿ ನಿಂತರೆ ಉಳಿದವರನ್ನು ನಾನು ವಿರೋಧಿಸುತ್ತೇನೆ ಎಂದು ಹೇಗೆ ಪರಿಗಣಿಸಿದಿರಿ” ಎಂದು ರಕ್ಷಿತಾ ಪ್ರಶ್ನೆ ಮಾಡಿದ್ದಾರೆ.
”ಇನ್ನು ಮುಂದೆ, ನನ್ನ ಯೋಚನಾ ಕ್ರಮ ಯಾರಿಗಾದರೂ ಸರಿ ಎನಿಸಲಿಲ್ಲವೆಂದರೆ ಅದು ನಿಮ್ಮ ವ್ಯಕ್ತಿತ್ವದ ಸಮಸ್ಯೆಯೇ ಹೊರತು ನನ್ನ ಸಮಸ್ಯೆ ಅಲ್ಲ. ನಾನು ಪ್ರೇಮ್ ಬೆಂಬಲಕ್ಕೆ ನಿಲ್ಲುತ್ತೇನೆ. ಅದು ಅವರೊಬ್ಬರಿಗೆ ಅರ್ಥವಾದರೆ ಸಾಕು ಇನ್ಯಾರಿಗೂ ಅರ್ಥವಾಗುವ ಅವಶ್ಯಕತೆ ಇಲ್ಲ” ಎಂದಿದ್ದಾರೆ ಪ್ರೇಮ್.
”ಈಗ ನಮ್ಮ ಮದುವೆ ವಿಷಯದಲ್ಲಿ ಮಧ್ಯ ಪ್ರವೇಶ ಮಾಡಲು ಹೊರಟಿರುವ ಎಲ್ಲರಿಗೂ ನಾಚಿಕೆಯಾಗಬೇಕು” ಎಂದಿದ್ದಾರೆ ರಕ್ಷಿತಾ.
ನಿನ್ನೆ ಮಾಧ್ಯಮಗಳೊಟ್ಟಿಗೆ ಆಕ್ರೋಶದಿಂದ ಮಾತನಾಡಿದ್ದ ನಟ ದರ್ಶನ್, ‘ಜೋಗಿ ಪ್ರೇಮ್ ಏನು ದೊಡ್ಡ ಪುಡುಂಗಾ? ಅನಿಗೆ ಎರಡು ಕೊಂಬಿದ್ಯಾ? ಎಂದು ಆಕ್ರೋಶದಿಂದ ಪ್ರಶ್ನಿಸಿದ್ದರು. ಇದು ನಿರ್ದೇಶಕ ಪ್ರೇಮ್ ಹಾಗೂ ಅವರ ಪತ್ನಿ ರಕ್ಷಿತಾ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರೇಮ್ ಸಹ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಕುರಿತು ಉದ್ದದ ಫೋಸ್ಟ್ ಒಂದನ್ನು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.