ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ಸ್-ಸೆನ್ ಠಾಣೆಯಲ್ಲಿ ದೂರು
Team Udayavani, Jun 9, 2022, 8:30 PM IST
ಬೆಂಗಳೂರು: ಸಾಮಾಜಿಕ ಜಾಲತಾಣ ಇನ್ಸ್ಟ್ರಾಗ್ರಾಂನಲ್ಲಿ ಅಶ್ಲೀಲ ಕಮೆಂಟ್ ಹಾಕಿ ಟ್ಯಾಗ್ ಮಾಡಿದ ವ್ಯಕ್ತಿಯ ವಿರುದ್ಧ ನಟಿ ರಮ್ಯಾ ಕೇಂದ್ರವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಗುರುವಾರ ಕೇಂದ್ರ ವಿಭಾಗದ ಸೆನ್ ಠಾಣೆಗೆ ನಟಿ ರಮ್ಯಾ ಖುದ್ದು ಹಾಜರಾಗಿ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟ್ರಾಗ್ರಾಮ್ ಖಾತೆಯಲ್ಲಿ ರಮ್ಯಾ ದಿವ್ಯ ಸ್ಪಂದನಾ ಎಂಬ ಹೆಸರಿನ ಖಾತೆ ಹೊಂದಿದ್ದಾರೆ. ಇತ್ತೀಚೆಗೆ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಕನ್ನಡ ಚಲನಚಿತ್ರ ಚೆನ್ನಾಗಿದೆ ಎಂದು ಜೂ.6ರಂದು ರಮ್ಯಾ ಪ್ರಕಟಿಸಿದ್ದರು. ಜೂ.8ರಂದು ಪ್ರೀತಮ್ ಡಾಟ್ ಪ್ರಿನ್ಸ್ ಡಾಟ್ ಕೆ ಹೆಸರಿನ ಇನ್ಸ್ಟ್ರಾಗ್ರಾಂ ಖಾತೆ ಹೊಂದಿರುವ ವ್ಯಕ್ತಿ ರಮ್ಯಾ ಬಗ್ಗೆ ಅಶ್ಲೀಲ ಪದಗಳಿಂದ ಕಮೆಂಟ್ ಮಾಡಿ, ಪೋಸ್ಟ್ ಮಾಡಿ, ರಮ್ಯಾಗೆ ಟ್ಯಾಗ್ ಮಾಡಿದ್ದ.
ಈ ಹಿನ್ನೆಲೆಯಲ್ಲಿ “ನನ್ನ ಮಾನಕ್ಕೆ ಧಕ್ಕೆಯುಂಟು ಮಾಡಿದ ಆರೋಪಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ’ ರಮ್ಯಾ ದೂರಿನಲ್ಲಿ ಉಲ್ಲೇಖೀಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ರಮ್ಯಾ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಂಡಿರುವ ಕೇಂದ್ರ ವಿಭಾಗದ ಸೆನ್ ಠಾಣೆ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಪ್ರಕರಣ ದಾಖಲಿಸುವ ಮೊದಲು ನಟಿ ರಮ್ಯಾ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯನ್ನು ಭೇಟಿಯಾಗಿ ಕೆಲ ಹೊತ್ತು ಚರ್ಚಿಸಿದ್ದರು.ಆರೋಪಿಯನ್ನು ಬಂಧಿಸುವಂತೆ ಕಮಿಷನರ್ಗೂ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.