ಸಿನಿಮಾಟೋಗ್ರಫಿ ಕಾಯ್ದೆಗೆ ತಿದ್ದುಪಡಿ ವಿರುದ್ಧ ನಟಿ ರಮ್ಯಾ ಆಕ್ರೋಶ
Team Udayavani, Jul 1, 2021, 6:20 PM IST
ಬೆಂಗಳೂರು: ಸಿನಿಮಾಟೋಗ್ರಫಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ನಟಿ ರಮ್ಯಾ ಕಿಡಿ ಕಾರಿದ್ದಾರೆ.
‘ನಾವು ನೋಡುವ ವಿಚಾರದಲ್ಲಿ ಸರ್ಕಾರ ಯಾಕೆ ಹಸ್ತಕ್ಷೇಪ ಮಾಡಬೇಕು? ಕೇಂದ್ರದವರು ಎಲ್ಲಾ ಕಡೆ ಇದ್ದಾರೆ. ನಮ್ಮ ಎಲ್ಲಾ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ ಸಿ) ಈಗಾಗಲೇ ಎಲ್ಲವನ್ನು ನಿಯಂತ್ರಣ ಮಾಡುತ್ತಿದೆ” ಎಂದು ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿಯು ಅಂಗೀಕೃತಗೊಂಡರೆ ಸಿಬಿಎಫ್ ಸಿ ನೀಡಿದ ಪ್ರಮಾಣಪತ್ರವನ್ನು ಪ್ರಶ್ನಿಸುವ, ಪುನರ್ ಪರಿಶೀಲಿಸುವಂತೆ ಸೂಚಿಸುವ, ಬದಲಾಯಿಸುವಂತೆ ಸೂಚಿಸುವ ಅಧಿಕಾರವನ್ನು ಕೇಂದ್ರ ಸರ್ಕಾರ ಪಡೆದುಕೊಳ್ಳಲಿದೆ. ಹೊಸ ಕಾಯ್ದೆಯನ್ವಯ ಸರ್ಕಾರವೇ ಪರೋಕ್ಷವಾಗಿ ಸಿನಿಮಾಗಳ ಸೆನ್ಸಾರ್ ನಿರ್ಣಯ ಮಾಡಬಹುದಾದ ಹಕ್ಕು ಪಡೆದುಕೊಳ್ಳಲಿದೆ.
ಇನ್ನು ಸರ್ಕಾರದ ಈ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಿನಿಮಾ ರಂಗದ ಹಲವರು ಈಗಾಗಲೇ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಟ ಫರ್ಹಾನ್ ಅಖ್ತರ್, ಅನುರಾಗ್ ಕಶ್ಯಪ್, ಶಬಾನಾ ಅಜ್ಮಿ, ಹನ್ಸಲ್ ಮೆಹ್ತಾ, ದಿಬಾಕರ್ ಬ್ಯಾನರ್ಜಿ, ಜೋಯಾ ಅಖ್ತರ್, ಕಮಲ್ ಹಾಸನ್ ಸೇರಿದಂತೆ ಇನ್ನೂ ಹಲವರು ಸಿನಿಮಾಟೊಗ್ರಫಿ ಕಾಯ್ದೆ 2021 ತಿದ್ದುಪಡಿ ವಿರುದ್ಧ ಬಹಿರಂಗ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.